ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

Date:

“ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಮಾತ್ರ ನಿರಂತರವಾಗಿ ಜಾರಿಯಲ್ಲಿವೆ” ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ವಾಗ್ದಾಳಿ ನಡೆಸಿದರು.

- Advertisement -

ಹುಬ್ಬಳ್ಳಿ ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಯಲ್ಲಿ ವಿಳಂಬ, ಶಕ್ತಿ ಯೋಜನೆಯಿಂದ ಕೆಎಸ್‌ಆರ್‌ಟಿಸಿ ಎದುರಿಸುತ್ತಿರುವ ಆರ್ಥಿಕ ಸಂಕಷ್ಟ ಹಾಗೂ ವಿವಿಧ ಶುಲ್ಕಗಳ ಹೆಚ್ಚಳವನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಕೆಪಿಎಸ್‌ಸಿ ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಆರಕ್ಕೂ ಹೆಚ್ಚು ಸಚಿವರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ. ತಮ್ಮವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನೇಮಕಾತಿ ವ್ಯವಸ್ಥೆಯನ್ನು ಬಳಸಿಕೊಂಡಿರುವ ಆರೋಪಗಳಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನವಿದೆ” ಎಂದು ಸಿ.ಟಿ. ರವಿ ಆರೋಪಿಸಿದರು.

“ತನಿಖೆಗೆ ಸಂಬಂಧಿಸಿದ ಅಧಿಕಾರಿಗಳ ಬಗ್ಗೆ ಸರ್ಕಾರಕ್ಕೆ ಭಯವೇಕೆ ಎಂದು ಪ್ರಶ್ನಿಸಿದ ಅವರು, ಅಲೋಕ್‌ ಕುಮಾರ್‌ ಮತ್ತು ಡಿಐಜಿ ದಿವ್ಯಾ ಅವರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆಯಿಂದ ಸತ್ಯ ಹೊರಬರಬೇಕು” ಎಂದು ಪರೋಕ್ಷವಾಗಿ ಆಗ್ರಹಿಸಿದರು.

“ಸ್ಟಿಂಗ್‌ ಆಪರೇಷನ್‌ ಪ್ರಕರಣದ ಸೂತ್ರಧಾರಿಗಳು ಮತ್ತು ಪಾತ್ರಧಾರಿಗಳು ಕಾಂಗ್ರೆಸ್‌ನವರೇ ಎಂದು ಸಿ.ಟಿ. ರವಿ ಆರೋಪಿಸಿದರು. ಪ್ರಕರಣದ ಬಗ್ಗೆ ಮಾಹಿತಿ ನೀಡಿದವರನ್ನು ಬಂಧಿಸುವ ಮೂಲಕ ಸತ್ಯವನ್ನು ಮುಚ್ಚಿಡುವ ಪ್ರಯತ್ನ ನಡೆಯುತ್ತಿದೆ” ಎಂದು ದೂರಿದರು.

“ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಉದ್ದೇಶದಿಂದ ವಿಡಿಯೊ ಬಳಸಲಾಗುತ್ತಿದೆಯೇ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ ಅವರು, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

“ಇವು ತಮ್ಮ ರಾಜಕೀಯ ಆರೋಪಗಳಾಗಿದ್ದು, ತನಿಖೆಯಿಂದಲೇ ಸತ್ಯಾಂಶ ಸ್ಪಷ್ಟವಾಗಬೇಕಿದೆ. ಗ್ಯಾರಂಟಿಗಳಿಗಿಂತ ಬೆಲೆ ಏರಿಕೆಯೇ ಹೆಚ್ಚು ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಬಾಕಿ ಉಳಿದಿದೆ ಎಂಬ ಆರೋಪ ಮಾಡಿದ ಸಿ.ಟಿ. ರವಿ, ಈ ಹಣ ಎಲ್ಲಿಗೆ ಹೋಯಿತು ಎಂಬುದಕ್ಕೆ ಸರ್ಕಾರ ಸ್ಪಷ್ಟ ಉತ್ತರ ನೀಡಿಲ್ಲ” ಎಂದರು.

“ಶಕ್ತಿ ಯೋಜನೆಯಿಂದ ಕೆಎಸ್‌ಆರ್‌ಟಿಸಿಗೆ ಶಕ್ತಿ ಬಂದಿಲ್ಲ; ಬದಲಿಗೆ ನೌಕರರ ಭವಿಷ್ಯ ನಿಧಿಯ ಹಣವನ್ನೂ ಡೀಸೆಲ್‌ ಖರೀದಿಗೆ ಬಳಸಬೇಕಾದ ಸ್ಥಿತಿ ಎದುರಾಗಿದೆ” ಎಂದು ಟೀಕಿಸಿದರು.

ಚುನಾವಣೆಯಲ್ಲಿ ಗೆದ್ದಾಗ ಜನಾದೇಶವೆಂದು ಒಪ್ಪಿಕೊಂಡು, ಸೋತಾಗ ಇವಿಎಂ ದೋಷದ ಆರೋಪ ಮಾಡುವುದು ಸರಿಯಲ್ಲ. ಚುನಾವಣಾ ವ್ಯವಸ್ಥೆಯ ಬಗ್ಗೆ ಅನುಮಾನಗಳಿದ್ದರೆ ನ್ಯಾಯಾಲಯ ಸೇರಿದಂತೆ ಸಾಂವಿಧಾನಿಕ ಮಾರ್ಗಗಳ ಮೂಲಕ ಪ್ರಶ್ನಿಸಬೇಕು. ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಆಧಾರರಹಿತ ಆರೋಪ ಮಾಡುವುದು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ” ಎಂದರು.

“ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳಿವೆ ಎಂಬ ಆರೋಪಗಳನ್ನೂ ಅವರು ತಳ್ಳಿಹಾಕಿದರು. ಪಟ್ಟಿಯಲ್ಲಿನ ತಪ್ಪುಗಳನ್ನು ಸರಿಪಡಿಸಲು ಅವಕಾಶಗಳಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳೂ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು” ಎಂದು ಹೇಳಿದರು.

ಎನ್‌ಡಿಎಗೆ ಬೆಂಬಲಿಸುವಂತೆ ಮನವಿ: “ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಭಾರತದ ಅಭಿವೃದ್ಧಿಯ ವೇಗವನ್ನು ತಡೆಯಲು ವಿದೇಶಿ ಶಕ್ತಿಗಳು ಪ್ರಯತ್ನಿಸುತ್ತಿವೆ ಎಂಬ ಆರೋಪ ಮಾಡಿದ ಸಿ.ಟಿ. ರವಿ, ಈ ವಿಚಾರದಲ್ಲಿ ಮತದಾರರು ರಾಜಕೀಯ ಸಂದೇಶ ನೀಡಬೇಕು. ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಂತೆ ಮನವಿ ಮಾಡಿದರು. 

ಸುದ್ದಿಗೋಷ್ಠಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಹಾಂತೇಶ ಕವಟಗಿಮಠ, ರಾಜು ಕೋರ್ಯಾಣಮಠ ಸೇರಿದಂತೆ ಹಲವರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...