ಹುಬ್ಬಳ್ಳಿ | ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪಿಸಬೇಕೆಂಬ ಬಿಜೆಪಿಗೆ ಭಕ್ತಿಯಲ್ಲ, ಭಯೋತ್ಪಾದಕ ಮನಸ್ಥಿತಿ ಇದೆ: ಭಾಸ್ಕರ್ ಪ್ರಸಾದ್

Date:

ಅನುಮತಿ ದೊರೆತರೂ, ದೊರೆಯದಿದ್ದರೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತೀರುತ್ತೇವೆ ಎನ್ನುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದವರಿಗೆ ಭಕ್ತಿಯಿಲ್ಲ. ಭಯೋತ್ಪಾದಕ ಮನಸ್ಥಿತಿ ಇದೆ ಎಂದು ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಕೂರಿಸುತ್ತೇವೆಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿ ಭಾಸ್ಕರ್‌ ಪ್ರಸಾದ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಬಿಜೆಪಿ ಮತ್ತು ಸಂಘ ಪರಿವಾರ ಸಮಾಜದಲ್ಲಿ ಗಲಭೆಗಳನ್ನು ಸೃಷ್ಟಿ ಮಾಡಲು ಅವಕಾಶಗಳಿಗಾಗಿ ನಿರಂತರ ತಡಕಾಟದಲ್ಲಿ ತೊಡಗಿರುತ್ತವೆ. ಅದರ ಭಾಗವಾಗಿ ಇದ್ಗಾ ಮೈದಾನಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಪಟ್ಟು ಹಿಡಿಯುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅದರಲ್ಲೂ ಹುಬ್ಬಳ್ಳಿ ಈದ್ಗಾ ಮೈದಾನ ಹಿಂದಿನಿಂದಲೂ ಇವರ ದ್ವೇಷ ರಾಜಕಾರಣಕ್ಕೆ ಸಾಕ್ಷಿಯಾಗುತ್ತ ಬಂದಿದೆ. ಮುಸ್ಲಿಮರನ್ನು ವಿಲನ್ ಮಾಡಲು ಈ ಹಿಂದುತ್ವ ಪಡೆಗಳು ಪಾಕ್ ಧ್ವಜ ಹಾರಿಸುವ, ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣ ಮಾಡುವ ನೀಚ ಕಾರ್ಯಗಳನ್ನು ನಡೆಸಿರುವ ಉದಾಹರಣೆಗಳು ಸಾಕಷ್ಟಿವೆ” ಎಂದು ಕಿಡಿಕಾರಿದ್ದಾರೆ.

“ಅನುಮತಿ ನೀಡದಿದ್ದರೂ ಹುಬ್ಬಳ್ಳಿ ಇದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತಿರುತ್ತೇವೆ ಎಂಬ ಬಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ನೆಲದ ಕಾನೂನು ಧಿಕ್ಕರಿಸುವ ಮಾತುಗಳನ್ನಾಡಿದ್ದಾರೆ. ಬಿಜೆಪಿಯ ದ್ವೇಷದ ತಂತ್ರಗಳಿಗೆ ಸರ್ಕಾರ ಸೊಪ್ಪು ಹಾಕಬಾರದು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಾವುದೇ ಕಾರಣಕ್ಕೂ ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

 ಧಾರವಾಡ | ಪ್ರಜಾಪ್ರಭುತ್ವದ ಪ್ರಥಮ ರೂವಾರಿ ಬಸವಣ್ಣ: ಬಸವರಾಜ ಹೊರಟ್ಟಿ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಅನುಷ್ಠಾನಗೊಳಿಸಿ, ಜಗತ್ತಿಗೆ...

ವಾಕ್ ಸ್ವಾತಂತ್ರ್ಯ ದುರ್ಬಳಕೆಯಲ್ಲಿ ಬಿಜೆಪಿಯೇ ನಂ.1: ಸಚಿವ ಸಂತೋಷ ಲಾಡ್

ಸಂವಿಧಾನದ ಮೂಲಕ ಅಂಬೇಡ್ಕರ್ ವಾಕ್‌ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಆದರೆ, ವಾಕ್‌ ಸ್ವಾತಂತ್ರ್ಯವನ್ನು...

ಧಾರವಾಡ | ಸಂವಿಧಾನ ಶ್ರೇಷ್ಠತೆ ಎತ್ತಿಹಿಡಿದು, ಸಂವಿಧಾನದ ಆಶಯದಂತೆ ನಡೆಯುವುದು ನಮ್ಮ ಕರ್ತವ್ಯ; ಡಿಸಿ

ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ಅದರ ಶ್ರೇಷ್ಠತೆಯನ್ನು ಎತ್ತಿಹಿಡಿದು ಸಂವಿಧಾನದ ಆಶಯದಂತೆ...

ಧಾರವಾಡ | ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಸ್ಲಿಮರೂ ಹೆಚ್ಚಾಗಿ ಪಾಲ್ಗೊಂಡಿದ್ದರು: ಸಚಿವ ಸಂತೋಷ್ ಲಾಡ್

ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ...