ಹುಬ್ಬಳ್ಳಿ | ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸಿದ್ಧ: ಪ್ರಹ್ಲಾದ ಜೋಷಿ

Date:

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ಮುಕ್ತ ಚರ್ಚೆಗೆ ಸಿದ್ಧವಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಷಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಥೆನಾಲ್ ಉತ್ಪಾದನೆ ಹಾಗೂ ಕಬ್ಬು ಬೆಳೆಗಾರರ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.

- Advertisement -

ಕೇಂದ್ರ ಸರ್ಕಾರ ಪ್ರತಿವರ್ಷ ಸುಮಾರು 1,200 ಕೋಟಿ ಲೀಟರ್ ಎಥೆನಾಲ್ ಖರೀದಿಸುತ್ತಿದ್ದು, ಇದರಲ್ಲಿ ಕರ್ನಾಟಕ ರಾಜ್ಯದಿಂದ 145 ಕೋಟಿ ಲೀಟರ್ ಎಥೆನಾಲ್ ಖರೀದಿಸಲಾಗುತ್ತಿದೆ. ಕರ್ನಾಟಕ, ಉತ್ತರ ಮಹಾರಾಷ್ಟ್ರ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳಲ್ಲಿ ಉತ್ಪಾದನೆಯಾಗುವ ಕಬ್ಬಿನಿಂದ ಹೆಚ್ಚಿನ ಪ್ರಮಾಣದ ಎಥೆನಾಲ್ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹಾಗೂ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಎರಡೂ ವಿಭಿನ್ನವಾಗಿವೆ. ಎಂಎಸ್‌ಪಿ ಸಕ್ಕರೆಗೆ ಅನ್ವಯಿಸಿದರೆ, ಎಫ್‌ಆರ್‌ಪಿ ಕಬ್ಬಿಗೆ ಸಂಬಂಧಿಸಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಗಳು ಯಾವುದೇ ಕಾರಣಕ್ಕೂ ನಿಗದಿತ ಎಂಎಸ್‌ಪಿಗಿಂತ ಕಡಿಮೆ ದರದಲ್ಲಿ ಸಕ್ಕರೆ ಮಾರಾಟ ಮಾಡಬಾರದು ಎಂದು ಅವರು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಈ ವರ್ಷವೂ ಕಬ್ಬಿನ ಎಫ್‌ಆರ್‌ಪಿ ಹೆಚ್ಚಿಸುವ ಪ್ರಕ್ರಿಯೆ ನಡೆಸಲಿದೆ ಎಂದು ಜೋಶಿ ಹೇಳಿದರು. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಮುಕ್ತವಾಗಿದೆ ಎಂದರು.

ರೈತ ಮುಖಂಡರೊಂದಿಗೆ ಇದೇ 12ರಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಕೃಷಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲು ಒಪ್ಪಿಗೆ ದೊರೆತಿದೆ. ಸಭೆಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ, ಸಂಬಂಧಪಟ್ಟ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಬ್ಬು ಬೆಳೆಗಾರರಿಗೆ ಬಾಕಿ ಉಳಿದಿದ್ದ ಸುಮಾರು ₹23,500 ಕೋಟಿ ಪಾವತಿಸಲಾಗಿದೆ ಎಂದು ಜೋಶಿ ಹೇಳಿದರು. ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ನೇರವಾಗಿ ಹಣ ಪಾವತಿಸುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಪ್ರಸಕ್ತ ಅವಧಿಯಲ್ಲಿ ಶೇ.97ರಷ್ಟು ಹಣವನ್ನು ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisements

ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿದ್ದು, ರೈತರು ಪ್ರತಿಭಟನೆ ನಡೆಸುವ ಅಗತ್ಯವಿಲ್ಲ. ರೈತ ಮುಖಂಡರು ದೆಹಲಿಗೆ ಆಗಮಿಸಿದರೆ ಸಂಬಂಧಪಟ್ಟ ಸಚಿವಾಲಯಗಳ ಅಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಹಾಗೂ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಅವರ ಬಗ್ಗೆ ಈ ಹಿಂದೆ ತಮಗೆ ವೈಯಕ್ತಿಕ ಪರಿಚಯ ಇರಲಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ರೈತರ ಹೋರಾಟದಿಂದ ತಮಗೆ ಯಾವುದೇ ಸಮಸ್ಯೆಯಾಗಿಲ್ಲ. ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿಯೂ ರೈತ ಮುಖಂಡರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...