ಹುಬ್ಬಳ್ಳಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಪ್ರಗತಿಪರ ಒಕ್ಕೂಟದಿಂದ ಪ್ರತಿಭಟನೆ

Date:

“ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು” ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರಗತಿಪರ ಒಕ್ಕೂಟದ ವತಿಯಿಂದ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.

- Advertisement -

ಹುಬ್ಬಳ್ಳಿ ನಗರದ ದುರ್ಗಬೈಲ್‌ನಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಹಾಗೂ ಕಾರ್ಯಕರ್ತರು, ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗುವ ಆತಂಕ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಆದಿವಾಸಿಗಳು, ದಲಿತರು, ಕೂಲಿ ಕಾರ್ಮಿಕರು, ಮಹಿಳೆಯರು, ಅಲೆಮಾರಿಗಳು, ಅಲ್ಪಸಂಖ್ಯಾತರು ಹಾಗೂ ಬಡಜನರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕವಿದೆ” ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.

“ಮತದಾನದ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಆಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಅವಕಾಶ ದೊರೆಯಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರುಗಳು ಕೈಬಿಡದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದರು.

“ಎಸ್‌ಐಆರ್ ರದ್ದತಿಗೆ ಆಗ್ರಹ ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣಾ ಪ್ರಕ್ರಿಯೆ ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...

ವಿಜಯಪುರ | ಜನನ–ಮರಣ ನೋಂದಣಿಯಲ್ಲಿ ಲೋಪಕ್ಕೆ ಅವಕಾಶ ಬೇಡ: ಡಿಸಿ ಆನಂದ ಕೆ. ಸೂಚನೆ

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಘಟನೆ...