ಹುಬ್ಬಳ್ಳಿ | ಸಂಸದ ಪ್ರಲ್ಹಾದ್ ಜೋಶಿ ವಿರುದ್ಧ ಸಿಡಿದೆದ್ದ ಕಬ್ಬು ಬೆಳೆಗಾರರು: ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ

Date:

ಡಾ. ಸ್ವಾಮಿನಾಥನ್‌ ಆಯೋಗದ ವರದಿ ಜಾರಿ, ಪ್ರತಿ ಟನ್‌ ಕಬ್ಬಿಗೆ ಕನಿಷ್ಠ ₹5,500 ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ ರಾಜ್ಯ ರೈತ ಸಂಘ ಹಸಿರು ಸೇನೆ ಸಂಘಟನೆಯು ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ಸೆಪ್ಟೆಂಬರ್ 29ರಿಂದ ಅನಿರ್ದಿಷ್ಟಾವಧಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.

- Advertisement -

ಕೇಂದ್ರ ಸರ್ಕಾರವು ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಒತ್ತಾಯಿಸಿದ ಕಬ್ಬು ಬೆಳೆಗಾರರು ಸೆ.29ರಂದು ಹುಬ್ಬಳ್ಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನೆಯ ಮುಂದೆ ಮುಷ್ಕರಕ್ಕಾಗಿ ಹೊರಟಿದ್ದು, ಎಲ್ಲ ರೈತರು ಹುಬ್ಬಳ್ಳಿಗೆ ಬರಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಹೇಳಿದ್ದ ಹಿನ್ನೆಲೆಯಲ್ಲಿ ಭಾರೀ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಕೇಂದ್ರ ಸಚಿವ ಜೋಶಿ ಅವರಿಗೆ ನಮ್ಮ ಬೇಡಿಕೆಗಳನ್ನು ತಿಳಿಸೋಣ, ಅವರು ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಗುರ್ಲಾಪುರ ಕ್ರಾಸ್‌ನಲ್ಲಿ ಮತ್ತೆ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

“ರೈತರ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಮುಖಂಡತ್ವದ ರೈತ ಸಂಘವು ಜಾತಿ, ಧರ್ಮ ಹಾಗೂ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗದೆ, ಸ್ವತಂತ್ರವಾಗಿ ಮತ್ತು ಪಾರದರ್ಶಕವಾಗಿ ರೈತರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಕೆಲವು ಸಂಘಗಳು ನಮ್ಮ ಸಂಘಟನೆಯನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದು, ನಾವು ಯಾರೂ ಅದಕ್ಕೆ ಹೆದರುವುದಿಲ್ಲ” ಎಂದು ತಿಳಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಶ್ವಾಪುರದಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಿವಾಸ ಹಾಗೂ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಅವರ ಕಚೇರಿಗೆ ರೈತರು ಮುತ್ತಿಗೆ ಹಾಕುವುದನ್ನು ತಡೆಯಲು ಮೊದಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ಯಾರಿಕೇಡ್‌ಗಳನ್ನು ಹಾಕಿ ಪ್ರವೇಶ ನಿಷೇಧಿಸಲಾಗಿದೆ.

WhatsApp Image 2026 09 29 at 1.14.41 PM

ನೆಹರೂ ಮೈದಾನದ ಸುತ್ತ ಪ್ರಮುಖ ಗೇಟ್‌ ಹಾಗೂ ಸ್ಥಳಗಳಲ್ಲಿ ಎಸಿಪಿ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪಿಐ, ಪಿಎಸ್‌ಐಗಳು ಬಂದೋಬಸ್ತ್‌ ಉಸ್ತುವಾರಿ ವಹಿಸಲಿದ್ದಾರೆ. ಮೈದಾನದ ಒಳಗೆ ಶಹರ ಠಾಣೆ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯದಲ್ಲಿ ಇರಲಿದ್ದಾರೆ. ಹೊರಗಡೆ 80 ಮಂದಿಯನ್ನು ನಿಯೋಜಿಸಲಾಗಿದೆ. ಮೈದಾನದ ಒಳಗೆ ಎರಡು ಊಟದ ಕೌಂಟರ್‌ ತೆರೆಯಲಾಗಿದ್ದು, ಅಲ್ಲಿಯೂ 20 ಮಂದಿ ಪೊಲೀಸರನ್ನು ಭದ್ರತೆಗೆ ಹಾಕಲಾಗಿದೆ.

ಮುಂಜಾಗ್ರತೆಯಾಗಿ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದ ಬಳಿಯಿರುವ ಬಿಎಸ್‌ಎನ್‌ಎಲ್‌ ಕಚೇರಿ, ಅಂಚೆ ಕಚೇರಿ, ರೈಲ್ವೆ ನಿಲ್ದಾಣ ಮುಖ್ಯದ್ವಾರ, ಕಾಂಗ್ರೆಸ್‌ ಕಚೇರಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಜೆಸಿ ನಗರದಲ್ಲಿರುವ ಶಾಸಕ ಮಹೇಶ ಟೆಂಗಿನಕಾಯಿ ಕಚೇರಿ, ದುರ್ಗದ ಬೈಲ್‌, ಗಣೇಶಪೇಟೆ ವೃತ್ತ ಸೇರಿ 15 ಕ್ಕೂ ಹೆಚ್ಚು ಸ್ಥಳಗಳನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಿ, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನೆಹರೂ ಮೈದಾನದ ಸುತ್ತಲಿನ ಕಟ್ಟಡದ ಮೇಲೆ ಶಸ್ತ್ರಧಾರಿ ಸಿಬ್ಬಂದಿಯನ್ನು ನಿಯೋಜಿಸಿ, ಪ್ರತಿಭಟನಕಾರರ ಮೇಲೆ ನಿಗಾ ಇಡಲು ವ್ಯವಸ್ಥೆ ಮಾಡಲಾಗಿದೆ. ಸಶಸ್ತ್ರ ನೀಸಲು ಪಡೆಯ ಆರು ತುಕಡಿಗಳು ಹಾಗೂ 250ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

‘ನೆಹರೂ ಮೈದಾನದಲ್ಲಿ ವ್ಯವಸ್ಥೆ’

ಉತ್ತರ ಪ್ರದೇಶ, ಮಹಾರಾಷ್ಟ್ರ, ತೇಲಂಗಾಣ ಸೇರಿ ವಿವಿಧ ರಾಜ್ಯಗಳಿಂದ ಹಾಗೂ ರಾಜ್ಯದ 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ರತಿಭಟನನಿರತ ರೈತರಿಗೆ ನೆಹರೂ ಮೈದಾನದಲ್ಲಿಯೇ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಮಂಗಳವಾರ ಬೆಳಿಗ್ಗೆ 11ಕ್ಕೆ ಚನ್ನಮ್ಮ ವೃತ್ತದಿಂದ ನೆಹರೂ ಮೈದಾನದವರೆಗೆ ಮೆರವಣಿಗೆ ಮೂಲಕ ಬಂದು, ಅನಿರ್ದಿಷ್ಟಾವಧಿವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸಲಿದ್ದಾರೆ. ರೈತ ಮುಖಂಡರಾದ ಚುನಪ್ಪ ಪೂಜೇರಿ, ಶಶಿಕಾಂತ ಗುರೂಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ’ ಎಂದು ರೈತ ಮುಖಂಡ ಸಿದ್ದು ತೇಜಿ ಹೇಳಿದರು.

ರೈತ ಸಂಘಟನೆ ನೀಡಿದ ಮನವಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಕಚೇರಿ ಸುತ್ತ ಪೊಲೀಸ್‌ ಇಲಾಖೆ ಭದ್ರತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಆರ್‌. ಸ್ನೇಹಲ್‌ ತಿಳಿಸಿದ್ದಾರೆ.

ನನಗೆ ಫೆಬ್ರವರಿ 2026ರಲ್ಲಿ ರೈತ ಮುಖಂಡರು ಭೇಟಿಯಾಗಿ, ಕಬ್ಬಿನ ಎಫ್‌ಆರ್‌ಪಿ (FRP) ಬೆಲೆಯನ್ನು ಹೆಚ್ಚಿಸಬೇಕೆಂದು ವಿನಂತಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಪ್ರತಿ ವರ್ಷ ಎಫ್‌ಆರ್‌ಪಿಯನ್ನು ಹೆಚ್ಚಿಸುತ್ತಿದ್ದು, ಮೇ ತಿಂಗಳಲ್ಲಿ ಇದನ್ನು ₹365ಕ್ಕೆ ಹೆಚ್ಚಿಸಲಾಗಿದೆ. ಈ ನಿರ್ಧಾರವನ್ನು ಬೆಲೆ ನಿಗದಿ ಸಮಿತಿ ಹಾಗೂ ರಾಜ್ಯ ಸರ್ಕಾರದ ಕಬ್ಬು ಆಯುಕ್ತರ ವರದಿ ಮತ್ತು ಶಿಫಾರಸುಗಳನ್ನು ಪರಿಗಣಿಸಿ ತೆಗೆದುಕೊಳ್ಳಲಾಗುತ್ತದೆ ಎಂದು ಕೇಂದ್ರ ರಾಜ್ಯ ಸಚಿವ ಪ್ರಲ್ಹಾದ್‌ ಜೋಶಿ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಮೇ ತಿಂಗಳ ನಂತರ ಭೇಟಿಯಾಗಲು ನನಗೆ ರೈತ ಬಾಂಧವರಿಂದ ಯಾವುದೇ ವಿನಂತಿ ಬಂದಿಲ್ಲ, ಆದಾಗ್ಯೂ ರೈತರ ವಿನಂತಿಯನ್ನು ಮನ್ನಿಸಿಲ್ಲ ಎಂಬ ಭಾವನೆ ಇದ್ದರೆ ಅದಕ್ಕೆ ವಿನಮ್ರವಾಗಿ ಸ್ಪಷ್ಟನೆ ನೀಡುತ್ತ, ಪ್ರತಿ ವರ್ಷದಂತೆ ಈ ಬಾರಿಯೂ ಸೂಕ್ತ ಬೆಲೆ ನೀಡಲಾಗುವುದು. ರೈತ ಮುಖಂಡರಿಗೆ ಹಾಗೂ ಹೋರಾಟಗಾರರಿಗೆ ಮುಕ್ತ ಆಹ್ವಾನವನ್ನು ನೀಡುತ್ತೇನೆ. ಅವರು ನವದೆಹಲಿಗೆ ಬಂದಲ್ಲಿ ಅವರನ್ನು ಗೌರವದಿಂದ ಸ್ವಾಗತಿಸಿ, ಸಂಬಂಧಿತರೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿ ರೈತರ ಹಿತಾಸಕ್ತಿಗೆ ಅನುಗುಣವಾಗಿ ನಿರ್ಧಾರಕ್ಕಾಗಿ ಮೋದಿ ಸರ್ಕಾರ ಸದಾ ಸಿದ್ಧವಾಗಿದೆ‌” ಎಂದು ಹೇಳಿದ್ದಾರೆ.

ಇದನ್ನೂ ಓದಿದ್ದೀರಾ? ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

“ರೈತರ ಹಿತಾಸಕ್ತಿಯನ್ನು ಕಾಪಾಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಯ್ದುಕೊಳ್ಳಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಲವು ಬದಲಾವಣೆಗಳನ್ನು ತಂದಿವೆ. ಇದೀಗ ಕಬ್ಬು ಬೆಳೆಗಾರರಲ್ಲಿ ಉಂಟಾಗಿರುವ ಗೊಂದಲ, ಸಮಸ್ಯೆಗಳು ಹಾಗೂ ಇನ್ನಿತರ ಯಾವುದೇ ವಿಷಯ ಕುರಿತಂತೆ ಸುದೀರ್ಘವಾಗಿ ಚರ್ಚಿಸಲು ಹಾಗೂ ನಮ್ಮ ಸರ್ಕಾರ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸುತ್ತೇವೆ. ತಮ್ಮ ಅಹವಾಲುಗಳನ್ನು ಅತ್ಯಂತ ವಿನರ್ಮಪೂರ್ವಕವಾಗಿ ನಾವು ಕೇಳುತ್ತೇವೆ ಹಾಗೂ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತೇವೆ” ಎಂದಿದ್ದಾರೆ.

ಸೆಪ್ಟೆಂಬರ್ 29ರ ಇಂದು ರೈತರು ಪ್ರತಿಭಟನೆ ಹಮ್ಮಿಕೊಳ್ಳುವ ಮುನ್ನವೇ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸದ ಬಳಿ ಬ್ಯಾರಿಕೇಡ್‌ಗಳನ್ನು ಅಳವಡಿಸುತ್ತಿರುವ ದೃಶ್ಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...