ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

Date:

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಎಸ್.ವಿ ಸಂಕನೂರ ಅವರು ಚುನಾಯಿತರಾಗಿರುತ್ತಾರೆ ಎಂದು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಗಳು ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ ಅವರು ತಿಳಿಸಿದ್ದಾರೆ.

- Advertisement -

ಅಕ್ಟೋಬರ್ 27 ರಂದು ಬೆಳಿಗ್ಗೆ 8 ಗಂಟೆಯಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭಗೊಂಡಿದ್ದು, ಅಕ್ಟೋಬರ್ 28 ಮಧ್ಯರಾತ್ರಿ 2 ಗಂಟೆಗೆ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಅಕ್ಟೋಬರ್ 23 ರಂದು ನಡೆದ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 97,400 ಮತದಾರರ ಪೈಕಿ 73,658 ಜನ ಮತ ಚಲಾಯಿಸಿದ್ದು, ಶೇ.75.62 ರಷ್ಟು ಮತದಾನವಾಗಿತ್ತು. ಮತ ಚಲಾಯಿಸಿದವರಲ್ಲಿ 45,110 ಪುರುಷರು ಹಾಗೂ 28,548 ಮಹಿಳೆಯರು ಇದ್ದರು.

ಮೊದಲನೆಯ ಪ್ರಾಶಸ್ತ್ಯದ ಮತ ಎಣಿಕೆ ಅಂತ್ಯದಲ್ಲಿ ಎಸ್.ವಿ ಸಂಕನೂರ ಅವರು 33,711 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಮತ ಎಣಿಕೆಯ ವಿವಿಧ ಸುತ್ತುಗಳಲ್ಲಿ ಎಸ್.ವಿ ಸಂಕನೂರ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮೋಹನ ಲಿಂಬಿಕಾಯಿ ಅವರಿಂದ 9,323 ಅಂತರದ ಮುನ್ನಡೆಯನ್ನು ಪಡೆದು ಚುನಾಯಿತರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮೋಹನ ಲಿಂಬಿಕಾಯಿ ಅವರು 24,388 ಮತಗಳು, ಪಕ್ಷೇತರ ಅಭ್ಯರ್ಥಿಯಾದ ನಿಶಾಂತ ಶಂಕರ ಬಂಕಾಪುರ 143 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಚನ್ನಪ್ಪ ಗಂಗಾಧರ 55 ಮತಗಳು, ಪಕ್ಷೇತರ ಅಭ್ಯರ್ಥಿಯಾದ ತಳವಾರ ಶಿವಕುಮಾರ 42 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಅಬ್ದುಲ್ ಮನ್ನಾನ 120 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಡಾ.ಜಿ.ಎಚ್ ಇಮ್ರಾಪುರ 338 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಉಮೇಶ ಕೃಷ್ಣಪ್ಪ ದೈವಜ್ಞ್ 228 ಮತಗಳು, ಕೆ.ಆರ್. ಎಸ್ ಪಕ್ಷದ ಅಭ್ಯರ್ಥಿಯಾದ ಕೃಷ್ಣಾ ಎಚ್. ಬಳೆಗಾರ 141 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಕಾಂತಕುಮಾರ ಆರ್ 4,055 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಜಿಶಾನ್ ಡಿ. ಶಿರಸಂಗಿ 39 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಜೀಶಾನ್ ಅಹ್ಮದಖಾನ್ ಪಟ್ಹಾನ್ 62 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಬಸವರಾಜ ಶಂಕರಪ್ಪ ಕೊಟಗಿ 39 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿಯಾದ ಸಂತೋಷ ಮನೋಹರ ವೆರ್ಣಿಕರ 85 ಮತಗಳನ್ನು ಪಡೆದಿದ್ದಾರೆ.

ಒಟ್ಟು 73,691 ಮತಗಳಲ್ಲಿ 63,446 ಮತಗಳು ಮಾನ್ಯವಾಗಿದ್ದು, 10,245 ಮತಗಳು ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ಬ್ರೆಜಿಲ್‌ ಚುನಾವಣೆ | ಸೋಲುಂಡ ಬೆನ್ನಲ್ಲೇ‌ ಪ್ಲೇವಿಯೋ ಬೊಲ್ಸೊನಾರೊ ಅಮೆರಿಕಗೆ ಪಲಾಯನ!

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೊಲ್ಸೊನಾರೊ ಅವರ ಪುತ್ರ, ಹಾಲಿ ಸೆನೆಟರ್...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...