ಹುಬ್ಬಳ್ಳಿ |ಮೊಬೈಲ್ ಹ್ಯಾಕ್ ಮಾಡಿ ₹3.34 ಲಕ್ಷ ಗುಳುಂ, ಮನೆ ಮುರಿದು ಚಿನ್ನಾಭರಣ ದೋಚಿದ ಕಳ್ಳರು!

Date:

ಹುಬ್ಬಳ್ಳಿ ನಗರದಲ್ಲಿ ಸೈಬರ್ ವಂಚನೆ ಹಾಗೂ ಮನೆ ಕಳ್ಳತನ ಪ್ರಕರಣಗಳು ವರದಿಯಾಗಿವೆ. ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಿಂದ ₹3.34 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದರೆ, ಮತ್ತೊಂದೆಡೆ ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ದೋಚಲಾಗಿದೆ.ನಗರದ ನಾಗಶೆಟ್ಟಿಕೊಪ್ಪ ನಿವಾಸಿ ಫಯಾಜ್ ಅಹ್ಮದ್ ಕೆ. ಅವರ ಮೊಬೈಲ್ ಫೋನ್ ಹ್ಯಾಕ್ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ಅವರ ಬ್ಯಾಂಕ್ ಖಾತೆಯಲ್ಲಿದ್ದ ₹3.34 ಲಕ್ಷ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

- Advertisement -

ಈ ಕುರಿತು ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನೊಂದು ಪ್ರಕರಣದಲ್ಲಿ, ಗೋಕುಲ ರಸ್ತೆಯ ಡೆನಿಸನ್ಸ್ ಹೋಟೆಲ್ ಸಮೀಪದ ವಸತಿ ಸಂಕೀರ್ಣದಲ್ಲಿರುವ ವಿಜಯ ಪಾಟೀಲ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು, ₹2.58 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹65 ಸಾವಿರ ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಈ ಕುರಿತು ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ...

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...