ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‌: ಅರ್ಜಿ ಆಹ್ವಾನ

Date:

Advertisements

2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್(ಡಿಎಚ್‌ಟಿಟಿ) ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ₹2,500 ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ಹಣ ಪಾವತಿಸುವ ಆಧಾರದ ಮೇಲೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2025ರ ಜುಲೈ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

Advertisements

ಡಿಪ್ಲೋಮಾ ಕೋರ್ಸ್‍ಗಾಗಿ ಲಭ್ಯವಿರುವ ಸಂಸ್ಥೆಗಳ ವಿವರ

ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ): 22 ಸೀಟುಗಳು.

ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು): 12 ಸೀಟುಗಳು.

ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು, ಆಂಧ್ರಪ್ರದೇಶ): 03 ಸೀಟುಗಳು.

ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ): 02 ಸೀಟುಗಳು.

ಒಟ್ಟು: 39 ಸೀಟುಗಳು..

ಅರ್ಜಿಯನ್ನು ವೆಬ್‍ಸೈಟ್ https://khtigadag.ac.in/Admission ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಪ್ರಾಂಶುಪಾಲರಿಗೆ ಸಲ್ಲಿಸಲು ಜೂನ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುತ್ತದೆ.

ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಫಾರಂಗಳಿಗಾಗಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಪ್ರಾಂಶುಪಾಲರ ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9449162822 ಅಥವಾ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 9449145293 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

2025-2026ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮಂಗಳೂರು ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್(ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‌ಫಾರ್ಮೇಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಈ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬುದ್ಧನ ಮಾರ್ಗವೊಂದೇ ಶಾಶ್ವತ ಶಾಂತಿಯ ದಾರಿ: ಉಪನ್ಯಾಸಕಿ ಪುಟ್ಟಮಣಿ

ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಚೇರಿ ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಬಹುದು. ದ್ವಿತೀಯ ಹಂತ:- ಮೇ 17(À). ತೃತೀಯ ಹಂತ:- ಮೇ 22(ಕೊನೆಯ ದಿನ), ನಾಲ್ಕನೇ ಹಂತ:- ಮೇ 27(ಕೊನೆಯ ದಿನ)

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 0824-2482334/9611320910/9844744845ನ್ನು ಸಂಪರ್ಕಿಸಬಹುದು ಎಂದು ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X