ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

Date:

Advertisements

ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಯುನಿಟಿಯ ಪ್ರಧಾನ ಕಾರ್ಯದರ್ಶಿಯಾದ ಖಾಸಿಂ ಸಾಬ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್‌ ಎಂಬ ಯುವಕ ನೇಹಾ ಎಂಬ ಯುವತಿಯನ್ನು ತಾನು ಓದುತ್ತಿರುವ ಕಾಲೇಜಿನ ಆವರಣದಲ್ಲಿಯೆ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರಿದ್ದರೂ ಹುಡುಗಿ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ. ಅ ಹುಡುಗನ ಬಂಧನವಾಗಿ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಈ ಕರುಳು ಕಲಕುವ ಘಟನೆ ಖಂಡನೀಯ. ಈ ಹೆಣ್ಣುಮಗಳ ಬದುಕಿನ ಈ ರೀತಿಯ ಅಂತ್ಯಕ್ಕೆ ಕಾರಣವಾದ ವ್ಯಕ್ತಿ ಮೇಲೆ ಸೂಕ್ತ ಹಾಗು ಶೀಘ್ರ ಕಾನೂನು ರೀತಿಯ ಕ್ರಮಜರುಗಿಸಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ಖಾಸಿಂ ಸಾಬ್‌ ಆಗ್ರಹಿಸಿದ್ದಾರೆ.

ಕೊಲೆ ಆರೊಪಿಯನ್ನು ಒಂದು ಗಂಟೆಯೊಳಗೆ ಬಂಧಿಸಿದ ಹುಬ್ಬಳ್ಳಿ ಪೊಲೀಸರ ಕಾರ್ಯಕ್ಕೆ ಖಾಸಿಂ ಸಾಬ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisements

ಇತ್ತೀಚೆಗೆ ಪುತ್ತೂರಿನ ಜಯಶ್ರೀ ಎಂಬ ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಉಮೇಶ್ ಎಂಬ ಯುವಕ ಈ ಹುಡುಗಿಯನ್ನು ಹತ್ಯೆ ಮಾಡಿದ್ದ. ಇಂತಹ ನೂರಾರು ಪ್ರೀತಿ ಪ್ರೇಮಗಳ ನೆಪಗಳ ಸುತ್ತ ಹತ್ಯೆಗಳು, ಆಸಿಡ್ ದಾಳಿಗಳು ನಮ್ಮ ನಡುವೆ ನಡೆಯುತ್ತಲೇ ಇವೆ. ಈ ಕೃತ್ಯಗಳು ಅಮಾನವೀಯ ಹಾಗು ಶಿಕ್ಷಾರ್ಹ. ಇಂತಹ ಘಟನೆಗಳಿಗೆ ಕೋಮು ಧರ್ಮಗಳ ಬಣ್ಣ ಬಳಿಯುವ ನೀಚ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸುತ್ತ, ಕೆಲವು ರಾಜಕೀಯ ಮುಖಂಡರು ಈ ಘಟನೆಯನ್ನು ಧರ್ಮ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದು ಬೇಸರದ ಸಂಗತಿ.

ಆರೋಪಿಯ ಜಾತಿ, ಧರ್ಮ, ವರ್ಗ, ಹೆಸರನ್ನು ನೋಡಿ ಅಪರಾಧವನ್ನು ಆತನ ಇಡೀ ಸಮುದಾಯದ ತಲೆಗೆ ಕಟ್ಟಿ ಸಮಾಜದಲ್ಲಿ ಹಿಂದು ಮುಸ್ಲಿಮರ ಮಧ್ಯೆ ಭಯ ಮತ್ತು ಸಂಶಯವನ್ನುಂಟು ಮಾಡಿ ಈ ಚುನಾವಣಾ ಸಂಧರ್ಭದಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಹೊರಟಿರುವ ರಾಜಕಾರಣಿಗಳ ನೀಚ ನಡೆ ಖಂಡನೀಯ.

ನೇಹಾ ಹಂತಕ ಫಯಾಜ್ ಬೆಳಗಾವಿ ಜಿಲ್ಲೆ ಮುನವಳ್ಳಿಯವನಾಗಿದ್ದು, ಅಲ್ಲಿ ಹಿಂದೂ-ಮುಸ್ಲಿಮರು ಜಂಟಿಯಾಗಿ ಈ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ ಮುಸ್ಲಿಮ್ ಸಮುದಾಯದ ನೂರಾರು ಮಂದಿ ನೇಹಾ ಫೊಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಈ ಅಮಾನವಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ ಇಂತಹ ಅಮಾನವೀಯ ನೇಹಾ ಹತ್ಯೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸುತ್ತದೆ. ಜೊತೆಗೆ ಅಳ್ನಾವರ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ ಹಾಗೂ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕೆಂದು ಕಮಿಷನರ್‌ ಅವರಿಗೆ ಒತ್ತಾಯಿಸಿದ್ದಾರೆ.

ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಯಾರೇ ಕಾನೂನು ಕೈಗೆತ್ತಿಕೊಂಡರೂ ಖಂಡಿಸುತ್ತೇವೆ. ಪೊಲೀಸರ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ನೀಡಿರುವ ಹೇಳಿಕೆ ಸ್ವಾಗತಾರ್ಹ.

ಅಪರಾದಿಗೆ ಸೂಕ್ತ ಹಾಗು ಶೀಘ್ರ ಕಾನೂನು ಶಿಕ್ಷೆ ಯಾಗಬೇಕುವೆಂಬುದು ನಮ್ಮ ಬೇಡಿಕೆ.
ನೇಹ ಸಾವಿನ ದುಃಖ ಭರಿಸು ಶಕ್ತಿ ಅ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ಪ್ರಾರ್ಥನೆ ಎಂದು ಖಾಸಿಂ ಸಾಬ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X