ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಸಾವುಗಳಾದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್

Date:

  • ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುತ್ತೇನೆ
  • ಡಿಎಚ್‌ಒಗಳ ಕಾರ್ಯಸಾಮರ್ಥ್ಯದ ವರದಿ ನೀಡಲು ಸೂಚನೆ

ರೋಗಿಗಳನ್ನು ಮಾನವೀಯ ದೃಷ್ಠಿಕೋನದಿಂದ ನೋಡಬೇಕು, ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷೆಯಿಂದ ರೋಗಿಗಳ ಸಾವು ನೋವುಗಳಾದರೆ ಸಹಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಎಲ್ಲ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು.

ಆರೋಗ್ಯ ಇಲಾಖೆ ಸಾರ್ವಜನಿಕ ವಲಯದಲ್ಲಿ ಅತ್ಯಂತ ಸೂಕ್ಷ್ಮತೆ ಹೊಂದಿರುವ ಇಲಾಖೆ. ಇಲ್ಲಿ ತುರ್ತಾಗಿ ರೋಗಿಗಳಿಗೆ ಸ್ಪಂದಿಸಬೇಕು. ಕೆಲವು ತಪ್ಪುಗಳಿಂದ ರೋಗಿಗಳಿಗೆ ಸಮಸ್ಯೆಗಳಾಗುವುದನ್ನು ನಾವು ನೋಡುತ್ತಿರುತ್ತೇವೆ. ಆದರೆ, ನಿರ್ಲಕ್ಷ್ಯೆಯಿಂದ ರೋಗಿಗಳಿಗೆ ತೊಂದರೆ ಆಗಬಾರದು ಎಂದು ಹೇಳಿದರು.

ತಪ್ಪುಗಳನ್ನು ಸರಿಪಡಿಸೊಣ‌. ಆದರೆ ನಿರ್ಲಕ್ಷ್ಯೆ ತೋರಬಾರದು. ಇದು ಅಕ್ಷಮ್ಯ. ಆ ರೀತಿಯ ಪ್ರಕರಣಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕ್ರಮ ಕೈಗೊಂಡ ಬಳಿಕ ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡ ಹಾಕಿದರೆ, ನಾನು ಮಣಿಯುವವನಲ್ಲ. ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರು ಸಾರ್ವಜನಿಕರಿಗೆ ಪಬ್ಲಿಕ್ ರಿಲೇಷನ್ ಆಫಿಸರ್ ರೀತಿಯಲ್ಲೂ ಕೆಲಸ ಮಾಡಬೇಕು. ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಬೇಕು. ನೀವೇ ನಿರ್ಲಕ್ಷ್ಯ, ಉದಾಸೀನ ಮಾಡಿದರೆ ರೋಗಿಗಳು ನೆಮ್ಮದಿಯೇ ಇಲ್ಲದಂತಾಗುತ್ತದೆ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಾದ್ಯಂತ ಬೇರೆ ಬೇರೆ ಪ್ರಾದೇಶಿಕ ವಿಭಾಗಗಳಲ್ಲಿ ಪ್ರವಾಸ ಮಾಡಲಾಗುವುದು. ಆ ಮೂಲಕ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು. ಆಸ್ಪತ್ರೆಗಳಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಒಳ್ಳೆಯ ಹೆಸರು ಪಡೆಯುವಂತೆ ಕೆಲಸ ಮಾಡಬೇಕು. ಯಾರು ಒಳ್ಳೆಯ ಕೆಲಸ ಮಾಡುತ್ತಾರೋ ಅವರ ಪರ ನಾನಿರುತ್ತೇನೆ. ಸರ್ಕಾರದಿಂದ ಕೂಡ ಸಂಪೂರ್ಣ ಸಹಕಾರ ಕೊಡಿಸುವ ಭರವಸೆಯನ್ನು ಅಧಿಕಾರಿಗಳಿಗೆ ನೀಡಿದರು.

ಜಿಲ್ಲಾವಾರು ಪ್ರತಿಯೊಬ್ಬ ಡಿಎಚ್‌ಒಗಳ ಕಾರ್ಯಸಾಮರ್ಥ್ಯದ ವರದಿ ನೀಡಿ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲಾವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಏನೆಲ್ಲಾ ಬದಲಾವಣೆಗಳಾಗಿದೆ. ಎಷ್ಟು ಪ್ರಗತಿ ಕಂಡಿದ್ದೇವೆ. ಏಲ್ಲಿ ಸರಿದಾರಿಯಲ್ಲಿ ಹೋಗುತ್ತಿಲ್ಲ. ಎಲ್ಲ ಮಾಹಿತಿಗಳನ್ನ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...