ಧಾರವಾಡ | ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹ

Date:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪೌರಕಾರ್ಮಿಕರ ಸಂಘ ತಹಸೀಲ್ದಾರ್‌ ಕಲಗೌಡ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪಾಲಿಕೆಯ ಕಾಯಂ, ನೇರ ಪಾವತಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ವೇಳೆ ಮಾತನಾಡಿದ ಪೌರಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಎಂ. ಗುಂಟ್ರಾಳ, 25 ವರ್ಷಗಳಿಂದ ಅವಳಿ ನಗರದ ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಸ್ವಂತ ಸೂರು ಇಲ್ಲವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಯಂ ಪೌರಕಾರ್ಮಿಕರಿಗೆ ನವನಗರದಲ್ಲಿ 122ನಿವೇಶನಗಳನ್ನು ನೀಡಲಾಗಿದೆ. ಮಂಟೂರ ರಸ್ತೆಯಲ್ಲಿ ನಿರ್ಮಿಸುತ್ತಿರುವ 320ಮನೆಗಳ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಯಲ್ಲಾಪುರ ಗ್ರಾಮದ ಪಾಲಿಕೆ ಜಾಗದಲ್ಲಿ ಗೃಹಭಾಗ್ಯ ಹಾಗೂ ರಾಜೀವ್‌ಗಾಂಧಿ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ, ಎಲ್ಲಾ ಪೌರಕಾರ್ಮಿಕರಿಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ದತ್ತಪ್ಪಾ ಆಪುಸಪೇಟ, ಲಕ್ಷ್ಮಿ ಬೇತಾಪಲ್ಲಿ, ರಾಜು ನಾಗರಾಳ, ಅನಿತಾ ಎನಗೊಂಡ, ಯಲ್ಲಪ್ಪ ಪಾಳೇದ, ರೇಣುಕಾ ನಾಗರಾಳ, ಕನಕಪ್ಪ ಕೊಟಬಾಗಿ, ಸುನೀಲ ದೊಡ್ಡಮನಿ, ಭಾಗ್ಯಲಕ್ಷ್ಮಿ ಮಾದರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...