ಉಡುಪಿ | ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ ಅನುಷ್ಠಾನ : ಜಿಲ್ಲಾಧಿಕಾರಿ

Date:

ಉಡುಪಿ ನಗರ ವ್ಯಾಪ್ತಿಯಲ್ಲಿ ಡಿಜಿಟಲ್ ಆಪ್ ಆಧಾರಿತ ಆಟೋ ಸಾರ್ವಜನಿಕ ಸಾಗಾಣಿಕೆಗೆ ಸರಕಾರದ ಪರವಾನಿಗೆ ಪತ್ರ ಪಡೆಯುವುದು ಕಡ್ಡಾಯ. ಪರವಾನಿಗೆ ಹೊಂದಿದ್ದಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಚಲಾವಣೆ ಮಾಡುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ನಮ್ಮ ಯಾತ್ರಿ ಆಪ್ ಹಾಗೂ ರ‍್ಯಾಪಿಡ್ ಆಪ್ ಆಟೋ ಸಂಚಾರ ಕುರಿತ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಉಡುಪಿ ನಗರ ವ್ಯಾಪ್ತಿಯ ಮಣಿಪಾಲ್ ನಲ್ಲಿ ಡಿಜಿಟಲ್ ಆಪ್ ಆಧಾರಿತ ಬಾಡಿಗೆ ಆಟೋಗಳ ಚಾಲನೆಯ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿವೆ. ಡಿಜಿಟಲ್ ಆಪ್ ಆಧಾರಿತ ಕೆಲವು ಸಂಸ್ಥೆಗಳು ಸೇವೆಗಳನ್ನು ಒದಗಿಸುತ್ತಿವೆ. ಈ ಬಗ್ಗೆ ಸರಕಾರದ ಪರವಾನಿಗೆ ಸೇರಿದಂತೆ ಮತ್ತಿತರ ದಾಖಲೆಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಮುಂದೆ ಹಾಜರುಪಡಿಸಿದ್ದಲ್ಲಿ ಸ್ಥಳೀಯ ಆಟೋ ಚಾಲಕರ ಯೂನಿಯನ್‌ಗಳ ಪದಾಧಿಕಾರಿಗಳು ಹಾಗೂ ಆಪ್ ಆಧಾರಿತ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಾಧಕ-ಬಾಧಕಗಳನ್ನು ಚರ್ಚಿಸಿ, ತೀರ್ಮಾನಿಸಲಾಗುವುದು ಎಂದರು.

1009419027

ಉಡುಪಿ ನಗರದ ವಲಯ -1 ರಲ್ಲಿ ಸುಮಾರು 4000 ಕ್ಕೂ ಹೆಚ್ಚು ಆಟೋರಿಕ್ಷಾಗಳು ನೋಂದಣಿ ಮಾಡಿಕೊಂಡು ಸಂಚರಿಸುತ್ತಿದ್ದು, ಆಟೋ ನಿಲ್ದಾಣಗಳಲ್ಲಿ ಚಾಲಕರು ಸರತಿ ಸಾಲಿನ ಅನ್ವಯ ಸೇವೆಗಳನ್ನು ಒದಗಿಸುತ್ತಿದ್ದಾರೆ. ಇವರಲ್ಲಿ ಕೆಲವರು ಹಲವು ವರ್ಷಗಳಿಂದ ಈ ವೃತ್ತಿಯನ್ನು ನಡೆಸಿಕೊಂಡು ಬರುತ್ತಿದ್ದು, ಅವರ ಅಭಿಪ್ರಾಯಗಳನ್ನು ಪಡೆಯಲಾಗುವುದು ಎಂದ ಅವರು, ಪ್ರಸ್ತುತ ಚಾಲನೆಯಲ್ಲಿರುವ ಪ್ರತಿಯೊಂದು ಆಟೋಗಳು ಕಡ್ಡಾಯವಾಗಿ ಮೀಟರ್ ಬಳಕೆ ಮಾಡಿ, ಚಲಾಯಿಸಬೇಕು ಎಂದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಉಡುಪಿ ನಗರ ಭಾಗದಲ್ಲಿ ಜನರ ಹಾಗೂ ಪ್ರವಾಸಿಗರ ಬೇಡಿಕೆ ಮತ್ತು ಆಟೋ ನಿಲ್ದಾಣಗಳಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ಬಾಡಿಗೆ ಮಾಡಲು ಅವಕಾಶ ನೀಡಬೇಕು. ಆಟೋರಿಕ್ಷಾ ನಿಲ್ದಾಣಗಳಲ್ಲಿ ರಿಕ್ಷಾ ಚಾಲಕರುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಗಮನಹರಿಸಬೇಕು. ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರದಿಂದ ನಗರದಲ್ಲಿ ಸುಮಾರು 25 ರಿಂದ 30 ವರ್ಷಗಳಿಂದ ಆಟೋ ಚಾಲನೆ ಮಾಡಿ, ಜೀವನೋಪಾಯ ನಡೆಸುತ್ತಿರುವವರಿಗೆ ಉಂಟಾಗುವ ಸಮಸ್ಯೆಗಳನ್ನು ಚರ್ಚಿಸಿ, ನಂತರ ಡಿಜಿಟಲ್ ಆಪ್ ಆಟೋ ಸಂಚಾರಕ್ಕೆ ಅವಕಾಶ ನೀಡಬೇಕು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಡಿಜಿಟಲ್ ಆಪ್ ಬೇಸ್ಡ್ ಅಟೋ ಸಂಚಾರವನ್ನು ಅಭಿವೃದ್ಧಿಗೊಳಿಸಿದಾಗ ಅದರಿಂದ ಇತರೆ ಆಟೋ ಚಾಲಕರುಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಬೇಕು ಎಂದ ಅವರು, ವಲಯ-2 ರಲ್ಲಿ ಪರವಾನಿಗೆ ಪಡೆದು ನಗರ ವ್ಯಾಪ್ತಿಯಲ್ಲಿ ಆಟೋ ಚಾಲನೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಆಟೋ ನಿಲ್ದಾಣಗಳಲ್ಲಿ ಈ ಹಿಂದೆ ನೋಂದಣಿ ಹೊಂದಿದವರಿಗೆ ಮಾತ್ರ ಅವಕಾಶ ಇದೆ. ನಿಲ್ದಾಣ ಹೊಂದದೇ ಇರುವ ಅಟೋ ಚಾಲಕರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಅಲ್ಲಿನ ಆಟೋ ದಟ್ಟಣಿಕೆ ನೋಡಿ ನಗರಸಭೆಯ ಪೌರಾಯುಕ್ತರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗುವುದು ಎಂದರು.

ಸಭೆಯಲ್ಲಿ ಆಟೋ ರಿಕ್ಷಾ ಚಾಲಕರು, ಆಪ್ ಬೇಸ್ಡ್ ಆಟೋ ಸಂಚಾರದಿAದ ಇತರೆ ಆಟೋ ಚಾಲಕರುಗಳಿಗೆ ಉಂಟಾಗುವ ಸಮಸ್ಯೆಗಳ ಬಗ್ಗೆ, ಆಟೋ ರಿಕ್ಷಾ ವಲಯ-1, ವಲಯ-2 ರ ಸಂಚರಿಸುವ ಕುರಿತು ಸರಳವಾಗಿ ಗುರುತಿಸಲು, ಕಲರ್ ಕೋಡಿಂಗ್ ಅಳವಡಿಕೆ ಕುರಿತು ಹಾಗೂ ಆಟೋ ನಿಲ್ದಾಣದಲ್ಲಿ ಹೊಸದಾಗಿ ನೋಂದಣಿಗೆ ಅವಕಾಶ ಕಲ್ಪಿಸುವ ಬಗ್ಗೆ ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಂತೋಷ್ ಶೆಟ್ಟಿ, ಆಟೋ ರಿಕ್ಷಾ ಯೂನಿಯನ್ ಪದಾಧಿಕಾರಿಗಳು, ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರುಗಳು, ನಮ್ಮ ಯಾತ್ರಿ ಹಾಗೂ ರ‍್ಯಾಪಿಡ್ ಆಪ್ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...