ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವೆ ನಡೆದ ಅಕ್ಟೋಬರ್ 12ರ ಸಭೆಯ ಮಾತುಕತೆಯಿಂದ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ ಎಂಬ ಅಸಮಾಧಾನವೇ ಮತ್ತೊಂದು ಹೋರಾಟಕ್ಕೆ ಕಾರಣವಾಗಿದೆ.
ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸಬೇಕು ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ನಡೆಯುತ್ತಿರುವ ರೈತರ ಹೋರಾಟ ಗಮನ ಸೆಳೆದಿದೆ. ರೈತ ಮುಖಂಡರಾದ ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜೇರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಲಕ್ಷಾಂತರ ರೈತರು ಪಾಲ್ಗೊಂಡಿದ್ದರು ಎಂಬುದು ಹೋರಾಟಗಾರರ ಅಂದಾಜು. ಬಿಸಿಲಿನ ತಾಪವನ್ನೂ ಲೆಕ್ಕಿಸದೆ ರಸ್ತೆಯ ಮೇಲೆ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಿದರು.
ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವೆ ನಡೆದ ಅಕ್ಟೋಬರ್ 12ರ ಸಭೆಯ ಮಾತುಕತೆಯಿಂದ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ ಎಂಬ ಅಸಮಾಧಾನವೇ ಮತ್ತೊಂದು ಹೋರಾಟಕ್ಕೆ ಕಾರಣವಾಗಿದೆ.
ಹತ್ತರಗಿ ಟೋಲ್ ನಾಕಾದಲ್ಲಿ ನಡೆದ ಪ್ರತಿಭಟನೆಯಿಂದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಅಡಚಣೆಯಾಗಿತ್ತು. ಬಳಿಕ ಅಕ್ಟೋಬರ್ 15ರಂದು ಹೋರಾಟದ ಮೂರನೇ ದಿನ ರೈತರು ಹೆದ್ದಾರಿ ತಡೆಯನ್ನು ತೆರವುಗೊಳಿಸಿ, ಹತ್ತರಗಿಯಿಂದ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದತ್ತ ಪಾದಯಾತ್ರೆ ಆರಂಭಿಸಿದರು.
ಹತ್ತರಗಿ ಟೋಲ್ ನಾಕಾದ ಪ್ರತಿಭಟನೆಯಲ್ಲಿ ರೈತರ ಒಗ್ಗಟ್ಟು ಎದ್ದು ಕಾಣುತ್ತಿತ್ತು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ರೈತರು ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರತಿಭಟನಾ ಸ್ಥಳದಲ್ಲಿಯೇ ಇದ್ದರು. ಬಿಸಿಲಿನ ತಾಪಕ್ಕೆ ದೇಹ ಬಳಲುತ್ತಿದ್ದರೂ ಹೋರಾಟದಿಂದ ಹಿಂದೆ ಸರಿಯಲಿಲ್ಲ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ರೈತ ಮುಖಂಡರ ಭಾಷಣಗಳಿಗೆ ಜೈಕಾರ ಹಾಕುತ್ತಾ ತಮ್ಮ ಆಕ್ರೋಶ ಹೊರಹಾಕಿದರು.
ಯುವ ರೈತರೊಂದಿಗೆ ವಯೋವೃದ್ಧರೂ ಹೋರಾಟದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಹೊಲದಲ್ಲಿ ದುಡಿದು ಬದುಕು ಕಟ್ಟಿಕೊಳ್ಳುವ ರೈತರು, ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ದೊರೆಯಬೇಕೆಂಬ ಬೇಡಿಕೆಯೊಂದಿಗೆ ಹೆದ್ದಾರಿಯ ಮೇಲೆಯೇ ಕುಳಿತು ಪ್ರತಿಭಟನೆ ನಡೆಸಿದರು.
ಕೃಷಿಯಲ್ಲಿ ಹೂಡಿಕೆ ಮಾಡಿದ ಹಣ ಮರಳಿ ಸಿಗುತ್ತದೆಯೇ, ಕುಟುಂಬದ ಖರ್ಚು ನಿಭಾಯಿಸಲು ಸಾಧ್ಯವಾಗುತ್ತದೆಯೇ, ಮುಂದಿನ ಹಂಗಾಮಿಗೆ ಕೃಷಿ ಮುಂದುವರಿಸಲು ಸಾಧ್ಯವೇ ಎಂಬ ಆತಂಕ ರೈತರ ಆಕ್ರೋಶದ ಹಿಂದಿದೆ. ಕೃಷಿ ವೆಚ್ಚ ಹೆಚ್ಚಾಗುತ್ತಿರುವಾಗ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯದಿದ್ದರೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂಬುದು ಹೋರಾಟಗಾರರ ವಾದವಾಗಿದೆ.
ಹೋರಾಟದ ಸ್ಥಳದಲ್ಲಿ ರೈತರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲು ಹಲವು ಮಂದಿ ಮುಂದೆ ಬಂದರು. ರೈತ ಮಹಿಳೆಯರು ತಮ್ಮ ಮನೆಗಳಿಂದ ರೊಟ್ಟಿ ತಯಾರಿಸಿಕೊಂಡು ಬಂದು ಪ್ರತಿಭಟನಾಕಾರರಿಗೆ ನೀಡಿದರು. ಕೆಲವರು ನೀರಿನ ಬಾಟಲಿಗಳನ್ನು ಉಚಿತವಾಗಿ ವಿತರಿಸಿದರೆ, ಇನ್ನು ಕೆಲವರು ಹಣ್ಣುಗಳನ್ನು ತಂದು ಹಂಚಿದರು.
ರೈತರು ತಮ್ಮ ಹಕ್ಕಿಗಾಗಿ ರಸ್ತೆಯ ಮೇಲೆ ಕುಳಿತಿದ್ದರೆ, ಅವರ ಹಸಿವು ನೀಗಿಸಲು ರೈತ ಕುಟುಂಬಗಳೇ ನೆರವಾದವು. ಈ ದೃಶ್ಯ ರೈತ ಹೋರಾಟದ ಹಿಂದಿರುವ ಪರಸ್ಪರ ಸಹಕಾರ ಮತ್ತು ಒಗ್ಗಟ್ಟನ್ನು ಪ್ರತಿಬಿಂಬಿಸಿತು. ಹೋರಾಟವೆಂದರೆ ಕೇವಲ ಘೋಷಣೆ ಕೂಗುವುದು ಮಾತ್ರವಲ್ಲ ಹೋರಾಟದಲ್ಲಿ ಪಾಲ್ಗೊಂಡವರ ಅಗತ್ಯಗಳನ್ನು ಅರಿತು ನೆರವಾಗುವುದೂ ಅದರ ಭಾಗ ಎಂಬುದನ್ನು ರೈತ ಮಹಿಳೆಯರು ತೋರಿಸಿಕೊಟ್ಟರು.
ರೈತರ ಪ್ರಮುಖ ಬೇಡಿಕೆ ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸುವುದಾಗಿದೆ. ಇದರೊಂದಿಗೆ ಸಕ್ಕರೆಗೆ ಪ್ರತಿ ಕೆ.ಜಿಗೆ ₹60 ಎಂಎಸ್ಪಿ ನಿಗದಿಪಡಿಸಬೇಕು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಹಾಗೂ ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಖರೀದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿದ್ದಾರೆ.
ಕಬ್ಬು ಬೆಳೆಯಲು ಬೀಜ, ಗೊಬ್ಬರ, ಔಷಧ, ನೀರಾವರಿ, ಕಾರ್ಮಿಕರು, ಕಟಾವು ಮತ್ತು ಸಾಗಣೆ ಸೇರಿದಂತೆ ಹಲವು ಹಂತಗಳಲ್ಲಿ ಹಣ ಖರ್ಚಾಗುತ್ತದೆ. ಕಬ್ಬು ಬೆಳೆದು ಕಾರ್ಖಾನೆಗೆ ತಲುಪುವವರೆಗೆ ರೈತರು ಸಮಯ, ಶ್ರಮ ಮತ್ತು ಬಂಡವಾಳ ಹೂಡಿಕೆ ಮಾಡಬೇಕಾಗುತ್ತದೆ. ಇಷ್ಟೆಲ್ಲ ವೆಚ್ಚ ಮಾಡಿದ ಬಳಿಕವೂ ನಿರೀಕ್ಷಿತ ಬೆಲೆ ಸಿಗದಿದ್ದರೆ ಕೃಷಿಯಿಂದ ಲಾಭಪಡೆಯುವುದು ಕಷ್ಟವಾಗುತ್ತದೆ ಎಂಬುದು ರೈತರ ಅಳಲು.
ಕಬ್ಬಿನ ಬೆಲೆಯನ್ನು ಹೆಚ್ಚಿಸುವಂತೆ ಕಾರ್ಖಾನೆಗಳನ್ನು ಕೇಳಿದಾಗ, ಸಕ್ಕರೆಗೆ ದೊರೆಯುವ ಬೆಲೆಯನ್ನೂ ಪರಿಗಣಿಸಬೇಕಾಗುತ್ತದೆ ಎಂಬ ವಾದ ಕೇಳಿಬರುತ್ತಿದೆ. ಹೀಗಾಗಿ ಸಕ್ಕರೆಗೆ ಎಂಎಸ್ಪಿ ಹೆಚ್ಚಳ, ಕಬ್ಬಿಗೆ ಸೂಕ್ತ ಬೆಲೆ ಮತ್ತು ಎಥೆನಾಲ್ ಖರೀದಿ ವಿಚಾರಗಳಲ್ಲಿ ಸರ್ಕಾರಗಳು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂಬುದು ರೈತರ ಆಗ್ರಹವಾಗಿದೆ.
ಹೋರಾಟವನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಶಶಿಕಾಂತ ಗುರೂಜಿ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ₹5,500 ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಘೋಷಿಸಿದರು.
ಸೆಪ್ಟೆಂಬರ್ 29ರಂದು ಹುಬ್ಬಳ್ಳಿಯಲ್ಲಿ ಹೋರಾಟ ನಡೆಸಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದಾಗ ಅವರು ದೆಹಲಿಗೆ ತೆರಳಿದ್ದಾರೆ ನಾವು ಅವರಿಗೆ ಮೊದಲೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಈ ಕಾರಣಕ್ಕೆ ಈ ಹೋರಾಟ ಎಂದು ಹೇಳಿದರು.
ರೈತರ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ. ಎಂಎಸ್ಪಿ ಹೆಚ್ಚಳದ ಬೇಡಿಕೆ ಈಡೇರಿದ ಬಳಿಕ ಮಹದಾಯಿ ಯೋಜನೆ ಅನುಷ್ಠಾನಕ್ಕೂ ಹೋರಾಟ ನಡೆಸಲಾಗುವುದು ಪ್ರಹ್ಲಾದ ಜೋಶಿಯವರ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
ಈ ಕುರಿತು ಈದಿನ.ಕಾಮ್ ಜತೆ ಮಾತನಾಡಿದ ರೈತ ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಮಂಜುನಾಥ ಪೂಜೇರಿ, ದೆಹಲಿಯಲ್ಲಿ ನಡೆದ ಸಭೆಯಲ್ಲಿ ರೈತರನ್ನು ಕರೆಸಿಕೊಂಡು ಸಮಿತಿ ರಚಿಸುವುದಾಗಿ ತಿಳಿಸಲಾಗಿದೆ. ಆದರೆ, ಬೇಡಿಕೆಗಳ ಈಡೇರಿಕೆಯ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳದ ಕಾರಣ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿಗೆ ಹೆಚ್ಚಿನ ಬೆಲೆ ಕೇಳಿದಾಗ, ಸಕ್ಕರೆಗೆ ಪ್ರಸ್ತುತ ದೊರೆಯುವ ಬೆಲೆಯ ಕಾರಣ ನೀಡಿ ಹೆಚ್ಚಿನ ದರ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ಆದ್ದರಿಂದ ಸಕ್ಕರೆಗೆ ಎಂಎಸ್ಪಿ ಹೆಚ್ಚಿಸಬೇಕು. ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಅನ್ನು ಬೇರೆ ರಾಜ್ಯಗಳಲ್ಲಿರುವ ವ್ಯವಸ್ಥೆಯಂತೆ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಕುರಿತು ಈದಿನ.ಕಾಮ್ ಜತೆ ಮಾತನಾಡಿದ ರೈತ ಸಂಘಟನೆಯ ಮುಖಂಡ ನಿಂಗನಗೌಡ ಪಾಟೀಲ, ದೆಹಲಿಯಲ್ಲಿ ನಡೆದ ಸಭೆಯಿಂದ ರೈತರಿಗೆ ನಿರೀಕ್ಷಿತ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಲಾಗುತ್ತಿದೆ ಎಂದರು.
ಡೀಸೆಲ್, ಪೆಟ್ರೋಲ್ ಹಾಗೂ ಕೃಷಿಗೆ ಅಗತ್ಯವಿರುವ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ರೈತರ ಉತ್ಪನ್ನಗಳಿಗೆ ತಕ್ಕ ಬೆಲೆ ಸಿಗುತ್ತಿಲ್ಲ. ರೈತರನ್ನು ದೆಹಲಿಗೆ ಕರೆಸಿಕೊಂಡು ಸಭೆ ನಡೆಸುವುದಷ್ಟೇ ಅಲ್ಲ, ಅವರ ಬೇಡಿಕೆಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಗಂಭೀರವಾಗಿ ಸ್ಪಂದಿಸಬೇಕು. ಬೆಳೆಗಳಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಾವು ನಾಟಕ ಮಾಡಲು ಬಂದಿಲ್ಲ:
ಈ ಕುರಿತು ಈ ದಿನ.ಕಾಮ್ ಜತೆ ಮಾತನಾಡಿದ ರೈತ ಈರಪ್ಪ, ರೈತರು ತಮ್ಮ ಹಕ್ಕಿಗಾಗಿ ಹೋರಾಟಕ್ಕೆ ಬಂದಿದ್ದಾರೆಯೇ ಹೊರತು ನಾಟಕ ಮಾಡಲು ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರು ದುಡಿದಾಗ ಮಾತ್ರ ಜನರಿಗೆ ಅನ್ನ ದೊರೆಯುತ್ತದೆ. ಆದರೆ, ರೈತರ ಕಷ್ಟಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ದೆಹಲಿಗೆ ರೈತರನ್ನು ಕರೆಸಿಕೊಂಡ ಬಳಿಕ ಎಂಎಸ್ಪಿ ಹೆಚ್ಚಳದ ಕುರಿತು ನಿರ್ಧಾರ ಕೈಗೊಳ್ಳಬೇಕಿತ್ತು. ಮಹದಾಯಿ ಯೋಜನೆ ಬಗ್ಗೆಯೂ ಕ್ರಮ ಕೈಗೊಳ್ಳಬೇಕಿತ್ತು ಎಂದು ಹೇಳಿದರು.
ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಸಿದರು.
ಹೆದ್ದಾರಿ ಬಂದ್ನಿಂದ ಪಾದಯಾತ್ರೆಯವರೆಗೆ:
ಹತ್ತರಗಿ ಟೋಲ್ ನಾಕಾದಲ್ಲಿ ಎರಡು ದಿನಗಳ ಕಾಲ ನಡೆದ ಹೆದ್ದಾರಿ ತಡೆ ಪ್ರತಿಭಟನೆಯ ಬಳಿಕ ರೈತರು ಮೂರನೇ ದಿನ ಪಾದಯಾತ್ರೆಯ ಮೂಲಕ ಹೋರಾಟ ಮುಂದುವರಿಸಲು ನಿರ್ಧರಿಸಿದರು. ಸಾರ್ವಜನಿಕರಿಗೆ ವಾಹನ ಸಂಚಾರದಲ್ಲಿ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಹೆದ್ದಾರಿ ತಡೆಯನ್ನು ತೆರವುಗೊಳಿಸಿ ಹುಬ್ಬಳ್ಳಿಯತ್ತ ತೆರಳಲು ಮುಂದಾಗಿರುವುದಾಗಿ ರೈತ ಸಂಘಟನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ನೀತಿ ಆಯೋಗದ ಮಾಜಿ ಸದಸ್ಯ ಪ್ರೊ. ರಮೇಶ್ ಚಂದ್ ಅವರ ಅಧ್ಯಕ್ಷತೆಯಲ್ಲಿ ಜಂಟಿ ಸಮಿತಿ ರಚಿಸಿರುವ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ರೈತ ಸಂಘಟನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ತಿಳಿಸಿದ್ದಾರೆ.
ಸಮಿತಿ ರಚನೆಯಿಂದ ಮಾತ್ರ ರೈತರ ಬೇಡಿಕೆಗಳು ಈಡೇರಿದಂತಾಗುವುದಿಲ್ಲ. ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಎಂಎಸ್ಪಿ ನಿಗದಿಪಡಿಸಬೇಕು, ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಂಬಲ ಬೆಲೆ ನೀಡಬೇಕು. ಹಾಗೂ ಎಥೆನಾಲ್ನ ಸಂಪೂರ್ಣ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ. ಈ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಚೂನಪ್ಪ ಪೂಜೇರಿ ಸ್ಪಷ್ಟಪಡಿಸಿದ್ದಾರೆ.
ಎರಡು ತಿಂಗಳ ಹಿಂದೆಯೇ ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಒಂದು ತಿಂಗಳ ಹಿಂದೆಯೇ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ನಿವಾಸದ ಮುಂದೆ ಲಕ್ಷಾಂತರ ರೈತರು ಧರಣಿ ನಡೆಸಿದ್ದಾರೆ. ಆಗಲೇ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದ್ದರೆ ಸಮಸ್ಯೆ ಬಗೆಹರಿಯುತ್ತಿತ್ತು ಎಂದು ಪಾದಯಾತ್ರೆಯ ಸಂದರ್ಭದಲ್ಲಿ ಚೂನಪ್ಪ ಪೂಜೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತರ ಹೋರಾಟವು ಕೇವಲ ಒಂದು ಟನ್ ಕಬ್ಬಿನ ಬೆಲೆಗೆ ಸೀಮಿತವಾಗಿಲ್ಲ. ಕೃಷಿ ವೆಚ್ಚಕ್ಕೆ ತಕ್ಕ ಆದಾಯ, ಬೆಳೆಗಳಿಗೆ ನ್ಯಾಯಯುತ ಬೆಲೆ, ಉತ್ಪನ್ನಗಳ ಖರೀದಿಗೆ ಖಾತರಿ ಮತ್ತು ಕೃಷಿಯನ್ನು ಲಾಭದಾಯಕವಾಗಿಸುವ ನೀತಿಗಳ ಬೇಡಿಕೆಯೂ ಇದರ ಹಿಂದಿದೆ.
ರೈತರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು, ಬಿಸಿಲಿನಲ್ಲಿ ದಿನ ಕಳೆದರು, ನಂತರ ಪಾದಯಾತ್ರೆ ಆರಂಭಿಸಿದರು. ಈಗ ಅವರ ನಿರೀಕ್ಷೆ ಕೇಂದ್ರ ಸರ್ಕಾರದ ಸ್ಪಷ್ಟ ನಿರ್ಧಾರದ ಮೇಲಿದೆ. ರೈತರ ಬೇಡಿಕೆಗಳನ್ನು ಪರಿಶೀಲಿಸುವುದರ ಜೊತೆಗೆ ಅವುಗಳ ಆರ್ಥಿಕ ಮತ್ತು ನೀತಿಪರ ಅಂಶಗಳನ್ನು ಪರಿಗಣಿಸಿ ಸಂಬಂಧಪಟ್ಟ ಸರ್ಕಾರಗಳು ಪರಿಹಾರ ಕಂಡುಕೊಳ್ಳಬೇಕಿದೆ.
ಹತ್ತರಗಿಯಲ್ಲಿ ಮೊಳಗಿದ ರೈತರ ಧ್ವನಿ ಹುಬ್ಬಳ್ಳಿಗೆ ತಲುಪಲಿದೆ. ಆ ಧ್ವನಿಗೆ ಸರ್ಕಾರದ ಪ್ರತಿಕ್ರಿಯೆ ಏನು? ರೈತರ ಬೇಡಿಕೆಗಳಿಗೆ ಪರಿಹಾರ ಸಿಗುತ್ತದೆಯೇ ಅಥವಾ ಹೋರಾಟ ಇನ್ನಷ್ಟು ತೀವ್ರಗೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ನಡೆಯುತ್ತಿರುವ ರೈತರ ಹೋರಾಟ ಗಮನ ಸೆಳೆದಿದೆ. ರೈತ ಮುಖಂಡರಾದ ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜೇರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಲಕ್ಷಾಂತರ ರೈತರು ಪಾಲ್ಗೊಂಡಿದ್ದರು ಎಂಬುದು ಹೋರಾಟಗಾರರ ಅಂದಾಜು. ಬಿಸಿಲಿನ ತಾಪವನ್ನೂ ಲೆಕ್ಕಿಸದೆ ರಸ್ತೆಯ ಮೇಲೆ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಿದರು.
ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ನಡೆದ ಅಕ್ಟೋಬರ 12ರ ಸಭೆಯ ಮಾತುಕತೆಯಿಂದ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ ಎಂಬ ಅಸಮಾಧಾನವೇ ಮತ್ತೊಂದು ಹೋರಾಟಕ್ಕೆ ಕಾರಣವಾಗಿದೆ.
ಹತ್ತರಗಿ ಟೋಲ್ ನಾಕಾದಲ್ಲಿ ನಡೆದ ಪ್ರತಿಭಟನೆಯಿಂದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಅಡಚಣೆಯಾಗಿತ್ತು. ಬಳಿಕ ಅಕ್ಟೋಬರ್ 15ರಂದು ಹೋರಾಟದ ಮೂರನೇ ದಿನ ರೈತರು ಹೆದ್ದಾರಿ ತಡೆಯನ್ನು ತೆರವುಗೊಳಿಸಿ, ಹತ್ತರಗಿಯಿಂದ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಲಾದ ಜೋಶಿ ಅವರ ನಿವಾಸದತ್ತ ಪಾದಯಾತ್ರೆ ಆರಂಭಿಸಿದರು.
ಹತ್ತರಗಿ ಟೋಲ್ ನಾಕಾದ ಪ್ರತಿಭಟನೆಯಲ್ಲಿ ರೈತರ ಒಗ್ಗಟ್ಟು ಎದ್ದು ಕಾಣುತ್ತಿತ್ತು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ರೈತರು ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರತಿಭಟನಾ ಸ್ಥಳದಲ್ಲಿಯೇ ಇದ್ದರು. ಬಿಸಿಲಿನ ತಾಪಕ್ಕೆ ದೇಹ ಬಳಲುತ್ತಿದ್ದರೂ ಹೋರಾಟದಿಂದ ಹಿಂದೆ ಸರಿಯಲಿಲ್ಲ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ರೈತ ಮುಖಂಡರ ಭಾಷಣಗಳಿಗೆ ಜೈಕಾರ ಹಾಕುತ್ತಾ ತಮ್ಮ ಆಕ್ರೋಶ ಹೊರಹಾಕಿದರು.
ಯುವ ರೈತರೊಂದಿಗೆ ವಯೋವೃದ್ಧರೂ ಹೋರಾಟದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಹೊಲದಲ್ಲಿ ದುಡಿದು ಬದುಕು ಕಟ್ಟಿಕೊಳ್ಳುವ ರೈತರು, ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ದೊರೆಯಬೇಕೆಂಬ ಬೇಡಿಕೆಯೊಂದಿಗೆ ಹೆದ್ದಾರಿಯ ಮೇಲೆಯೇ ಕುಳಿತು ಪ್ರತಿಭಟನೆ ನಡೆಸಿದರು.
ಕೃಷಿಯಲ್ಲಿ ಹೂಡಿಕೆ ಮಾಡಿದ ಹಣ ಮರಳಿ ಸಿಗುತ್ತದೆಯೇ, ಕುಟುಂಬದ ಖರ್ಚು ನಿಭಾಯಿಸಲು ಸಾಧ್ಯವಾಗುತ್ತದೆಯೇ, ಮುಂದಿನ ಹಂಗಾಮಿಗೆ ಕೃಷಿ ಮುಂದುವರಿಸಲು ಸಾಧ್ಯವೇ ಎಂಬ ಆತಂಕಗಳೂ ರೈತರ ಆಕ್ರೋಶದ ಹಿಂದೆ ಇವೆ. ಕೃಷಿ ವೆಚ್ಚ ಹೆಚ್ಚಾಗುತ್ತಿರುವಾಗ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯದಿದ್ದರೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂಬುದು ಹೋರಾಟಗಾರರ ವಾದವಾಗಿದೆ.
ಹೋರಾಟದ ಸ್ಥಳದಲ್ಲಿ ರೈತರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲು ಹಲವು ಮಂದಿ ಮುಂದೆ ಬಂದರು. ರೈತ ಮಹಿಳೆಯರು ತಮ್ಮ ಮನೆಗಳಿಂದ ರೊಟ್ಟಿ ತಯಾರಿಸಿಕೊಂಡು ಬಂದು ಪ್ರತಿಭಟನಾಕಾರರಿಗೆ ನೀಡಿದರು. ಕೆಲವರು ನೀರಿನ ಬಾಟಲಿಗಳನ್ನು ಉಚಿತವಾಗಿ ವಿತರಿಸಿದರೆ, ಇನ್ನು ಕೆಲವರು ಹಣ್ಣುಗಳನ್ನು ತಂದು ಹಂಚಿದರು.
ರೈತರು ತಮ್ಮ ಹಕ್ಕಿಗಾಗಿ ರಸ್ತೆಯ ಮೇಲೆ ಕುಳಿತಿದ್ದರೆ, ಅವರ ಹಸಿವು ನೀಗಿಸಲು ರೈತ ಕುಟುಂಬಗಳೇ ನೆರವಾದವು. ಈ ದೃಶ್ಯ ರೈತ ಹೋರಾಟದ ಹಿಂದಿರುವ ಪರಸ್ಪರ ಸಹಕಾರ ಮತ್ತು ಒಗ್ಗಟ್ಟನ್ನು ಪ್ರತಿಬಿಂಬಿಸಿತು.
ಹೋರಾಟವೆಂದರೆ ಕೇವಲ ಘೋಷಣೆ ಕೂಗುವುದು ಮಾತ್ರವಲ್ಲ ಹೋರಾಟದಲ್ಲಿ ಪಾಲ್ಗೊಂಡವರ ಅಗತ್ಯಗಳನ್ನು ಅರಿತು ನೆರವಾಗುವುದೂ ಅದರ ಭಾಗ ಎಂಬುದನ್ನು ರೈತ ಮಹಿಳೆಯರು ತೋರಿಸಿಕೊಟ್ಟರು.
ರೈತರ ಪ್ರಮುಖ ಬೇಡಿಕೆ ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸುವುದಾಗಿದೆ. ಇದರೊಂದಿಗೆ ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಎಂಎಸ್ಪಿ ನಿಗದಿಪಡಿಸಬೇಕು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಹಾಗೂ ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಖರೀದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿದ್ದಾರೆ.
ಕಬ್ಬು ಬೆಳೆಯಲು ಬೀಜ, ಗೊಬ್ಬರ, ಔಷಧ, ನೀರಾವರಿ, ಕಾರ್ಮಿಕರು, ಕಟಾವು ಮತ್ತು ಸಾಗಣೆ ಸೇರಿದಂತೆ ಹಲವು ಹಂತಗಳಲ್ಲಿ ಹಣ ಖರ್ಚಾಗುತ್ತದೆ. ಕಬ್ಬು ಬೆಳೆದು ಕಾರ್ಖಾನೆಗೆ ತಲುಪುವವರೆಗೆ ರೈತರು ಸಮಯ, ಶ್ರಮ ಮತ್ತು ಬಂಡವಾಳ ಹೂಡಿಕೆ ಮಾಡಬೇಕಾಗುತ್ತದೆ. ಇಷ್ಟೆಲ್ಲ ವೆಚ್ಚ ಮಾಡಿದ ಬಳಿಕವೂ ನಿರೀಕ್ಷಿತ ಬೆಲೆ ಸಿಗದಿದ್ದರೆ ಕೃಷಿಯಿಂದ ಲಾಭಪಡೆಯುವುದು ಕಷ್ಟವಾಗುತ್ತದೆ ಎಂಬುದು ರೈತರ ಅಳಲು.
ಕಬ್ಬಿನ ಬೆಲೆಯನ್ನು ಹೆಚ್ಚಿಸುವಂತೆ ಕಾರ್ಖಾನೆಗಳನ್ನು ಕೇಳಿದಾಗ, ಸಕ್ಕರೆಗೆ ದೊರೆಯುವ ಬೆಲೆಯನ್ನೂ ಪರಿಗಣಿಸಬೇಕಾಗುತ್ತದೆ ಎಂಬ ವಾದ ಕೇಳಿಬರುತ್ತಿದೆ. ಹೀಗಾಗಿ ಸಕ್ಕರೆಗೆ ಎಂಎಸ್ಪಿ ಹೆಚ್ಚಳ, ಕಬ್ಬಿಗೆ ಸೂಕ್ತ ಬೆಲೆ ಮತ್ತು ಎಥೆನಾಲ್ ಖರೀದಿ ವಿಚಾರಗಳಲ್ಲಿ ಸರ್ಕಾರಗಳು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂಬುದು ರೈತರ ಆಗ್ರಹವಾಗಿದೆ.
ಹೋರಾಟವನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಶಶಿಕಾಂತ ಗುರೂಜಿ, ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ₹5,500 ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಘೋಷಿಸಿದರು.
ಸೆಪ್ಟೆಂಬರ್ 29ರಂದು ಹುಬ್ಬಳ್ಳಿಯಲ್ಲಿ ಹೋರಾಟ ನಡೆಸಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದಾಗ ಅವರು ದೆಹಲಿಗೆ ತೆರಳಿದ್ದಾರೆ ನಾವು ಅವರಿಗೆ ಮೊದಲೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಈ ಕಾರಣಕ್ಕೆ ಈ ಹೋರಾಟ ಎಂದು ಹೇಳಿದರು.
ರೈತರ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ. ಎಂಎಸ್ಪಿ ಹೆಚ್ಚಳದ ಬೇಡಿಕೆ ಈಡೇರಿದ ಬಳಿಕ ಮಹದಾಯಿ ಯೋಜನೆ ಅನುಷ್ಠಾನಕ್ಕೂ ಹೋರಾಟ ನಡೆಸಲಾಗುವುದು ಪ್ರಹ್ಲಾದ ಜೋಶಿಯವರ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
ಈ ಕುರಿತು ಈ ದಿನ.ಕಾಮ್ ಜತೆ ಮಾತನಾಡಿದ ರೈತ ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಮಂಜುನಾಥ ಪೂಜೇರಿ, ದೆಹಲಿಯಲ್ಲಿ ನಡೆದ ಸಭೆಯಲ್ಲಿ ರೈತರನ್ನು ಕರೆಸಿಕೊಂಡು ಸಮಿತಿ ರಚಿಸುವುದಾಗಿ ತಿಳಿಸಲಾಗಿದೆ. ಆದರೆ, ಬೇಡಿಕೆಗಳ ಈಡೇರಿಕೆಯ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳದ ಕಾರಣ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿಗೆ ಹೆಚ್ಚಿನ ಬೆಲೆ ಕೇಳಿದಾಗ, ಸಕ್ಕರೆಗೆ ಪ್ರಸ್ತುತ ದೊರೆಯುವ ಬೆಲೆಯ ಕಾರಣ ನೀಡಿ ಹೆಚ್ಚಿನ ದರ ನೀಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ಆದ್ದರಿಂದ ಸಕ್ಕರೆಗೆ ಎಂಎಸ್ಪಿ ಹೆಚ್ಚಿಸಬೇಕು. ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಅನ್ನು ಬೇರೆ ರಾಜ್ಯಗಳಲ್ಲಿರುವ ವ್ಯವಸ್ಥೆಯಂತೆ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಕುರಿತು ಈ ದಿನ.ಕಾಮ್ ಜತೆ ಮಾತನಾಡಿದ ರೈತ ಸಂಘಟನೆಯ ಮುಖಂಡ ನಿಂಗನಗೌಡ ಪಾಟೀಲ, ದೆಹಲಿಯಲ್ಲಿ ನಡೆದ ಸಭೆಯಿಂದ ರೈತರಿಗೆ ನಿರೀಕ್ಷಿತ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಲಾಗುತ್ತಿದೆ ಎಂದರು.
ಡೀಸೆಲ್, ಪೆಟ್ರೋಲ್ ಹಾಗೂ ಕೃಷಿಗೆ ಅಗತ್ಯವಿರುವ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ರೈತರ ಉತ್ಪನ್ನಗಳಿಗೆ ತಕ್ಕ ಬೆಲೆ ಸಿಗುತ್ತಿಲ್ಲ. ರೈತರನ್ನು ದೆಹಲಿಗೆ ಕರೆಸಿಕೊಂಡು ಸಭೆ ನಡೆಸುವುದಷ್ಟೇ ಅಲ್ಲ, ಅವರ ಬೇಡಿಕೆಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಗಂಭೀರವಾಗಿ ಸ್ಪಂದಿಸಬೇಕು. ಬೆಳೆಗಳಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಾವು ನಾಟಕ ಮಾಡಲು ಬಂದಿಲ್ಲ:
ಈ ಕುರಿತು ಈದಿನ.ಕಾಮ್ ಜತೆ ಮಾತನಾಡಿದ ರೈತ ಈರಪ್ಪ, ರೈತರು ತಮ್ಮ ಹಕ್ಕಿಗಾಗಿ ಹೋರಾಟಕ್ಕೆ ಬಂದಿದ್ದಾರೆಯೇ ಹೊರತು ನಾಟಕ ಮಾಡಲು ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.