ಹುಬ್ಬಳ್ಳಿ | ಸ್ಟಿಂಗ್‌ ಆಪರೇಷನ್‌ ಕುರಿತು ಸಿಬಿಐನಿಂದ ಸಮಗ್ರ ತನಿಖೆಯಾಗಲಿ: ಬಸವರಾಜ ಹೊರಟ್ಟಿ

Date:

“ರಾಜ್ಯದಲ್ಲಿ ನಡೆದಿರುವ ಸ್ಟಿಂಗ್‌ ಆಪರೇಷನ್‌ ಪ್ರಕರಣದ ಹಿಂದೆ ದೊಡ್ಡ ಜಾಲವಿದೆ. ಪ್ರಕರಣದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಿ, ತಪ್ಪಿತಸ್ಥರು ಯಾರೇ ಇದ್ದರೂ ಪತ್ತೆಹಚ್ಚಿ ಶಿಕ್ಷಿಸಬೇಕು” ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದರು.

- Advertisement -

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದಿನ ರಾಜಕಾರಣದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ರಾಜಕಾರಣಿಗಳು ಮತ್ತು ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್‌ ಆಪರೇಷನ್‌ ನಡೆಸುವ ಇಂತಹ ಬೆಳವಣಿಗೆಗಳು ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತವೆ. ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ಬಹಿರಂಗವಾಗಬೇಕು. ಸತ್ಯ ಹೊರಬರಬೇಕಾದರೆ ಸಿಬಿಐ ತನಿಖೆ ಅಗತ್ಯ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಶಾಸಕರು ಮತ್ತು ಸಚಿವರು ಸಮಾಜಕ್ಕೆ ಮಾದರಿಯಾಗಿರಬೇಕು. ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳಿಗೆ ಅವಕಾಶ ನೀಡಬಾರದು. ಹಿಂದೆ ರಾಮಕೃಷ್ಣ ಹೆಗಡೆ ಅವರ ಅವಧಿಯಲ್ಲಿ ಫೋನ್‌ ಕದ್ದಾಲಿಕೆ ಪ್ರಕರಣ ನಡೆದಾಗ ಅವರು ರಾಜೀನಾಮೆ ನೀಡಿದ್ದರು. ಈಗಿನ ಪ್ರಕರಣದಲ್ಲಿಯೂ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರವನ್ನು ಸಿಬಿಐ ತನಿಖೆಗೆ ಒತ್ತಾಯಿಸುವುದಾಗಿ ತಿಳಿಸಿದರು.

“ದೇವರಾಜ ಅರಸು ಅವರ ಕಾಲದಲ್ಲಿ ಭೂಸುಧಾರಣೆಗೆ ಒತ್ತು ನೀಡಲಾಗಿತ್ತು. ಎಸ್‌.ಎಂ. ಕೃಷ್ಣ ಅವರ ಅವಧಿಯಲ್ಲಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ದೊರೆತಿತ್ತು. ಆದರೆ, ಈಗ ಸ್ಟಿಂಗ್‌ ಆಪರೇಷನ್‌ ಪ್ರಕರಣಗಳಿಂದ ಕರ್ನಾಟಕ ದೇಶದ ಗಮನ ಸೆಳೆಯುತ್ತಿರುವುದು ದುರದೃಷ್ಟಕರ” ಎಂದರು.

“ಕಬ್ಬು ಬೆಳೆಗಾರರ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಹೊರಟ್ಟಿ, ರೈತರ ಸಮಸ್ಯೆಗಳು ತಮಗೆ ತಿಳಿದಿವೆ. ತಾವೂ ಕಬ್ಬು ಬೆಳೆಯುತ್ತಿದ್ದು, ನೀರಿನ ಸಮಸ್ಯೆ ಸೇರಿದಂತೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಅರಿವಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು” ಎಂದು ಒತ್ತಾಯಿಸಿದರು.

“ಕಬ್ಬಿನ ದರವನ್ನು ಶೇ.75ರಷ್ಟು ಹೆಚ್ಚಿಸಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮತ್ತಷ್ಟು ಹೆಚ್ಚಳ ಮಾಡುವ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು. ರೈತರ ಹಿತ ಕಾಪಾಡುವುದು ಸರ್ಕಾರಗಳ ಜವಾಬ್ದಾರಿಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದರು.

“ಚುನಾವಣೆಯ ಕುರಿತು ಮಾತನಾಡಿದ ಅವರು, ಈಗಾಗಲೇ ಶೇ.75ರಿಂದ 80ರಷ್ಟು ಮತದಾರರು ಯಾರಿಗೆ ಮತ ಹಾಕಬೇಕು ಎಂಬುದನ್ನು ನಿರ್ಧರಿಸಿದ್ದಾರೆ. ಉಳಿದ ಶೇ.20ರಷ್ಟು ಮತದಾರರನ್ನು ಮನವೊಲಿಸುವುದು ನಿರ್ಣಾಯಕವಾಗಲಿದೆ. ಕಳೆದ ಎರಡು-ಮೂರು ದಿನಗಳಲ್ಲಿ ಜನರ ಮನೋಭಾವದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಬಿಜೆಪಿಗೆ ಉತ್ತಮ ಅವಕಾಶವಿದೆ” ಎಂದು ಹೇಳಿದರು.

“ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣೆಯ ಕುರಿತು ವಿವಿಧ ಅಭಿಪ್ರಾಯಗಳಿದ್ದರೂ, ಚುನಾವಣೆ ಉತ್ತಮವಾಗಿ ನಡೆಯಲಿ ಎಂಬುದು ತಮ್ಮ ಆಶಯವಾಗಿದೆ” ಎಂದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...