ಚಾಮರಾಜನಗರ | ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ: ಸಚಿವ ದಿನೇಶ್ ಗುಂಡೂರಾವ್

Date:

  • ನ್ಯಾಯಾಂಗ ತನಿಖಾ ವರದಿಯನ್ನೂ ಬಹಿರಂಗಪಡಿಸಿಲ್ಲ
  • ಕೊರೊನಾ ಟೂಲ್‌ ಕಿಟ್‌ ಹಗರಣದ ತನಿಖೆಗೆ ಚಿಂತನೆ

ಕೊರೊನಾ 2ನೇ ಅಲೆಯ ಸಮಯದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ಮತ್ತೆ ಮರು ತನಿಖೆ ಮಾಡಲಾಗುತ್ತದೆ. ಮಾತ್ರವಲ್ಲದೆ, ಕೊರೊನಾ ಟೂಲ್‌ ಕಿಟ್‌ ಹಗರಣದ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಕೊರೊನಾ 2ನೇ ಅಲೆಯಲ್ಲಿ ಒಮಿಕ್ರಾನ್ ರೂಪಾಂತರಿಯ ಹಾವಳಿಯಿಂದ ಸಾವಿರಾರು ಬಂದಿ ಉಸಿರಾಟ ತೊಂದರೆಗೆ ತುತ್ತಾಗಿ, ಸಾವನ್ನಪ್ಪಿದ್ದರು. ಒಮಿಕ್ರಾನ್‌ ಸೋಂಕಿತರ ರಕ್ಷಣೆಗೆ ಆಕ್ಸಿಜನ್‌ ಅತ್ಯಗತ್ಯವಾಗಿತ್ತು. ಇಂತಹ ಸಮಯದಲ್ಲಿ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಅಸಮರ್ಪಕ ನಿರ್ವಹಣೆಯಿಂದ ಒಂದೇ ದಿನ 23 ಮಂದಿ ರೋಗಿಗಳು ಮೃತಪಟ್ಟಿದ್ದರು.

ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ, ದುರಂತಕ್ಕೆ ಯಾರನ್ನೂ ಹೊಣೆ ಮಾಡದ ಸರ್ಕಾರ, ಯಾವುದೇ ಕ್ರಮ ಕೈಗೊಂಡಿಲ್ಲ. ಮಾತ್ರವಲ್ಲದೆ, ನ್ಯಾಯಾಂಗ ತನಿಖಾ ವರದಿಯನ್ನೂ ಬಹಿರಂಗಪಡಿಸಿಲ್ಲ.

ಈ ಸುದ್ದಿ ಓದಿದ್ದೀರಾ?: ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ತನಿಖೆಗೆ ಸಮಿತಿ ರಚನೆ

ಈ ನಡುವೆ ಸರ್ಕಾರ ಬದಲಾಗಿದ್ದು, ಹೊಸ ಸರ್ಕಾರ ಮರು ತನಿಖೆಗೆ ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ಸಚಿವ ದಿನೇಶ್‌ ಗುಂಡೂರಾವ್, “ಚಾಮರಾಜನಗರದ ಆಕ್ಸಿಜನ್ ದುರಂತದ ಬಗ್ಗೆ ಪೂರ್ಣ ತನಿಖೆ ನಡೆದಿಲ್ಲ. ಹಾಗಾಗಿ, ಮರು ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ದುರಂತಕ್ಕೆ ಯಾರು ಕಾರಣವೆಂದು ಇನ್ನೂ ಗೊತ್ತಾಗಿಲ್ಲ. ಯಾರು ಕಾರಣವೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಿಟ್‌ ಖರೀದಿ ಸೇರಿದಂತೆ ಹಲವೆಡೆ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿವೆ. ಅವುಗಳನ್ನು ತನಿಖೆ ನಡೆಸಲು ಚಿಂತಿಸಲಾಗುತ್ತಿದೆ. ಮೊದಲು ಮಾಹಿತಿ ಸಂಗ್ರಹಿಸಿ, ಅಕ್ರಮ ನಡೆದಿದೆಯೆಂದು ಕಂಡುಬಂದರೆ, ತನಿಖೆ ನಡೆಸಿ, ಕ್ರಮ ಕೈಗೊಳ್ಳಲಾಗುತ್ತದೆ” ಎಂಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಚಿರತೆ ದಾಳಿಗೆ ಕುರಿ ಬಲಿ; ವಸತಿ ಶಾಲೆಯ ಮಕ್ಕಳಲ್ಲಿ ಆತಂಕ

ಸುಂಟಿಕೊಪ್ಪ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಸಮೀಪದ ಗರಂಗದೂರಿನ ಮೊರಾರ್ಜಿ ದೇಸಾಯಿ ವಸತಿ...

ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ...

ನಮ್ಮದು ಜಾತ್ಯತೀತ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮದು ಜಾತ್ಯತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ...

ಟರ್ಕಿ ಸಂಸತ್‌ನ ಬಳಿ ಆತ್ಮಹತ್ಯಾ ಬಾಂಬ್ ದಾಳಿ: ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಾಯ

ಟರ್ಕಿ ದೇಶದ ಸಂಸತ್‌ 'ಅಂಕಾರ' ಬಳಿ ಇಂದು ಬೆಳಗ್ಗೆ ಆತ್ಮಹತ್ಯಾ ಬಾಂಬ್...