ಧಾರವಾಡ | ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣ ಕಡಿಮೆ ಮಾಡುತ್ತವೆ: ಡಾ.ಗೀತಾ ಚಿಟಗುಬ್ಬಿ

Date:

ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಪ್ರಾದ್ಯಾಪಕಿ ಡಾ.ಗೀತಾ ಚಿಟಗುಬ್ಬಿ ತಿಳಿಸಿದರು.

- Advertisement -

ಧಾರವಾಡ ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ವ್ಯಾಪಾರ ಅಭಿವೃದ್ಧಿ ಕುರಿತು ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಣ್ಣ ಹಿಡುವಳಿದಾರ ರೈತರು ಆರ್ಥಿಕ ಸ್ಥಿತಿಸ್ಥಾಪಕತ್ವ ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ನೆರೆಹೊರೆಯವರು ಮತ್ತು ಪರಿಚಯಸ್ಥರಿಗೆ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಸಣ್ಣ ಪ್ರಮಾಣದ ಉದ್ಯಮಗಳನ್ನು ಪ್ರಾರಂಭಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಎನ್ ಎಂ ಮಕಾಂದಾರ ಮಾತನಾಡಿ, “ವಿದ್ಯಾರ್ಥಿಗಳು ಪೋಷಕರ ಅವಲಂಬನೆಯನ್ನು ಕಡಿಮೆ ಮಾಡಬೇಕು. ವಿದ್ಯಾರ್ಥಿಗಳು ಕಲಿಕೆಯ ಸಂದರ್ಭದಲ್ಲಿ ಗಳಿಕೆಯ ಪರಿಕಲ್ಪನೆಯನ್ನೂ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಹಕ ಬಳಕೆಯ ರಾಸಾಯನಿಕ ವಸ್ತುಗಳಾದ ಫೀನೈಲ್, ಗ್ಲಾಸ್ ಕ್ಲೀನರ್, ಹ್ಯಾಂಡ್ ವಾಶ್, ರೂಮ್ ಫ್ರೆಶ್ನರ್, ಲಿಕ್ವಿಡ್ ಸೋಪ್ ಉತ್ಪಾದನೆಯನ್ನು ಪ್ರದರ್ಶಿಸಲಾಯಿತು ಮತ್ತು ಅದನ್ನು ತಯಾರಿಸುವ ವಿಧಾನವನ್ನು ವಿದ್ಯಾರ್ಥಿಗಳಿಗೆ ಕುಮಾರ್ ಅರ್ಬಾಜ್ ಮತ್ತು ಕುಮಾರ್ ಸುದೀಪ್ ಅಂತಿಮ ವರ್ಷದ ಫ್ಯಾಮಿಲಿ ರೆಸೊರ್ಸ್ ಮ್ಯಾನೇಜ್‌ಮೆಂಟ್‌ ವಿದ್ಯಾರ್ಥಿಗಳು ಮಾಹಿತಿ ನೀಡಿ ತಯಾರಿಕಾ ವಿಧಾನಗಳನ್ನು ಡಾ. ಗೀತಾ ಚಿಟಗುಬ್ಬಿ ಅವರ ಮಾರ್ಗದರ್ಶನದಲ್ಲಿ ತಿಳಿಸಿದರು.

ಡಾ. ರಹತುನೀಸಾ, ಚೇರ್ಮನ್, ವಿಮೆನ್ ಎಂಪವರ್‌ಮೆಂಟ್‌ ಸೆಲ್, ಅತಿಥಿಗಳ ಪರಿಚಯ ಮಾಡಿದರು. ಕುಮಾರ್ ಶೋಯಿಬ್ ಅತ್ತಾರ ಕುರಾನ್ ಪಠಣ ಮಾಡಿದರು, ಕುಮಾರ್ ಪ್ರವೀಣ್ ಲಮಾಣಿ ಶ್ಲೋಕಗಳನ್ನು ಬೋಧಿಸಿದರು, ಪ್ರೊಫೆಸರ್ ಅಸ್ಮಾ ನದಾಫ್ ವಂದಿಸಿದರು ಹಾಗೂ ಕುಮಾರಿ ತೈಯ್ಯಬಾ ಮೊಮೀನ್ ನಿರೂಪಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಿಲ್ಲಾಸ್ಪತ್ರೆಯಲ್ಲಿ ಮಂಗಗಳ ಕಾಟ, ರೋಗಿಗಳು ಹೈರಾಣು

ಕಾರ್ಯಕ್ರಮದಲ್ಲಿ ಐಕ್ಯೂಎಸ್‌ಸಿ ಕೋಆರ್ಡಿನೇಟರ್ ಎನ್ ಬಿ ನಾಲತವಾಡ, ಪತ್ರಿಕೋದ್ಯಮ ಮುಖ್ಯಸ್ಥ ಡಾ. ಎಸ್ ಎಸ್ ಅಧೋನಿ, ಉಪನ್ಯಾಸಕ ಡಾ.ಎಸ್ ಎಸ್ ಬಳ್ಳಾರಿ, ಡಾ .ಎನ್ ವಿ ಗುದಗನವರ, ಆಸ್ಮಾ ನದಾಫ್, ಮುಬಾರಕ್ ಮುಲ್ಲಾ, ಎಂ.ಆರ್. ನರಗುಂದ್ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...