ಉಡುಪಿ | ದಾರ್ಶನಿಕರ ಮಾರ್ಗ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ – ದಿನಕರ ಹೇರೂರು

Date:

Advertisements

ದಾರ್ಶನಿಕರು ತಮ್ಮ ಜೀವನವನ್ನು ಮುಡಿಪಾಗಿಟ್ಟು ಸಮಾಜಕ್ಕಾಗಿ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ. ಇಂದಿನ ಯುವ ಪೀಳಿಗೆಯು ದಾರ್ಶನಿಕರ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮ ರಾಷ್ಟ, ನಾಡು ನುಡಿಯ ನಿರ್ಮಾಣಕ್ಕಾಗಿ ಶ್ರಮಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.

ಅವರು ಇಂದು ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಅಗ್ನಿ ಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀ ಅಗ್ನಿ ಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಅಗ್ನಿ ಬನ್ನಿರಾಯರ ಸೇವೆಗಳನ್ನು ನೆನೆಯುವ ಉದ್ದೇಶದಿಂದ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬಂದಿದ್ದು, ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕೆ ಮಾರ್ಗವನ್ನು ಸೂಚಿಸಿದವರು ಇಂತಹ ವೀರ ಪುರುಷರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.

Advertisements

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್ ಮಾತನಾಡಿ, ಅಗ್ನಿ ಬನ್ನಿರಾಯರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ತಿಳಿಯುವುದರ ಜೊತೆಗೆ ಅವರು ನೀಡಿದ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಮಹಾಪುರುಷರ ವ್ಯಕ್ತಿತ್ವ ಹಾಗೂ ಅವರ ತತ್ವ ಸಿದ್ದಾಂತಗಳ ಅರಿವು ಹೊಂದುವುದು ಅತ್ಯವಶ್ಯವಾಗಿದ್ದು, ವಿದ್ಯಾರ್ಥಿಗಳು ಪ್ರಜ್ಞಾವಂತರಾಗಿ ಮಹಾನೀಯರ ಕುರಿತು ಹೆಚ್ಚಿನ ವಿಚಾರಗಳನ್ನು ಅರಿಯುವ ಮೂಲಕ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಬೇಕು ಎಂದರು.

ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನ ಪಚ್ಚಿನಡ್ಕ ಶ್ರೀ ಅಗ್ನಿ ಬನ್ನಿರಾಯರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಖಜಾಂಜಿ ರಮಾದೇವಿ, ಉಪಸಭಾಪತಿ ಡಾ. ಅಶೋಕ್ ವೈ.ಜಿ, ಮಾಜಿ ಸದಸ್ಯ ಕಾರ್ಯದರ್ಶಿ ಕೆ.ಬಾಲಕೃಷ್ಣ ಹೆಗ್ಡೆ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ರೆಡ್‌ಕ್ರಾಸ್ ಸಂಸ್ಥೆಯ ಸಿಬ್ಬಂಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಇಲಾಖೆಯ ವರ್ಷಾ ಕೋಟ್ಯಾನ್ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X