ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

Date:

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯ ಅಳ್ನಾವರ ಪೊಲೀಸರು ಆರೋಪಿಯನ್ನು ಬಂಧಿಸಿ, ನಾಲ್ಕು ಮೋಟಾರ್ ಸೈಕಲ್‍ಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಸೆ.28 ರಂದು ಶೌಕತಲಿ ತಂದೆ ಅಲ್ಲಾಭಕ್ಷ ಮಕಾಂದಾರ, ಕತ್ರಿದಡ್ಡಿ, ಕಿತ್ತೂರು ತಾಲ್ಲೂಕು, ಬೆಳಗಾವಿ ಜಿಲ್ಲೆ ಅವರು ಅಳ್ನಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೆÇಲೀಸ್ ಎಂದು ಹೇಳಿ ಮೋಸ ಮಾಡಿ ರೂ. 15,700 ಹಣ ವಸೂಲಿ ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಸ್. ಬಿ. ಜಾಂಬೋಟಿ ಪಿಎಸ್‍ಐ, ಬಸವರಾಜ ಯದ್ದಲಗುಡ್ಡ ಪಿಎಸ್‍ಐ (ಎಲ್&ಓ), ಎಫ್. ಎಂ. ಮಂಟೂರ ಪಿಎಸ್‍ಐ(ಪ್ರಭಾರ) ಪಿ.ಎಸ್.ಐ ಇವರ ಪ್ರತ್ಯೇಕ ತಂಡ ರಚನೆ ಮಾಡಿ, ಮಾಹಿತಿ ಸಂಗ್ರಹಿಸಿ ಆರೋಪಿತನನ್ನು ಬಂಧಿಸಿ ಆರೋಪಿತನಿಂದ ಕೆಎ-22 ಇಆರ್-7446 ನೋಂದಣಿ ಸಂಖ್ಯೆಯ ಆಕ್ಟಿವಾ ಸ್ಕೂಟಿ (ಅಂದಾಜು ಮೌಲ್ಯ ರೂ.25,000), ಕೆಎ-22 ಎಸ್-4777 ಆಕ್ಟಿವಾ ಸ್ಕೂಟಿ (ರೂ.25,000), ಕೆಎ-25 ಎಚ್‍ಎ-9002 ಹೀರೋ ಪ್ಯಾಶನ್ ಪ್ರೊ ಬೈಕ್ (ರೂ.40,000) ಹಾಗೂ ಕೆಎ-25 ಇಜೆಡ್-9133 ಹೀರೋ ಎಚ್‍ಎಫ್ ಡಿಲಕ್ಸ್ ಬೈಕ್ (ರೂ.25,000) ಸೇರಿದಂತೆ ಒಟ್ಟು ನಾಲ್ಕು ವಾಹನಗಳು ಮತ್ತು ನಗದು ಹಣವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ ವಿನೋದ ಮುಕ್ತೇದಾರ ಅವರ ನೇತೃತ್ವದಲ್ಲಿ ಎಂ. ಎಂ. ತಹಶೀಲ್ದಾರ, ಎಸ್. ಬಿ. ಜಾಂಬೋಟಿ, ಬಸವರಾಜ ಯದ್ದಲಗುಡ್ಡ, ಎಫ್. ಎಂ. ಮಂಟೂರ, ಎ.ಬಿ ಸೊರಟೂರ, ಆರ್. ಎಸ್. ಮರಡಿ, ಮೀರಾಸಾಬ ಪಾಶ್ಚಾಪೂರ, ಸೋಮಪ್ಪ ರಾಠೋಡ, ಹುಲಿಯಪ್ಪ ಕುರುಬರ, ಮಂಜುನಾಥ ಕರಿಸಿರಿ, ಮಹೇಶ ಹರಿಜನ,  ಹಾಗೂ ಪೆÇಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಹಿರಿಯ ಅಧಿಕಾರಿಗಳು ಪ್ರಶಂಸಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಅಳ್ನಾವರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 76/2026ರಂತೆ ಬಿ.ಎನ್.ಎಸ್-2023ರ ಕಲಂ 318(4), 319(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...