ಧಾರವಾಡ | ಹಿಜಾಬ್‌ಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ʼಧರ್ಮ ದಂಗಲ್‌ʼ ಪದ ಬಳಕೆ; ಸಚಿವ ಸಂತೋಷ್ ಲಾಡ್‌ ಗರಂ‌ 

Date:

ಹಿಜಾಬ್‌ ಹಾಗೂ ಇತರ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ʼಧರ್ಮ ದಂಗಲ್‌ʼ ಎಂಬ ಪದ ಬಳಸುತ್ತಿವೆ. ಅದು ದಂಗಲ್‌ ಹೇಗೆ ಆಗುತ್ತದೆ. ಸಿಎಂ ಹೇಳಿರುವುದು ಕಾನೂನಾತ್ಮಕವಾಗಿದೆ. ಅದಕ್ಕೆ ದಂಗಲ್‌ ಎಂಬ ಪದ ಬಳಸಿ ಏಕೆ ಹೇಳುತ್ತಿರಿ? ಎಂದು ಮಾಧ್ಯಮಗಳ ವಿರುದ್ಧ ಸಚಿವ ಸಂತೋಷ್ ಲಾಡ್‌ ಗರಂ‌ ಆದರು.

ಹಿಜಾಬ್‌ ನಿಷೇಧ ಆದೇಶ ವಾಪಸ್‌ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್‌ ಪ್ರತಿಕ್ರಿಯೆ ನೀಡಿ ಮಾತನಾಡಿದರು.

“ಧರ್ಮ ದಂಗಲ್‌ ಎಂದರೇನು? ಅದರಲ್ಲಿ ಧರ್ಮ ದಂಗಲ್‌ ಏನಾಗಿದೆ? ಪದೇ ಪದೆ ಮಾಧ್ಯಮಗಳು ಧರ್ಮ ದಂಗಲ್‌ ಎಂಬ ಪದ ಬಳಸುತ್ತಿವೆ. ಇದು ಎಷ್ಟು ಸರಿ? ಕಾನೂನಾತ್ಮಕ, ಸಂವಿಧಾನಾತ್ಮಕವಾಗಿ ಆದೇಶ ವಾಪಸ್‌ ಪಡೆಯಲು ಅವಕಾಶವಿದೆ. ಅದರಲ್ಲಿ ಸಿಎಂ ತಪ್ಪೇನಿದೆ? ವಿರೋಧ ಪಕ್ಷಗಳು ವಿರೋಧ ಮಾಡುತ್ತವೆ ಮಾಡಲಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾನೂ ಒಬ್ಬ ಹಿಂದೂ ಅಲ್ಲವಾ? ನಾನೇನು ಅದಕ್ಕೆ ವಿರೋಧ ಮಾಡುತ್ತಿಲ್ಲ. ಮಾಧ್ಯಮದಲ್ಲೂ ಹಿಂದೂಗಳಿದ್ದಾರೆ ಅವರೂ ವಿರೋಧ ಮಾಡುತ್ತಾರಾ? ನಿಮ್ಮ ನಿಲುವು ಏನು” ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

“ಮುಸ್ಲಿಂ ತುಷ್ಟೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದವರು ಮುಸ್ಲಿಂ ತುಷ್ಟೀಕರಣ ಎಂಬುದು ವಿರೋದ ಪಕ್ಷಗಳ ದೃಷ್ಟಿಕೋನವಾಗಿದೆ. ʼಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ʼ ಎಂದರೇನು? ಹಿಂದೂ, ಮುಸ್ಲಿಂ, ಸಿಖ್‌, ಬುದ್ಧ ಎಲ್ಲರನ್ನೂ ಒಂದೇ ರೀತಿ ನೋಡಿಕೊಳ್ಳುತೇವೆ ಎಂಬುದಲ್ಲವೇ?” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅಕ್ರಮವಾಗಿ ಹೂಳಲಾದ ಎಂಡೋಸಲ್ಫಾನ್ ಪ್ರಕರಣ; ನೋಟಿಸ್ ಜಾರಿ

“ಹಿಜಾಬ್‌ ನಿಷೇಧ ಹಿಂಪಡೆಯುವುದು ಸೇರಿದಂತೆ ಇತರೆ ನಿಯಮಗಳನ್ನು ಕಾನೂನಾತ್ಮಕವಾಗಿ ಪರಿಶೀಲನೆ ಮಾಡುತ್ತೇವೆ. ಸಂವಿಧಾನ ಬದ್ಧವಾಗಿ ಯಾವ ರೀತಿ ಇರಬೇಕು ಅಂತಿದೆಯೋ ಅದೇ ರೀತಿ ಮಾಡುತ್ತಾರೆ. ಅದೇ ರೀತಿಯಲ್ಲಿ ಮಾಡಲು ಸಿಎಂ ಪರಿಶೀಲಿಸುತ್ತಿದ್ದಾರೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...