ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥ ವಿರುದ್ಧ ಕಠಿಣ ಕ್ರಮಕ್ಕೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಗ್ರಹ

Date:

ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದ ಹೆಸರಿನಲ್ಲಿ ಬಲೆಗೆ ಬೀಳಿಸಿ, ಮಾನಸಿಕ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಾನೂನು ವ್ಯವಸ್ಥೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತೀವ್ರವಾಗಿ ಆಗ್ರಹಿಸಿದ್ದಾರೆ.

- Advertisement -

ಧಾರವಾಡ ಜಿಲ್ಲೆಯ ಗರಗ ಎಂಬಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದ ಶ್ರೀಗಳು, ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿ, ತದನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಯ ಹಿಂದಿರುವ ಆಘಾತಕಾರಿ ವಿವರಗಳನ್ನು ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಕಿರುಕುಳ ತಾಳಲಾರದೆ ಬಾಲಕಿ ಆತ್ಮಹತ್ಯೆ

“ಅಪ್ರಾಪ್ತ ಬಾಲಕಿಯ ಚಲನವಲನಗಳನ್ನು ಹಲವು ದಿನಗಳಿಂದ ಗಮನಿಸಿದ ವ್ಯಕ್ತಿಯೊಬ್ಬ ಆಕೆಯನ್ನು ಪ್ರೇಮದ ಬಲೆಗೆ ಬೀಳಿಸಿಕೊಳ್ಳಲು ಯತ್ನಿಸಿದ್ದ. ಅದು ಫಲಕಾರಿಯಾಗದಿದ್ದಾಗ, ಆತನ ಸ್ನೇಹಿತ ಬಾಲಕಿಯ ಮತಿಗೆಡಿಸಿ, ವೈವಾಹಿಕ ಜೀವನದ ರೀತಿಯಲ್ಲಿ ಆಕೆಯನ್ನು ಬಳಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಬಾಲಕಿಯ ಛಾಯಚಿತ್ರಗಳನ್ನು(ಫೋಟೋಗಳನ್ನು) ಸಂಗ್ರಹಿಸಿ ತೀವ್ರ ಮಾನಸಿಕ ಕಿರುಕುಳ ನೀಡಿದ್ದಾನೆ. ಈ ಕಿರುಕುಳವನ್ನು ತಾಳಲಾರದೆ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ” ಎಂದು ಶ್ರೀಗಳು ವಿಷಾದಿಸಿದರು.

ಬಾಡುವ ಮುನ್ನವೇ ಚಿವುಟದಿರಿ: ಶ್ರೀಗಳ ಕಳಕಳಿ

“ಸಮಾಜದಲ್ಲಿ ಇಂತಹ ವಿಕೃತ ಪ್ರಕರಣಗಳು ಮರುಕಳಿಸಬಾರದು. ಅರಳುವ ಮನಸ್ಸುಗಳು ಹೀಗೆ ಬಾಡಿ ಹೋಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇಂತಹ ಕೃತ್ಯ ಎಸಗುವ ಕಾಮುಕರಿಗೆ ಕಾನೂನು ವ್ಯವಸ್ಥೆಯಡಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಸ್ವಾಮೀಜಿ ಒತ್ತಾಯಿಸಿದರು.

ಸ್ವಾಮೀಜಿ 4

ನೊಂದ ಕುಟುಂಬದ ಪರವಾಗಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರು ಸರ್ಕಾರಕ್ಕೆ ಪ್ರಮುಖವಾಗಿ ಎರಡು ಬೇಡಿಕೆಗಳನ್ನು ಇಟ್ಟಿದ್ದು, “ಸಮಾಜ ಕಲ್ಯಾಣ ಇಲಾಖೆಯಿಂದ ನೊಂದ ಬಾಲಕಿಯ ಕುಟುಂಬಕ್ಕೆ ತಕ್ಷಣವೇ 8 ಲಕ್ಷ ರೂಪಾಯಿಗಳ ಪರಿಹಾರ ಧನ ಬಿಡುಗಡೆ ಮಾಡಬೇಕು. ಮೃತರ ಕುಟುಂಬದ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರಿನಲ್ಲಿ ಪಾಲಿಕೆಯ ವಿಶೇಷ ಕಾರ್ಯಾಚರಣೆ: 9 ಉದ್ದಿಮೆಗಳ ಮುಚ್ಚುವಿಕೆ, 16ಕ್ಕೆ ನೋಟಿಸ್.

“ಮೃತ ಬಾಲಕಿಯ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ಕಷ್ಟದ ಅವಧಿಯನ್ನು ಭರಿಸುವ ಶಕ್ತಿ ಆಕೆಯ ಕುಟುಂಬಸ್ಥರಿಗೆ ಸಿಗಲಿ” ಎಂದು ಶ್ರೀಗಳು ಪ್ರಾರ್ಥಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...