ಚಾಮರಾಜನಗರ | ಜನನ, ಮರಣ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ : ಶಿಲ್ಪಾ ನಾಗ್ ಸೂಚನೆ

Date:

Advertisements

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾಗರಿಕ ನೊಂದಣಿ ಪದ್ದತಿಯಡಿ ಜಿಲ್ಲಾ ಮಟ್ಟದ ಜನನ, ಮರಣಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ‘ ಜಿಲ್ಲೆಯಲ್ಲಿ ಜನನ, ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಡಿಜಿಟಲೀಕರಣಗೊಳಿಸಲು ಕ್ರಮ ವಹಿಸುವಂತೆ ‘ ಅಧಿಕಾರಿಗಳಿಗೆ ಸೂಚನೆ ನೀಡಿದರು.

” ವಿದ್ಯಾರ್ಥಿಗಳಿಗೆ ಶಾಲಾ ಪ್ರವೇಶಕ್ಕಾಗಿ ಹಾಗೂ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರಿಗೆ ಜನನ ಪ್ರಮಾಣ ಪತ್ರಗಳು ಅತ್ಯಾವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಾಕಷ್ಟು ವರ್ಷಗಳಿಂದ ಲಭ್ಯವಿರುವ ಜನನ, ಮರಣ ಪತ್ರಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಅಲ್ಲದೆ, ದಾಖಲೆಗಳನ್ನು ಮುಂದಿನ ಆರು ತಿಂಗಳೊಳಗೆ ಡಿಜಿಟಲೀಕರಣಗೊಳಿಸುವಂತೆ ” ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಾಮಾನ್ಯವಾಗಿ ಜನನ ಪ್ರಮಾಣ ಪತ್ರಗಳನ್ನು 21 ದಿನದೊಳಗೆ ನೀಡಬೇಕಾಗಿದೆ. ಜನನ, ಮರಣ ಪ್ರಮಾಣ ಪತ್ರಗಳನ್ನು ಡಿಜಿಟಲೀಕರಣ ಮಾಡುವುದರಿಂದ ಜನರು ಕಚೇರಿಗೆ ಅಲೆದಾಡುವುದು ತಪ್ಪಲಿದೆ. ನಮ್ಮ ಜಿಲ್ಲೆಗೆ ಸಂಬಂಧಿಸಿದ ಜನನ ಮರಣ ಪತ್ರಗಳು ಬೇರೆ ಜಿಲ್ಲೆಗಳಲ್ಲಿದ್ದರೂ ಅದನ್ನು ತರಿಸಿಕೊಳ್ಳುವ ಕೆಲಸವಾಗಬೇಕು. ಸಂಬಂಧಿಸಿದ ತಾಲ್ಲೂಕು ಕಚೇರಿಗಳಲ್ಲಿ, ತಾಲ್ಲೂಕುವಾರು ಹಾಗೂ ವರ್ಷಾವಾರು ದಾಖಲೆಗಳನ್ನು ಸಂಗ್ರಹಿಸಿಡುವ ಕಾರ್ಯ ಆದ್ಯತೆ ಮೇರೆಗೆ ಆಗಬೇಕು ಎಂದರು.

Advertisements

ಪರಿಶಿಷ್ಟ ಪಂಗಡಗಳ ಆದಿವಾಸಿ ಜನರು ವಾಸಿಸುವ ಜಿಲ್ಲೆಯ ಹಾಡಿ, ಪೋಡುಗಳಲ್ಲಿನ ಮಕ್ಕಳಿಗೆ ಜನನ ಪ್ರಮಾಣ ಪತ್ರಗಳನ್ನು ನಿಗದಿತ ಕಾಲ ಮಿತಿಯಲ್ಲಿ ನೀಡಬೇಕು. ಜನನ ಪ್ರಮಾಣ ಪತ್ರಗಳು ದೊರಕದೇ ಶಾಲೆಗೆ ಸೇರಲು ಸಾಧ್ಯವಾಗುತ್ತಿಲ್ಲವೆಂಬ ದೂರುಗಳು ಬರಬಾರದು. ಜನನ, ಮರಣ ಪ್ರಮಾಣ ಪತ್ರಗಳ ನೀಡುವಿಕೆ ಕುರಿತ ಮಾಹಿತಿಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪ್ರದರ್ಶಿಸಬೇಕು. ಮರಣ ಪ್ರಮಾಣ ಪತ್ರಗಳಲ್ಲಿ ಎಲ್ಲಾ ವಿಷಯಗಳನ್ನು ಕ್ರಮಬದ್ಧವಾಗಿ ದಾಖಲಿಸುವಲ್ಲಿ ಗ್ರಾಮ ಆಡಳಿತ, ಅಧಿಕಾರಿಗಳು ನಿಗಾ ವಹಿಸುವಂತೆ ನಿರ್ದೇಶನ ನೀಡಿದರು.

ಜನನ, ಮರಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ವಿಳಂಬಕ್ಕೆ ಅವಕಾಶವಾಗದಂತೆ ಗ್ರಾಮ ಪಂಚಾಯಿತಿಗಳು, ಸ್ಥಳೀಯ ಸರ್ಕಾರಿ ಆಸ್ಪತ್ರೆಗಳು ಎಚ್ಚರ ವಹಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಬೇಕು. ಜನನ, ಮರಣ ಪ್ರಮಾಣ ಪತ್ರ ನೀಡಿಕೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಸಾಂಖ್ಯಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ದಾಖಲೆಗಳ ನಿರ್ವಹಣೆ ಸಂಬಂಧ ತಾಲೂಕು ಮಟ್ಟದ ಸಭೆಗಳನ್ನು ನಿಯಮಿತವಾಗಿ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿ ಪವನ್‍ ಕುಮಾರ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಮಹೇಶ್, ಜಿಲ್ಲಾ ಸರ್ಜನ್ ಡಾ. ಮಹೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ. ಸುಧಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಬೀದ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X