ಧಾರವಾಡದ ಕಿಟೆಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಆರೋಪಗಳ ನಂತರ, ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
“ಮಾದಕ ದ್ರವ್ಯ ಪರೀಕ್ಷೆಯ ಫಲಿತಾಂಶ ನಕಾರಾತ್ಮಕವಾಗಿದ್ದರೂ ಗಾಂಜಾ ಸೇವನೆಯ ಆರೋಪ ಹೊರಿಸಿ ಕೆಲವು ಕಾನ್‌ಸ್ಟೆಬಲ್‌ಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರಿಂದ ಬಿಎಸ್‌ಸಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದರು” ಎಂದು ಹೇಳಿದರು.
#WATCH | Hubli-Dharwad, Karnataka | On Dharwad student suicide case, Police Commissioner N. Shashikumar says, “…Day before yesterday, a boy died by suicide by hanging himself after allegedly being harassed by a few constables who accused him of drug use and reportedly demanded… pic.twitter.com/Nvzc5O9Lsh
— ANI (@ANI) April 29, 2026
“ಆರೋಪದ ಹಿನ್ನೆಲೆಯಲ್ಲಿ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದ್ದು, ಹಿರಿಯ ಅಧಿಕಾರಿಯೊಬ್ಬರಿಗೆ ವಿವರವಾದ ತನಿಖೆ ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ… ವಿಚಾರಣಾ ವರದಿಯ ಸಂಶೋಧನೆಗಳ ಆಧಾರದ ಮೇಲೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಹಿನ್ನೆಲೆ
ಧಾರವಾಡದ ಕಿಟೆಲ್ ಕಾಲೇಜಿನ ಬಿಎಸ್‌ಸಿ ನಾಲ್ಕನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ(20)ಯನ್ನು ಪೊಲೀಸರು ಗಾಂಜಾ ಪ್ರಕರಣದಲ್ಲಿ ವಿಚಾರಣೆ ಮಾಡಿ, ಲಂಚ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಗಿರಿನಗರದ(ಪೃಥ್ವಿ ಗಾರ್ಡನ್ ಸಮೀಪ) ಮನೆಯ ಕೋಣೆಯೊಳಗೆ ಸೋಮವಾರ ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪೊಲೀಸರ ಕಿರುಕುಳ ಆರೋಪ
ಪ್ರಕರಣ ಸಂಬಂಧ ವಿಚಾರಣೆಯಲ್ಲಿ ಭಾಗಿಯಾಗಿದ್ದ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಇದೀಗ ಅಮಾನತು ಮಾಡಲಾಗಿದೆ.




