ಹುಬ್ಬಳ್ಳಿ | ಹೊರಗುತ್ತಿಗೆ ನೌಕರರಿಗೂ ಸೇವಾ ಭದ್ರತೆ ನೀಡಿ: ಜಗದೀಶ ಶೆಟ್ಟರ್

Date:

ಸರ್ಕಾರದ ವಿವಿಧ ಇಲಾಖೆಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸುವುದರ ಜೊತೆಗೆ, ಸರ್ಕಾರಿ ನೌಕರರಿಗೆ ದೊರೆಯುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು.

- Advertisement -

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ‘ವಿಶ್ವಶ್ರಮ ಚೇತನ’ ಆವರಣದಲ್ಲಿ ಕಾರ್ಮಿಕ ಮುಖಂಡ ಪ್ರೊ. ಕೆ.ಎಸ್. ಶರ್ಮಾ ಅವರ 93ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರ ಬದುಕಿನ ಭದ್ರತೆ ಕೇವಲ ವೇತನಕ್ಕೆ ಸೀಮಿತವಾಗಬಾರದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ದಿನಗೂಲಿ ಹಾಗೂ ಗುತ್ತಿಗೆ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ನಿಟ್ಟಿನಲ್ಲಿ ಕೆ.ಎಸ್. ಶರ್ಮಾ ಅವರು ದಶಕಗಳಿಂದ ನಡೆಸಿದ ಹೋರಾಟವನ್ನು ಸ್ಮರಿಸಿದ ಶೆಟ್ಟರ್, ಅವರ ಹೋರಾಟದ ಫಲವಾಗಿ 2012ರಲ್ಲಿ ರಾಜ್ಯದ ಸುಮಾರು 26 ಸಾವಿರ ದಿನಗೂಲಿ ನೌಕರರ ಸೇವೆ ಕಾಯಂ ಮಾಡುವ ಅವಕಾಶ ಸರ್ಕಾರಕ್ಕೆ ದೊರೆತಿತ್ತು ಎಂದರು.

‘ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 26 ಸಾವಿರ ದಿನಗೂಲಿ ನೌಕರರ ಸೇವೆ ಕಾಯಂ ಮಾಡಿರುವುದು ನನ್ನ ರಾಜಕೀಯ ಜೀವನದ ಪ್ರಮುಖ ಸಂದರ್ಭಗಳಲ್ಲಿ ಒಂದು. ಇದೇ ರೀತಿಯ ಸಾಮಾಜಿಕ ನ್ಯಾಯವನ್ನು ಇಂದಿನ ಹೊರಗುತ್ತಿಗೆ ನೌಕರರಿಗೂ ನೀಡುವ ಕುರಿತು ಸರ್ಕಾರ ಗಂಭೀರವಾಗಿ ಚಿಂತಿಸಬೇಕು’ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಉದ್ಯೋಗ ಭದ್ರತೆಯತ್ತವೂ ಅಗತ್ಯ ಎಂದು ಪ್ರತಿಪಾದಿಸಿದ ಅವರು, ಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸಿದರೆ ಅನೇಕ ಕುಟುಂಬಗಳ ಬದುಕಿಗೆ ಸ್ಥಿರತೆ ದೊರೆಯಲಿದೆ. ಸರ್ಕಾರವು ಈ ವಿಚಾರವನ್ನು ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಬೇಕು ಎಂದು ಸಲಹೆ ನೀಡಿದರು.

ಕೆ.ಎಸ್. ಶರ್ಮಾ ಅವರ ಹೋರಾಟದ ಸ್ವರೂಪವನ್ನು ವಿವರಿಸಿದ ಶೆಟ್ಟರ್, ಅವರು ಕೇವಲ ಒಂದು ಸಿದ್ಧಾಂತಕ್ಕೆ ಸೀಮಿತರಾದ ವ್ಯಕ್ತಿಯಲ್ಲ. ಮಾರ್ಕ್ಸ್‌ವಾದದ ಜೊತೆಗೆ ಗಾಂಧಿ ಹಾಗೂ ಅಂಬೇಡ್ಕರ್ ವಿಚಾರಧಾರೆಗಳ ಪ್ರಭಾವ ಹೊಂದಿರುವ ಅವರು, ನೋವು, ಶೋಷಣೆ ಹಾಗೂ ಅಸಹಾಯಕತೆಯನ್ನು ಎದುರಿಸುತ್ತಿರುವ ಜನರ ಪರ ನಿರಂತರವಾಗಿ ಧ್ವನಿ ಎತ್ತಿದ್ದಾರೆ ಎಂದು ಹೇಳಿದರು. 93ನೇ ವಯಸ್ಸಿನಲ್ಲಿಯೂ ಹೋರಾಟದ ಮನೋಭಾವವನ್ನು ಮುಂದುವರಿಸಿರುವುದು ಶ್ಲಾಘನೀಯ ಎಂದರು.

ಪ್ರೊ. ಕೆ.ಎಸ್. ಶರ್ಮಾ ಮಾತನಾಡಿ, “ತಮ್ಮ ಬದುಕಿನುದ್ದಕ್ಕೂ ದುಡಿಯುವ ಹಾಗೂ ಶೋಷಿತ ವರ್ಗದ ಪರವಾಗಿ ಹೋರಾಟ ನಡೆಸಿಕೊಂಡು ಬಂದಿರುವುದಾಗಿ ಹೇಳಿದರು.‘93ನೇ ವಯಸ್ಸಿನಲ್ಲಿಯೂ ಕೆಲವು ಹೊಸ ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದೇನೆ. ಅಂಗವಿಕಲರಿಗೆ ಇನ್ನೂ ಸಮರ್ಪಕ ಸರ್ಕಾರಿ ಸೌಲಭ್ಯಗಳು ದೊರೆತಿಲ್ಲ. ಅವರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸಬೇಕಿದೆ” ಎಂದರು.

ದುಡಿಯುವ ವರ್ಗವು ಭಿಕ್ಷೆ ಬೇಡುವ ಸ್ಥಿತಿಯಲ್ಲಿ ಇರಬಾರದು; ಅದು ತನ್ನ ಹಕ್ಕುಗಳಿಗಾಗಿ ಸಂಘಟಿತವಾಗಿ ನಿಂತು ಆಡಳಿತದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಶಕ್ತಿಯಾಗಬೇಕು ಎಂದು ಪ್ರತಿಪಾದಿಸಿದರು.

ಹಿಂದೆ ಕಾರ್ಮಿಕ ಮುಖಂಡರು ಜನರನ್ನು ಸಂಘಟಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಆ ಸಂಘಟನಾ ಶಕ್ತಿ ಕುಂದಿರುವುದರಿಂದ ಹಲವು ಸಮಸ್ಯೆಗಳಿಗೆ ನಿರೀಕ್ಷಿತ ಪರಿಹಾರ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರೊ. ಕೆ.ಎಸ್. ಶರ್ಮಾ ಅವರ ‘ಕುವಲಯ ಆತ್ಮಾವಲೋಕನ’, ಸುಲೋಚನಾ ಪೋತ್ನಿಸ್ ಅವರ ‘ನಾ ಕಂಡ ಕುವಲಯ’ ಹಾಗೂ ನಾರಾಯಣ ಎಸ್. ಘಳಿಗೆ ಅವರ ‘ಕುವಲಯರ ಸಂಘರ್ಷಮಯ ಬಾಳು ಒಂದು ರಸಯಾತ್ರೆ’ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

ನಿವೃತ್ತ ನ್ಯಾಯಾಧೀಶ ಎನ್.ಬಿ. ಕುಲಕರ್ಣಿ, ಶಂಕರಣ್ಣ ಮುನವಳ್ಳಿ, ಡಾ. ಸೋಮಶೇಖರ ಹುದ್ದಾರ, ನಾರಾಯಣ ಘಳಿಗೆ, ಸುಮಿತ್ರಮ್ಮ, ಡಾ. ಸಿ.ಸಿ. ಹಿರೇಮಠ ಸೇರಿದಂತೆ ಸಂಜೀವಿನಿ ಆಯುರ್ವೇದ ಮಹಾವಿದ್ಯಾಲಯದ ಬೋಧಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸುಲೋಚನಾ ಕೆ. ಪೋಲೀಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...