ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

Date:

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ ಆನೆ ಧ್ರುವರಾಜ ಶುಕ್ರವಾರ ಬೆಳಗ್ಗೆ ಅನಾರೋಗ್ಯದಿಂದ ನಿಧನ ಹೊಂದಿದೆ. ಮಾವುತ, ಭಕ್ತರು ದೇಗುಲದ ಆಡಳಿತ ಮಂಡಳಿ ಕಣ್ಣೀರು ಮಿಡಿದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿದ್ದ ಧ್ರುವರಾಜ ಅಪಾರ ಅಭಿಮಾನಿಗಳನ್ನು ಹೊಂದಿತ್ತು. 25 ವರ್ಷಗಳ ಹಿಂದೆ ಕರಿಸಿದ್ದೇಶ್ವರ ಮಠಕ್ಕೆ ಕರೆತರಲಾಗಿದ್ದ ಧ್ರುವರಾಜ, ಅಂದಿನಿಂದಲೇ ಭಕ್ತರು ಹಾಗೂ ಸ್ಥಳೀಯರೊಂದಿಗೆ ವಿಶೇಷ ಪ್ರೀತಿ, ವಾತ್ಸಲ್ಯದ ಬಾಂಧವ್ಯ ಬೆಳೆಸಿಕೊಂಡಿತ್ತು. ತನ್ನ ಮಮತೆಯ ನಡವಳಿಕೆ ಹಾಗೂ ಆತ್ಮೀಯತೆಯಿಂದ ಎಲ್ಲರ ಮನಗೆದ್ದಿತ್ತು.

- Advertisement -
df2a08ee 2089 4fa9 bef2 bddd2c407ba9

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವರಾಜನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಧ್ರುವರಾಜನ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಅಲಕನೂರು ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಕಳೆದ ಎರಡೂವರೆ ದಶಕಗಳಿಂದ ದೇವಾಲಯದ ಅವಿಭಾಜ್ಯ ಅಂಗವಾಗಿದ್ದ ಧ್ರುವರಾಜನ ಅಗಲಿಕೆ ಭಕ್ತರು ಹಾಗೂ ಗ್ರಾಮಸ್ಥರಿಗೆ ತುಂಬಲಾರದ ನಷ್ಟವಾಗಿದೆ.
ದೇವಸ್ಥಾನದ ಅಧ್ಯಕ್ಷ ನಾಗಪ್ಪ ಕಂಠಿಕಾರ, ಶಾಸಕ ಮಹೇಂದ್ರ ತಮ್ಮಣ್ಣವರ, ಮಾಜಿ ಶಾಸಕ ಪಿ.ರಾಜೀವ, ಮಾವುತ, ಸ್ಥಳೀಯರು, ಭಕ್ತರು ಹಾಗೂ ಧ್ರುವರಾಜನ ಅಪಾರ ಅಭಿಮಾನಿಗಳು ಗಜರಾಜನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು ಸಂಸಾರ ʻಜಾಲವಾಡಗಿʼ

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು...

ಈ ದಿನ ಸಂಪಾದಕೀಯ | ನರಾಧಮ ಇಸ್ರೇಲಿನ ನೀಚ ಕೃತ್ಯಗಳು ಮತ್ತು ಮೋದಿ ಮೌನಕ್ಕೆ ಕೊನೆಯೇ ಇಲ್ಲವೇ?

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ ಕುರಿತ ಭಾರತದ ನಿಲುವು ಅತ್ಯಂತ ನಿರಾಶಾಜನಕ. ಮೋದಿ...