ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

Date:

ಭೂ ದಾಖಲೆಗಳ ತಿದ್ದುಪಡಿ ಮತ್ತು ‘ಖರಾಬು’ ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ 50 ಲಕ್ಷ ರೂ. ಲಂಚ ಪಡೆಯುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ.

- Advertisement -

ಬಾಗಲಕೋಟೆ ಮೂಲದ ಮಂಜುನಾಥ ಅರಳಿಕಟ್ಟಿ ಎಂಬುವವರು ಧಾರವಾಡ-ಕಲಘಟಗಿ ಮಧ್ಯದ ಯರಿಕೊಪ್ಪ ಗ್ರಾಮದಲ್ಲಿ 33 ಎಕರೆ ಜಮೀನು ಖರೀದಿಸಿದ್ದರು. ಅದರಲ್ಲಿರುವ 13 ಎಕರೆ ಖರಾಬು ಜಮೀನಿನ ಪಹಣಿ ತಿದ್ದುಪಡಿ ಮಾಡಿ ‘ಪೋಡಿ’ ಮಾಡಿಕೊಡಲು ತಹಶೀಲ್ದಾರ್ ಸಚ್ಚಿದಾನಂದ 50 ಲಕ್ಷ ರೂ. ನಗದು ಹಾಗೂ 2 ಎಕರೆ ಜಮೀನು ನೀಡುವಂತೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ತಹಶೀಲ್ದಾರ್ ಲಂಚಗುಳಿತನದ ವಿರುದ್ಧ ಮಂಜುನಾಥ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ಮಂಜುನಾಥರಿಗೆ‌ಹಣ ಕೊಟ್ಟು, ಮುಂದೆ ಕಳಿಸಿದ್ದಾರೆ. ಬುಧವಾರ ರಾತ್ರಿ ಕರ್ನಾಟಕ ಕಾಲೇಜು (KCD) ಆವರಣದಲ್ಲಿ ಮಂಜುನಾಥ್ ಬಳಿ ತಹಶೀಲ್ದಾರ್‌ ಲಂಚದ ಹಣ ಪಡೆಯುವಾಗ, ಲೋಕಾಯುಕ್ತ ಎಸ್.ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಸಚ್ಚಿದಾನಂದ ಅವರನ್ನು ವಶಕ್ಕೆ ಪಡೆದಿದೆ.

ವಿಚಿತ್ರವೆಂದರೆ, ಲಂಚ ಪಡೆಯುತ್ತಿದ್ದ ದಿನವೇ ತಹಶೀಲ್ದಾರ್ ಸಚ್ಚಿದಾನಂದ ತಮ್ಮ ಕಚೇರಿಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ಸುಮಾರು 2,000ಕ್ಕೂ ಹೆಚ್ಚು ಜನರಿಗೆ ಅನ್ನಸಂತರ್ಪಣೆ ಆಯೋಜಿಸಿದ್ದರು. ಅಡುಗೆ ತಯಾರಿ ಭರದಿಂದ ಸಾಗುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಅಧಿಕಾರಿಗಳು ಇವರ ಭ್ರಷ್ಟಾಚಾರದ ಜಾಲವನ್ನು ಭೇದಿಸಿ ಬಲೆಗೆ ಕೆಡವಿದ್ದಾರೆ.

ಸದ್ಯ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ನೇಮಕ

ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್...

ತುಳು ನುಡಿಗೆ ‘ಹೆಚ್ಚುವರಿ ಅಧಿಕೃತ ಭಾಷೆ’ ಮಾನ್ಯತೆ ಘೋಷಿಸಿ: ಕರವೇ ಆಗ್ರಹ

ಮಂಗಳೂರಿನಲ್ಲಿ ನಾಳೆ ನಡೆಯಲಿರುವ ರಾಜ್ಯ ಸರ್ಕಾರದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ,...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...