ನಗರದ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರನ್ನು ಧಾರವಾಡದ ಆಶ್ಮಿ ನಗರದ ದುಷ್ಕರ್ಮಗಳು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರೆ.
- Advertisement -
ಶುಕ್ರವಾರ ರಾತ್ರಿ ದುಷ್ಕೃತ್ಯ ನಡೆದಿದೆ. ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ರಕ್ತಸಿಕ್ತವಾಗಿದ್ದ ಫೈರೋಜ್ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳದ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎನ್ನುವ ಮಾಹಿತಿ ದೊರೆತಿದ್ದು, ಇದನ್ನು ಆಧರಿಸಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಸದ್ಯ ಸ್ಥಳಕ್ಕೆ ಹು-ಧಾ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




