ಮಸೀದಿಯಲ್ಲಿ ಗಣಪತಿ ಕೂರಿಸುತ್ತೇವೆ, ಈದ್ಗಾ ಪಾಕಿಸ್ತಾನದ ಆಸ್ತಿ ಅಲ್ಲ: ಯತ್ನಾಳ್, ಮುತಾಲಿಕ್ ದ್ವೇಷ ಭಾಷಣ

Date:

ಈದ್ಗಾ ಮೈದಾನ ಯಾರಪ್ಪನ ಆಸ್ತಿಯೂ ಅಲ್ಲ. ಈ ಮೈದಾನವನ್ನು ಈದ್ಗಾ ಮೈದಾನ ಎಂದು ಕರೆದರೆ, ಅವರು ಸಾಬರಿಗೆ ಹುಟ್ಟಿದಂತೆ, ಈ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನವೆಂದು ಹೇಳಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದ್ವೇಷ ಬಿತ್ತುವ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

- Advertisement -

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬದಂದು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್‌ ಅವಕಾಶ ನೀಡಿತ್ತು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನೂ ಪ್ರತಿಷ್ಠಾಪಿಸಲಾಗಿತ್ತು. ಗುರುವಾರ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆದಿದೆ. ಮೆರವಣಿಗೆಗೂ ಮುನ್ನ ಈದ್ಗಾ ಮೈದಾನದಲ್ಲಿ ಮಾತನಾಡಿರುವ ಯತ್ನಾಳ್ ಕೋಮು ದ್ವೇಷ ಬಿತ್ತುವ ಹೇಳಿಕೆಗಳನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಹುಬ್ಬಳ್ಳಿಯ ಈದ್ಗಾ ಮೈದಾನ ಯಾರಪ್ಪನ ಆಸ್ತಿ ಅಲ್ಲ. ಅಂಜುಮನ್ ಆಸ್ತಿ ಅಲ್ಲಾ, ಪಾಕಿಸ್ತಾನದ ಆಸ್ತಿ ಅಲ್ಲ. ರಾಜ್ಯದ ವಕ್ಫ್ ಆಸ್ತಿ. ಇದನ್ನು ಸರ್ಕಾರದ ವಶಕ್ಕೆ ಪಡೆಯಲು ಹೋರಾಡುತ್ತಿದ್ದೇವೆ. ಮುಂದೆ ಇದೇ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ” ಎಂದು ಪ್ರಚೋದನಾಕಾರಿ ಮಾತುಗಳನ್ನಾಡಿದ್ದಾರೆ.

“2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗುತ್ತಾರೆ. ಆಗ ಪಾಕಿಸ್ತಾನದ ಲಾಹೋರ್​ನಲ್ಲೂ ಗಣಪತಿ ಮೂರ್ತಿ ಕೂರಿಸುತ್ತೇವೆ. ಇಲ್ಲಿ ರಾಷ್ಟ್ರಧ್ವಜ ಹಾರಿಸಲು ಈ ಮಕ್ಕಳ ಅನುಮತಿ ಬೇಕಂತೆ. ನಾವು ಚಂದ್ರನ ಮೇಲೆ ರಾಷ್ಟ್ರಧ್ವಜ ಹಾರಿಸಿ ಬಂದಿದ್ದೇವೆ” ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಗಣೇಶ ಕೂರಿಸುತ್ತೇವೆ – ಕೋಮು ಸಾಮರಸ್ಯ ಕದಡುವ ಹೇಳಿಕೆ ನೀಡಿದ ಮುತಾಲಿಕ್

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ನಡೆದಿದೆ. ಈಗ ಈದ್ಗಾ ಮೈದಾನ ಶುದ್ದಿಯಾಗಿದೆ. ಅಂಜುಮನ್ ಕಮಿಟಿಯವರು ನೀಚರು. ಹಿಂದೂ ಸಮಾಜವನ್ನು ಕೆಣಕಿದರೆ ನಾವು ಮಸೀದಿಯಲ್ಲಿ ಗಣಪತಿ ಕೂರಿಸುತ್ತೇವೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕೋಮ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ.

“ಅಂಜುಮನ್ ಕೋರ್ಟ್​ಗೆ ಹೋಗುತ್ತೇವೆ ಅನ್ನೋದು ಸರಿ ಅಲ್ಲ. ನಿಮ್ಮ ಸೊಕ್ಕು ಸರಿ ಅಲ್ಲ. ಇದೇನು ಪಾಕಿಸ್ತಾನ ಅಲ್ಲ, ಅಫಘಾನಿಸ್ತಾನ ಅಲ್ಲ. ಇದು ನಮ್ಮ ನೆಲ, ಮೈದಾನ ಪಾಲಿಕೆ ಆಸ್ತಿ” ಎಂದು ಮುತಾಲಿಕ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...