ಉಡುಪಿ | ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಪ್ರತಿಭೆ ಅನಾವರಣ : ದಿನಕರ ಹೇರೂರು

Date:

ಪ್ರತಿಯೊಂದು ಮಗುವಿನಲ್ಲೂ ಒಂದಲ್ಲಾ ಒಂದು ರೀತಿಯ ಪ್ರತಿಭೆ ಅಡಕವಾಗಿರುತ್ತದೆ. ಪೋಷಕರು ಹಾಗೂ ಗುರು-ಹಿರಿಯರು ಮಗುವಿನಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಮಾರ್ಗದರ್ಶನ ನೀಡಿ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಪ್ರತಿಭೆ ಅನಾವರಣಕ್ಕೆ ದಾರಿದೀಪವಾಗಲಿದೆ ಎಂದು ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.

- Advertisement -

ಅವರು ಇಂದು ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ (ರಿ) ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಉಡುಪಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
Advertisements

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗುತ್ತದೆ. ವಿದ್ಯಾರ್ಥಿಗಳು ಗುರು-ಹಿರಿಯರು, ಪೋಷಕರನ್ನು ಗೌರವ ಮನೋಭಾವದಿಂದ ಕಾಣಬೇಕು. ಸುಶಿಕ್ಷಿತರಾಗಿ ಸತ್ಪ್ರಜೆಗಳು ಬಾಳಬೇಕು ಸ್ಪರ್ಧೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಅವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದ ಅವರು, ಸ್ಪರ್ಧಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಮಕ್ಕಳಿಗೆ ಕಿವಿಮಾತು ಹೇಳಿದರು.

Advertisements

ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಮಕ್ಕಳಿಗೆ ಸ್ವಾತಂತ್ರ ಹೋರಾಟಗಾರರು, ಮೇಧಾವಿಗಳ ಬಗ್ಗೆ ಬಾಲ್ಯದಿಂದಲೇ ತಿಳಿಸಿದ್ದಲ್ಲಿ ಅವರುಗಳಲ್ಲಿ ದೇಶಪ್ರೇಮದ ಬಗ್ಗೆ ಆಸಕ್ತಿ ಮೂಡುತ್ತದೆ. ಸಮಾಜವನ್ನು ಒಟ್ಟುಗೂಡಿಸುವ, ಸ್ವಸ್ಥ ಸಮಾಜ ನಿರ್ಮಾಣ ಮಾಡುವ ಶಕ್ತಿ ಮಕ್ಕಳಲ್ಲಿದೆ ಎಂದ ಅವರು, ಮಕ್ಕಳಿಗೆ ಏರ್ಪಡಿಸುವ ಇಂತಹ ಕಾರ್ಯಕ್ರಮಗಳು ಅವರುಗಳಲ್ಲಿ ಅಡಗಿರುವ ಕಲಾ ಪ್ರೋತ್ಸಾಹಕ್ಕೆ ಕಾರಣವಾಗುತ್ತದೆ. ಪಠ್ಯ, ಪಠ್ಯೇತರ ಚಟುವಟಿಕೆಗಳ ಜೊತೆಗೆ ವಿದ್ಯಾರ್ಥಿಗಳಲ್ಲಿ ಐತಿಹಾಸಿಕ ಸ್ಥಳಗಳ ಬಗ್ಗೆ ಅರಿವಿರುವಂತೆ ನೋಡಿಕೊಳ್ಳಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ ಮಾತನಾಡಿ, ಮ್ಕಕಳು ತಮ್ಮಲ್ಲಿರುವ ಪ್ರತಿಭೆಗಳ ಮೂಲಕ ಸಾಧನೆ ಮಾಡಿ, ಕಲೆ, ಸಂಸ್ಕೃತಿ, ಸಂಪ್ರದಾಯ ಉಳಿಸುವುದರೊಂದಿಗೆ ಸಾಂಸ್ಕೃತಿಕ ರಾಯಭಾರಿಗಳಾಗಿ ಹೊರಹೊಮ್ಮಬೇಕು ಎಂದರು. ಇದೇ ಸಂದರ್ಭದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ 5-18 ವರ್ಷದ 8 ಮಕ್ಕಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ ಮತ್ತು ಏಕಪಾತ್ರಾಭಿನಯ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಸೃಜನಾತ್ಮಕ ಕಲೆ – ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ ಹಾಗೂ ಸೃಜನಾತ್ಮಕ ಬರವಣಿಗೆ – ಕಥೆ, ಪ್ರಬಂಧ, ಕವನ ಬರೆಯುವ ಸ್ಪರ್ಧೆಗಳು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಜಯ ನಾರಾಯಣ ನಾಯಕ್, ವಿದ್ಯಾರ್ಥಿಗಳು, ಪೋಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...