ಹುಬ್ಬಳ್ಳಿ | ಇನ್‌ಸ್ಟಾ ರೀಲ್ಸ್‌ಗಾಗಿ ಕೈಯಲ್ಲಿ ಕತ್ತಿ ಹಿಡಿದು ಪೋಸ್; ಯುವಕ ಅರೆಸ್ಟ್‌

Date:

ಇನ್‌ಸ್ಟಾ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಭಯ, ಅಸುರಕ್ಷತೆಯ ವಾತಾವರಣ ಸೃಷ್ಟಿಸುವ ರೀತಿಯಲ್ಲಿ ವರ್ತಿಸಿದ ವಿಡಿಯೋ/ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

- Advertisement -

ಹಳೇ ಹುಬ್ಬಳ್ಳಿಯ ಈಶ್ವರನಗರ 4ನೇ ಕ್ರಾಸ್‌ನ ನಿವಾಸಿ ಗಂಗಾಧರ (ತಂದೆ ಆನಂದ ಮಡಿವಾಳರ) ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಕತ್ತಿ ಹಿಡಿದುಕೊಂಡು ಭಯ ಹುಟ್ಟಿಸುವಂತೆ ವರ್ತಿಸಿದ್ದಾನೆ ಎನ್ನಲಾಗಿದೆ. ಬಳಿಕ ಆ ದೃಶ್ಯವನ್ನು ತನ್ನ ‘the_jeeva_007’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ರೀಲ್ಸ್‌ ಪೊಲೀಸರ ಗಮನಕ್ಕೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ತಕ್ಷಣ ಕ್ರಮಕೈಗೊಂಡು ಆರೋಪಿ ಗಂಗಾಧರನನ್ನು ಬಂಧಿಸಿದ್ದಾರೆ.

ಸಾರ್ವಜನಿಕರಲ್ಲಿ ಭಯ-ಅಸುರಕ್ಷತೆಯ ಭಾವನೆ ಮೂಡಿಸುವಂತಹ ಕೃತ್ಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದು ಕಾನೂನುಬಾಹಿರವಾಗಿದ್ದು, ಅಂತಹ ಪ್ರಕರಣಗಳಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಾಗುವುದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...

ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ...

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು...