ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

Date:

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ ನಡೆದ ಪ್ರತಿರೋಧ ಸಮಾವೇಶದಲ್ಲಿ ವಿವಿಧ ಸಾಮಾಜಿಕ, ದಲಿತ, ರೈತ, ಮಹಿಳಾ, ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು, ಸಾಹಿತಿಗಳು ಮತ್ತು ಹೋರಾಟಗಾರರು ಭಾಗವಹಿಸಿದ್ದರು.

- Advertisement -

ಕಾರ್ಯಕ್ರಮದ ಆರಂಭದಲ್ಲಿ ಗಾಯಕ ಜನ್ನಿ ಕ್ರಾಂತಿಗೀತೆ ಹಾಡಿದರು. ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಕಾರ್ಯಕ್ರಮದಲ್ಲಿ ಮಾತನಾಡಿದ ಬಸವರಾಜ್ ಸುಳಿಬಾವಿ, ಡಾ. ಕಲಬುರ್ಗಿ ಹತ್ಯೆಯನ್ನು ಸ್ಮರಿಸಿ “ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಗಳ ವಿರುದ್ಧ ಪ್ರತಿರೋಧ ಅಗತ್ಯ ಎಂದು ಹೇಳಿದರು. ಧಾರವಾಡದ ಸೌಹಾರ್ದ ಪರಂಪರೆಯನ್ನು ಕಾಪಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಮಾತನಾಡಿ, “ಇದು ಭಾಷಣಗಳ ಕಾಲವಲ್ಲ, ಪ್ರತಿರೋಧದ ಕಾಲ” ಎಂದು ಹೇಳಿ, ಜನರ ನಡುವೆ ತೆರಳಿ ಬೀದಿಗಿಳಿದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂದು ಕರೆ ನೀಡಿದರು. SIR ಪ್ರಕ್ರಿಯೆಯಿಂದ ಬಡವರು, ದಲಿತರು, ಆದಿವಾಸಿಗಳ ಮತದಾನದ ಹಕ್ಕು ಕಳೆದುಹೋಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಒತ್ತಾಯಿಸಿದರು.

ಸಂವಿಧಾನ ರಕ್ಷಣೆಗೆ ಸಾಮೂಹಿಕ ಕರೆ

ಸಮಾವೇಶದಲ್ಲಿ ದೇಶದಲ್ಲಿ ಬೆಳೆಯುತ್ತಿರುವ ಸರ್ವಾಧಿಕಾರಿ ಪ್ರವೃತ್ತಿಗಳ ಕುರಿತು ಚರ್ಚೆ ನಡೆಯಿತು. ಫ್ಯಾಸಿಸಂ ಅನ್ನು ಕೇವಲ ಹಿಟ್ಲರ್ ಅಥವಾ ಮುಸೋಲಿನಿಯ ಕಾಲಕ್ಕೆ ಸೀಮಿತಗೊಳಿಸಿ ನೋಡುವುದು ಸರಿಯಲ್ಲ; ಜನರ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯನ್ನು ದುರ್ಬಲಗೊಳಿಸುವ ಯಾವುದೇ ಸರ್ವಾಧಿಕಾರಿ ರಾಜಕೀಯ ಪ್ರವೃತ್ತಿಯನ್ನು ಪ್ರಶ್ನಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಭಾರತವು “ಸರ್ವಜನಾಂಗದ ಶಾಂತಿಯ ತೋಟ” ಎಂಬ ಪರಿಕಲ್ಪನೆಯನ್ನು ಹೊಂದಿದ್ದು, ಒಂದು ಭಾಷೆ, ಒಂದು ಧರ್ಮ, ಒಂದು ಚುನಾವಣೆಯಂತಹ ಏಕರೂಪತೆಯ ಕಲ್ಪನೆಗಳು ದೇಶದ ವೈವಿಧ್ಯತೆಯ ಮೇಲೆ ಪರಿಣಾಮ ಬೀರಬಾರದು ಎಂದು ಸಮಾವೇಶದಲ್ಲಿ ಎಚ್ಚರಿಸಲಾಯಿತು.

ಸಂವಿಧಾನ, ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದತೆಯನ್ನು ರಕ್ಷಿಸಲು ಜನರು ಒಗ್ಗೂಡಬೇಕು ಎಂಬುದು ಸಮಾವೇಶದ ಪ್ರಮುಖ ಸಂದೇಶವಾಗಿತ್ತು. ರಾಜಕೀಯ ಪಕ್ಷಗಳ ಚುನಾವಣಾ ಹೋರಾಟಗಳ ಜೊತೆಗೆ ನಾಗರಿಕ ಸಮಾಜವೂ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು. ಜನರ ಹಕ್ಕುಗಳ ಮೇಲೆ ಪರಿಣಾಮ ಬೀರುವ ಯಾವುದೇ ಕ್ರಮದ ವಿರುದ್ಧ ಶಾಂತಿಯುತ ಹಾಗೂ ಪ್ರಜಾಸತ್ತಾತ್ಮಕ ರೀತಿಯಲ್ಲಿ ಧ್ವನಿ ಎತ್ತಬೇಕು ಎಂದು ಮುಖಂಡರು ಕರೆ ನೀಡಿದರು.

ಕಾರ್ಯಕ್ರಮದ ಅಂತ್ಯದಲ್ಲಿ “ಸಂವಿಧಾನವನ್ನು, ಪ್ರಜಾಪ್ರಭುತ್ವವನ್ನು ಮತ್ತು ನಮ್ಮ ಸ್ವಾತಂತ್ರ್ಯವನ್ನು ಕಾಪಾಡಲು ಜನರು ಬೀದಿಗಿಳಿದು ಹೋರಾಡಬೇಕು” ಎಂಬ ಒಗ್ಗಟ್ಟಿನ ಸಂದೇಶದೊಂದಿಗೆ ಸಮಾವೇಶ ಮುಕ್ತಾಯಗೊಂಡಿತು.

ನಟ-ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್, ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ, ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಡಾ. ಮೀನಾಕ್ಷಿ ಬಾಳಿ, ಚಿಂತಕ ಶಿವಸುಂದರ್, ನೂರ್ ಶ್ರೀಧರ್, ರೈತ ಮುಖಂಡ ಜಿ.ಎಂ. ವೀರಸಂಗಯ್ಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಸಮಾವೇಶದಲ್ಲಿ ಸರ್ವಾಧಿಕಾರಿ ಪ್ರವೃತ್ತಿಗಳ ವಿರುದ್ಧ ಎಚ್ಚರಿಕೆ ನೀಡಲಾಯಿತು. ಸಂವಿಧಾನ, ಸಮಾನತೆ ಮತ್ತು ಸೌಹಾರ್ದತೆಯನ್ನು ರಕ್ಷಿಸಲು ಜನರು ಒಗ್ಗೂಡಬೇಕು ಎಂಬ ಸಂದೇಶ ನೀಡಲಾಯಿತು. ಕೊಪ್ಪಳದ ರಂಗಧಾರ ರೆಪರ್ಟರಿ ತಂಡವೂ ಸಮಾವೇಶದಲ್ಲಿ ಭಾಗವಹಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ...

ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ನಕಾರ

"ಸಂಸ್ಕೃತಿಯ ರಕ್ಷಣೆಯು ಸಂವಿಧಾನದಿಂದ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕಾಗಿದೆ" ಎಂದು ಸುಪ್ರೀಂ ಕೋರ್ಟ್...