ಧಾರವಾಡ | ಸೌಜನ್ಯ ಪ್ರಕರಣ ಮರು ತನಿಖೆಗೆ ಶ್ರೀರಾಮ ಸೇನೆ ಆಗ್ರಹ

Date:

  • ʼಸೌಜನ್ಯ ಕೊಲೆ ಪ್ರಕರಣ ವಿಚಾರದಲ್ಲಿ ಸರ್ಕಾರ ಕ್ಯಾರೆ ಎನ್ನುತ್ತಿಲ್ಲʼ
  • ನಿರ್ದೋಷಿ ಸಂತೋಷ ರಾವ್‌ಗೆ ₹25 ಲಕ್ಷ ಪರಿಹಾರ ಘೋಷಿಸಬೇಕು.

ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಈ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣ ಸೇರಿದಂತೆ ಬೆಳ್ತಂಗಡಿ ವ್ಯಾಪ್ತಿಯ ಪೊಲೀಸ್‌ ಠಾಣೆಗಳಲ್ಲಿ ದಾಖಲಾದ ಅತ್ಯಾಚಾರ, ಮಹಿಳೆಯರ ಆತ್ಮಹತ್ಯೆ, ಹೆಣ್ಣುಮಕ್ಕಳು ಕಾಣೆ ಎಲ್ಲ ಪ್ರಕರಣಗಳನ್ನು ನ್ಯಾಯಾಧೀಶರ ನೇತೃತ್ವದಲ್ಲಿ ಮರು ತನಿಖೆ ಮಾಡಿಸಬೇಕು ಎಂದು ಶ್ರೀರಾಮಸೇನೆ ಕಾರ್ಯಕರ್ತರು ಆಗ್ರಹಿಸಿದರು.

ರಾಜ್ಯಾದ್ಯಂತ ಸುದ್ಧಿಯಾಗಿರುವ ಸೌಜನ್ಯ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀರಾಮ‌ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಿಬಿಐ ತನಿಖೆಗೆ ಆಗ್ರಹಿಸಿದರು.

ಮುಖಂಡರು‌ ಮಾತನಾಡಿ, “ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆಯಾಗಿ 13 ವರ್ಷಗಳು ಕಳೆದರೂ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಾಕಷ್ಟು ಪ್ರಮಾಣದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಇದರಿಂದ ಈ ಪ್ರಕರಣದ ಹಿಂದೆ ದೊಡ್ಡವರ ಮತ್ತು ದೊಡ್ಡವರ ಮಕ್ಕಳ ಕೈವಾಡವಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? 161 ತಾಲೂಕುಗಳು ಬರ ಘೋಷಣೆಗೆ ಅರ್ಹ, ಸಿಎಂಗೆ ಶಿಫಾರಸು: ಸಚಿವ ಕೃಷ್ಣಭೈರೇಗೌಡ

“ಸೌಜನ್ಯ ಅವರ ಮನೆಗೆ ಪೊಲೀಸ್‌ ಭದ್ರತೆ ಒದಗಿಸಬೇಕು. ಸೌಜನ್ಯ ಪ್ರಕರಣದ ನಿರ್ದೋಷಿ ಸಂತೋಷ ರಾವ್ ಅವರಿಗೆ ₹25 ಲಕ್ಷ ಪರಿಹಾರ ಘೋಷಿಸಬೇಕು. ಮಹಿಳೆಯರ ಮೇಲೆ ಕಾಳಜಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು” ಎಂದು ಮನವಿ ಮಾಡಿದರು.

ಈ ವೇಳೆ ಮಂಜು ಕಾಟಕರ, ರಾಜು ಖಾನಪ್ಪನವರ, ಅಣ್ಣಪ್ಪ ದಿವಟಗಿ, ವಿಶ್ವಾಸ ನಾಗಶೆಟ್ಟಿ, ಮೈಲಾರ ಗುಡ್ಡಪ್ಪನವರ, ಚಿದು ಕಲಾಲ, ಹನುಮಂತ ಉಣಕಲ್ಲ, ಯಮೋಜಿ, ಸೋಮು ಕಮತಿ, ಮಂಜು ಕವಲಗೇರಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ; ಪಾಲಿಕೆಯಿಂದ ಅಗತ್ಯ ಅನುದಾನದ ಭರವಸೆ 

ಧಾರವಾಡದ ಜರ್ನಲಿಸ್ಟ್ ಗಿಲ್ಡ್ ಕಟ್ಟಡ ನವೀಕರಣಕ್ಕೆ ಸಾಕಷ್ಟು ಪ್ರಯತ್ನ ಮಾಡಿದ್ದೆವು. ಇದೀಗ...

ಧಾರವಾಡ | ಬೇಸಿಗೆ ಆರಂಭದಲ್ಲೇ ಉಲ್ಬಣಿಸಿದ ನೀರಿನ ಸಮಸ್ಯೆ, ಗ್ರಾಮಗಳು ಕಂಗಾಲು

ಬೇಸಿಗೆ ಆರಂಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಮುಂದಿನ...

 ಧಾರವಾಡ | ಪ್ರಜಾಪ್ರಭುತ್ವದ ಪ್ರಥಮ ರೂವಾರಿ ಬಸವಣ್ಣ: ಬಸವರಾಜ ಹೊರಟ್ಟಿ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಅನುಷ್ಠಾನಗೊಳಿಸಿ, ಜಗತ್ತಿಗೆ...

ವಾಕ್ ಸ್ವಾತಂತ್ರ್ಯ ದುರ್ಬಳಕೆಯಲ್ಲಿ ಬಿಜೆಪಿಯೇ ನಂ.1: ಸಚಿವ ಸಂತೋಷ ಲಾಡ್

ಸಂವಿಧಾನದ ಮೂಲಕ ಅಂಬೇಡ್ಕರ್ ವಾಕ್‌ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಆದರೆ, ವಾಕ್‌ ಸ್ವಾತಂತ್ರ್ಯವನ್ನು...