ಧಾರವಾಡ | ಯುವನಿಧಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ

Date:

ಸರ್ಕಾರದ ಮಹತ್ತರ ಯೋಜನೆಯಾದ ಯುವನಿಧಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಧಾರವಾಡ ಜಿಲ್ಲೆಯಲ್ಲಿ ಆರಂಭವಾಗಿದ್ದು, ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ, ಡಿಪ್ಲೋಮಾ ಪಡೆದಿರಬೇಕು. ಅಂದರೆ 2023ನೇ ವರ್ಷದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂತಹವರು ಸೇವಾಸಿಂಧು ಜಾಲತಾಣ https://sevasindhugs.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅರ್ಜಿದಾರರು ನ್ಯಾಶನಲ್ ಅಕ್ಯಾಡೆಮಿಕ ಡೆಪೊಸೆಟರಿ (ಎನ್‌ಎಡಿ ಪೋರ್ಟಲ್‍) ಪೋರ್ಟಲ್‍ನ ಜಾಲತಾಣ https://nad.karnataka.gov.inದಲ್ಲಿ ವಿಶ್ವವಿದ್ಯಾನಿಲಯಗಳು, ಶೈಕ್ಷಣಿಕ ಸಂಸ್ಥೆಗಳು, ಮಂಡಳಿಗಳು ಪ್ರವೇಶಾತಿ ಸಂದರ್ಭದಲ್ಲಿ ನೀಡುವ ಪದವಿ, ಡಿಪ್ಲೋಮಾ, ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳ ಮೇಲೆ ನಮೂದಿಸಿರುವ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ದತ್ತಾಂಶವು ಲಭ್ಯವಿದೆಯೆ ಅಥವಾ ಇಲ್ಲವೇ ಎಂಬುದರ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನೊಂದಣಿ ಸಂಖ್ಯೆ ಇಲ್ಲದೇ ಇದ್ದಲ್ಲಿ ʼಎನ್‌ಎಡಿ ಪೋರ್ಟಲ್‍ʼನಲ್ಲಿ ಸ್ವಯಂ ಪ್ರೇರಿತವಾಗಿ ನೋಂದಣಿ ಮಾಡಿಕೊಳ್ಳಬೇಕು. ಅಥವಾ ತಮಗೆ ಸಂಬಂಧಿಸಿದ ಕಾಲೇಜು, ಬೋರ್ಡ್, ವಿಶ್ವವಿದ್ಯಾಲಯವನ್ನು ಸಂಪರ್ಕಿಸಿ, ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಅಭ್ಯರ್ಥಿಗಳು ಯುವನಿಧಿಯ ನೋಂದಣಿ ಮಾಡಿಕೊಳ್ಳಲು ಗ್ರಾಮೀಣ ಭಾಗದಲ್ಲಿ ತಮಗೆ ಹತ್ತಿರದ ಗ್ರಾಮ ಒನ್ ಕೇಂದ್ರಗಳು ಹಾಗೂ ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...