ಧಾರವಾಡ | ಜನರ ಸಮಸ್ಯೆಗಳಿಗೆ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

Date:

“ಪ್ರಜಾಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮ ಪಂಚಾಯತಿ ಕೇಂದ್ರಸ್ಥಾನಕ್ಕೆ ಕರೆತಂದು, ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ. ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹಾರ ಕಂಡುಹಿಡಿಯುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.

- Advertisement -

ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನ ಸಭಾ ಮತ ಕ್ಷೇತ್ರದ ಧಾರವಾಡ ತಾಲೂಕಿನ ಮನಸೂರು, ಮನಗುಂಡಿ, ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಪ್ರಜಾಸೇವಾ ಆಂದೋಲನ ಸಭೆ ಜರುಗಿಸಿ, ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

“ಗ್ರಾಮದ ಅಭಿವೃದ್ಧಿ ಹಾಗೂ ಜನರ ಕಷ್ಟಗಳ ನಿವಾರಣೆಗಾಗಿ ಯಾವುದೇ ರಾಜಕೀಯ ಪಕ್ಷದ ಭೇದಭಾವವಿಲ್ಲದೆ ಎಲ್ಲ ಸಮಾಜದ ಮುಖಂಡರು ಪಕ್ಷಾತೀತವಾಗಿ ಒಂದಾಗಿ ಬರಬೇಕು. ರಾಜಕೀಯ ಪಕ್ಷಗಳು ಯುವ ಪೀಳಿಗೆಗೆ ಸಮಾನತೆ ಪ್ರೀತಿ ಕೋಮು ಸೌಹಾರ್ದತೆ ಕೊಡುಗೆ ನೀಡಬೇಕು” ಎಂದು ಹೇಳಿದರು.

“ಐದು ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 60,000 ಕೋಟಿ ರೂಪಾಯಿಗಳನ್ನು ವರ್ಷಕ್ಕೆ ಒದಗಿಸಲಾಗುತ್ತಿದೆ. ಕೇವಲ ಧಾರಾವಾಡ ಜಿಲ್ಲೆಯಲ್ಲಿಯೇ 45 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ, ಒಟ್ಟಾರೆ ಸರ್ಕಾರದ ವತಿಯಿಂದ ರೂ. 995 ಕೋಟಿ ವೆಚ್ಚ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಧಾರವಾಡ ಜಿಲ್ಲೆಯ 4,04,827 ಮಹಿಳೆಯರಿಗೆ ಇಲ್ಲಿಯವರೆಗೆ ಒಟ್ಟಾರೆಯಾಗಿ ರೂ. 2,345 ಕೋಟಿ ಹಣಪಾವತಿಸಲಾಗಿದೆ” ಎಂದು ತಿಳಿಸಿದರು.

ಪ್ರತಿಯೊಂದು ಹಳ್ಳಿಯಲ್ಲೂ ಸಾರ್ವಜನಿಕರ, ಅಧಿಕಾರಿಗಳ ಸಮ್ಮುಖದಲ್ಲಿ ಬಸ್ ವ್ಯವಸ್ಥೆ, ರಸ್ತೆ ದುರಸ್ತಿ, ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಸಾರಾಯಿ ಅಂಗಡಿಗಳ ಬಂದ್ ಮಾಡುವ ಮನವಿಯನ್ನು ಆಲಿಸಿದ ಸಚಿವರು ಸಮಸ್ಯೆಗಳಿಗೆ ತಕ್ಷಣವೇ ಪರಿಹಾರಗಳನ್ನು ಒದಗಿಸಿದರು. ಕೆಲವು ಸಮಸ್ಯೆಗಳನ್ನು ಅಧಿಕಾರಿಗಳಿಗೆ ವೀಕ್ಷಿಸಿ, ಪರಿಶೀಲಿಸಿ ಬಗೆಹರಿಸುವಂತೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆಗಳಿಗೆ ಸರ್ಕಾರದ ಜೊತೆಗೆ ಸಾರ್ವಜನಿಕರ ಸಹಕಾರವು ಇರಬೇಕು. 396 ಹಳ್ಳಿಗಳಿಗೆ ಮಲಪ್ರಭಾ ನೀರು ತರುವ ಯೋಜನೆಯ ಪ್ರಾರಂಭಗೊಂಡಿದೆ. ಕೆಲವೊಂದು ಹಳ್ಳಿಗಳಲ್ಲಿ ಅರಣ್ಯ ಇಲಾಖೆಯ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಬಗೆಹರಿಸುವುದಾಗಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಧಾರವಾಡ ತಹಶೀಲ್ದಾರ್ ಡಾ. ಡಿ.ಎಚ್.ಹೂಗಾರ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಮನಸೂರು ಗ್ರಾಮ ಮುಖ್ಯಸ್ಥರು, ಪಂಚಾಯಿತಿಯ  ಪಿಡಿಒ ಬಿ.ಡಿ ಹಿರೇಮಠ, ಎಲ್ಲ ಇಲಾಖೆಯ ಜಿಲ್ಲಾಮಟ್ಟದ, ತಾಲೂಕು ಮಟ್ಟದ, ಗ್ರಾಮ ಮಟ್ಟದ ಅಧಿಕಾರಿಗಳು, ಗ್ರಾಮದ ಹಿರಿಯ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಅನ್ಯಭಾಷೆಗಳ ಪ್ರಭಾವವನ್ನು ಸ್ವೀಕರಿಸಿಯೂ ತನ್ನ ವೈಶಿಷ್ಟ್ಯ ಉಳಿಸಿಕೊಂಡ ಕನ್ನಡ: ಶ್ರೀಹರಿ ಧೂಪದ

ಅನ್ಯಭಾಷೆಗಳ ಪ್ರಭಾವವನ್ನು ತನ್ನ ಭಾಷಾ ಒಳಗೊಳ್ಳುವಿಕೆಯ ಮೂಲಕ ಸ್ವೀಕರಿಸುತ್ತಲೇ ತನ್ನದೇ ಆದ...

ವಿಜಯಪುರ | ಕಂದಗಲ್ ರಂಗಮಂದಿರದಲ್ಲಿ ಮಕ್ಕಳಿಂದ ಕನ್ನಡ ಗೀತೆಗಳ ಆಕರ್ಷಕ ನೃತ್ಯ ಪ್ರದರ್ಶನ

ವಿಜಯಪುರದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ...

ಬಾಗಲಕೋಟೆ | ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗೆ ಸಿದ್ಧತೆ; 17 ಕೇಂದ್ರಗಳಲ್ಲಿ 7,362 ಅಭ್ಯರ್ಥಿಗಳು ಭಾಗಿ

ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ ಎ, ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ನವೆಂಬರ್...