ಧಾರವಾಡ | ಕೃಷಿ ಇಲಾಖೆ ನೇಮಕಾತಿ ನಿಯಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಆಡಳಿತ ಭವನದ ಮುಂದೆ ಧರಣಿ

Date:

ಕೃಷಿ ಅಧಿಕಾರಿ ಹುದ್ದೆಗಳಿಗೆ ಕೃಷಿ ವಿವಿ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹಿಸಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 21ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರಗೊಂಡು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದಾರೆ.

- Advertisement -

ಕೃಷಿ ಅಧಿಕಾರಿ ನೇಮಕಾತಿಯಲ್ಲಿ ಇತರ ಪದವಿ ಪಡೆದವರಿಗೆ ಅವಕಾಶ ನೀಡಿರುವುದನ್ನು ಖಂಡಿಸಿ ಹಾಗೂ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ, ವಿದ್ಯಾರ್ಥಿಗಳು ವಿವಿ ಪ್ರವೇಶ ದ್ವಾರ ಹಾಗೂ ಆಡಳಿತ ಭವನದ ಮುಂದೆ ನಿರಂತರ ಧರಣಿ ನಡೆಸುತ್ತಿದ್ದಾರೆ. ಆರಂಭದಲ್ಲಿ ಪ್ರತಿಭಟನಾ ಧರಣಿಗೆ ಸೀಮಿತವಾಗಿದ್ದ ಹೋರಾಟ, ಈಗ ಉಪವಾಸ ಸತ್ಯಾಗ್ರಹದ ಮಟ್ಟಕ್ಕೆ ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ರಾಜ್ಯ ಸರ್ಕಾರ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಧಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಒಬ್ಬ ವಿದ್ಯಾರ್ಥಿನಿ ಬೆಳಿಗ್ಗೆ ಉಪಹಾರ ಸೇವಿಸದೆ ಅಸ್ವಸ್ಥರಾಗಿದ್ದರು. ವೈದ್ಯರು ಅವರ ಆರೋಗ್ಯ ಪರೀಕ್ಷೆ ನಡೆಸಿ ಪ್ರಾಥಮಿಕ ಚಿಕಿತ್ಸೆ ನೀಡಿದರು.

ವಿದ್ಯಾರ್ಥಿಗಳು, “ಕೃಷಿ ಅಧಿಕಾರಿ ನೇಮಕಾತಿಯಲ್ಲಿ ಕೃಷಿ ವಿವಿ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. 21 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಸರ್ಕಾರ ಇನ್ನೂ ಸ್ಪಂದಿಸದಿರುವುದು ವಿದ್ಯಾರ್ಥಿಗಳ ಅಸಮಾಧಾನ ಹೆಚ್ಚಿಸಿದೆ.

ಬೆಳಿಗ್ಗೆಯಿಂದಲೇ ವಿವಿ ಸಿಬ್ಬಂದಿಯನ್ನು ಗೇಟ್ ಬಳಿ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಅಸ್ವಸ್ಥರಾದ ಸಹಪಾಠಿಗೆ ಚಿಕಿತ್ಸೆ ಕೊಡಿಸಿದ ತರುವಾಯ ಪುನಃ ಹೋರಾಟ ಮುಂದುವರೆಸಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...