ಬ್ಯಾರಿಕೇಡ್ ಬಂಧಿ | ಬಿಜೆಪಿ ನಾಯಕರ ಕಾಲೆಳೆದ ಪ್ರಿಯಾಂಕ್ ಖರ್ಗೆ, ದಿನೇಶ್‌ ಗುಂಡೂರಾವ್

Date:

  • ಬಿಜೆಪಿ ನಾಯಕರು ಸ್ವಾಭಿಮಾನ ಬೀದಿಪಾಲು: ಪ್ರಿಯಾಂಕ್‌ ಖರ್ಗೆ
  • ಬಿಜೆಪಿ ನಾಯಕರಿಗೆ ಇದಕ್ಕಿಂತ ಅಪಮಾನವುಂಟೆ?: ಗುಂಡೂರಾವ್

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಲು ಆಗಮಿಸಿದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಬಂದೋಬಸ್ತಿಗೆಂದು ಹಾಕಲಾಗಿದ್ದ ಬ್ಯಾರಿಕೇಡ್ ಒಳಗಿನಿಂದಲೇ ಮೋದಿ ಗಮನ ಸೆಳೆಯಲು ಪ್ರಯತ್ನಿಸುತ್ತಿರುವ ಸನ್ನಿವೇಶವನ್ನು ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ದಿನೇಶ್‌ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

‌ಪ್ರಿಯಾಂಕ್‌ ಖರ್ಗೆ ಈ ಕುರಿತು ಟ್ವೀಟ್ ಮಾಡಿ, ಬ್ಯಾರಿಕೇಡ್ ಬಂಧಿಗಳು ಎಂದು ಕುಟುಕಿ, ”ಪ್ರಧಾನಿ ಮುಂದೆ ಬ್ಯಾರಿಕೇಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ” ಎಂದಿದ್ದಾರೆ.

“ರಾಜಕೀಯವಾಗಿ, ಸೈದ್ದಾಂತಿಕವಾಗಿ ವಿರೋಧಿಗಳಾಗಿದ್ದರೂ ಕರ್ನಾಟಕ ಬಿಜೆಪಿ ನಾಯಕರ ದುರವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ನೂರು ದಿನಗಳಾದರೂ ಕೂಡಾ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ‘ವಿರೋಧ ಪಕ್ಷದ ನಾಯಕ’ನ ಆಯ್ಕೆ ಸಾಧ್ಯವಾಗುವುದೇ” ಎಂದು ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದು, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ” ಎಂದು ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ಬಿಜೆಪಿ ನಾಯಕರಿಗೆ ಕಿಂಚಿತ್ತಾದರೂ ಆತ್ಮಗೌರವ ಬೇಡವೆ?

ದಿನೇಶ್‌ ಗುಂಡೂರಾವ್‌ ಕೂಡ ಇದೇ ವಿಚಾರ ಇಟ್ಟುಕೊಂಡು ಟ್ವೀಟ್‌ ಮಾಡಿ, “ರಾಜ್ಯ ಬಿಜೆಪಿ ನಾಯಕರನ್ನು ಅವರ ಪಕ್ಷದ ವರಿಷ್ಠರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ‌ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ. ಬಿಜೆಪಿ ನಾಯಕರು ಇಂದು ಮೋದಿಯವರ ಮುಂದೆ ಹಲ್ಲುಗಿಂಜಿ ಜೀ ಹುಜೂರು ಎಂದು ಮಂಡಿಯೂರಿ ನಿಂತರೂ, ಮೋದಿಯವರು ಕಣ್ಣೆತ್ತಿಯೂ ನೋಡಿಲ್ಲ” ಎಂದು ಕುಟುಕಿದ್ದಾರೆ.

ಮುಂದುವರಿದು, “ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಆಗಮಿಸಿದ್ದ ಮೋದಿಯವರನ್ನು ಸ್ವಾಗತಿಸಲು ಸ್ವತಃ ರಾಜ್ಯ ಬಿಜೆಪಿ ನಾಯಕರಿಗೂ ಅವಕಾಶ ಕೊಟ್ಟಿಲ್ಲ. ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್‌⁩, ಬೊಮ್ಮಾಯಿಯವರನ್ನು ಕೂಡ ಹತ್ತಿರಕ್ಕೆ ಬಿಟ್ಟುಕೊಳ್ಳಲಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಇದಕ್ಕಿಂತ ಅಪಮಾನವುಂಟೆ? ಬಿಜೆಪಿ ನಾಯಕರಿಗೆ ಕಿಂಚಿತ್ತಾದರೂ ಆತ್ಮಗೌರವ ಬೇಡವೆ?” ಎಂದು ವ್ಯಂಗ್ಯವಾಡಿದ್ದಾರೆ.

“ಮೋದಿಯವರ ಸರ್ವಾಧಿಕಾರಿ ‌ಮನಃಸ್ಥಿತಿಯ ಬಗ್ಗೆ ಸತ್ಯ ಹೇಳಿದಾಗಲೆಲ್ಲಾ ಬಿಜೆಪಿಯವರು ಎಗರೆಗರಿ ಬೀಳುತ್ತಿದ್ದರು. ಬಹುಶಃ ರಾಜ್ಯ ಬಿಜೆಪಿ ನಾಯಕರಿಗೆ ಇಂದು ಮೋದಿಯವರ ಸರ್ವಾಧಿಕಾರಿ ಮನೋಭಾವದ ಸತ್ಯದರ್ಶನವಾಗಿರಬಹುದು‌. ಬಿಜೆಪಿ ನಾಯಕರೆ, ಇನ್ನೆಷ್ಟು ದಿನ ಆತ್ಮಗೌರವ, ಸ್ವಾಭಿಮಾನ ಕಳೆದುಕೊಂಡು ಇರುತ್ತೀರಿ? ಆತ್ಮವಿಮರ್ಶೆ ಮಾಡಿಕೊಳ್ಳಿ” ಎಂದು ಕಿವಿಮಾತು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು ಬಡವರು, ಸಂವಿಧಾನದ ಉಳಿವಿಗಾಗಿನ ಹೋರಾಟದ ಚುನಾವಣೆ: ಸಂತೋಷ್ ಲಾಡ್

ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು...

ಕೊಪ್ಪಳ | ಕಾಣೆಯಾಗಿದ್ದ ಏಳು ವರ್ಷದ ಬಾಲಕಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ...

ಬೆಳಗಾವಿ | ಹಿಂದುತ್ವವಾದಿ ಕಾರ್ಯಕರ್ತರ ಅನೈತಿಕ ಪೊಲೀಸ್‌ ಗಿರಿ; ಲಾರಿ ಚಾಲಕನ ಮೇಲೆ ಹಲ್ಲೆ

ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಅರೋಪದ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಲಾರಿ...

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗಲ್ಲ: ಸುಮಲತಾ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು...