ಕೇಂದ್ರ ಸರ್ಕಾರದಿಂದ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್: ಸಿಎಂ ಸಿದ್ದರಾಮಯ್ಯ ಆಕ್ರೋಶ

Date:

Advertisements
  • ಮೊದಲ ಬಾರಿ ಸಿಎಂ ಆಗಿದ್ದ ಒಂದು ಗಂಟೆಯಲ್ಲಿ ಅನ್ನಭಾಗ್ಯ ಘೋಷಿಸಿದ್ದ ಸಿದ್ದರಾಮಯ್ಯ
  • ಆಹಾರ ಭದ್ರತಾ ಕಾಯ್ದೆಯ ಭಾಗವಾಗಿ ಜಾರಿಯಾಗಿದ್ದ ಅನ್ನಭಾಗ್ಯ: ಸಿಎಂ ಸಿದ್ದರಾಮಯ್ಯ
  • ಹಸಿದ ಹೊಟ್ಟೆಗೆ , ದುಡಿಯುವ ಕೈಗಳಿಗೆ ಶಕ್ತಿ-ಚೈತನ್ಯ ತುಂಬುವ ಸಲುವಾಗಿ ಅನ್ನಭಾಗ್ಯ
  • ‘ಬಡವರು ಎರಡು ಹೊತ್ತು ಅನ್ನ ತಿಂದರೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಏಕೆ ಹೊಟ್ಟೆಕಿಚ್ಚು?’

ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ ನಮ್ಮಿಂದ ತೆಗೆದುಕೊಳ್ಳಿತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕನ್ನಡ ಜನತೆ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ ಎಂದು ಮಾಧ್ಯಮಗಳ ಮೂಲಕ ನಾಡಿನ ಜನತೆಯನ್ನು ಪ್ರಶ್ನಿಸಿದರು.

Advertisements

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು-ಮಧ್ಯಮ ವರ್ಗದವರು ಎರಡು ಹೊತ್ತು ತಿಂದರೆ ಬಿಜೆಪಿಗೆ ಏನು ಹೊಟ್ಟೆಯುರಿ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ನಿಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಿರ್ವಹಿಸಿ. ನಾಳೆಯಿಂದ ಪ್ರತಿದಿನ ಹಂತ ಹಂತವಾಗಿ ರಾಜ್ಯದ ಸರ್ವ ಫಲಾನುಭವಿಗಳಿಗೂ ಹಣ ವರ್ಗಾವಣೆ ಆಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಜೈನಮುನಿ ಪ್ರಕರಣ | ರಾಜಕೀಯ ಬೆರೆಸದೇ ಯತ್ನಾಳ್‌ಗೆ ಮಾತನಾಡೋದೇ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆಯ ಭಾಗವಾಗಿ ಅನ್ನಭಾಗ್ಯ ಜಾರಿಯಾಗಿತ್ತು. 10 ವರ್ಷಗಳ ಹಿಂದೆ ಇದೇ ದಿನ ಮೊದಲ ಬಾರಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಿದ್ದರು. ನೆಮ್ಮದಿಯ ಬದುಕಿಗೆ ಆಹಾರ ಭದ್ರತೆ ಅನ್ನಭಾಗ್ಯ ಎನ್ನುವ ಘೋಷವಾಕ್ಯದಲ್ಲಿ ಚಾರಿತ್ರಿಕವಾದ ಕಾರ್ಯಕ್ರಮಕ್ಕೆ ಸರ್ಕಾರ ರಚನೆಯಾಗಿ 50ನೇ ದಿನಕ್ಕೆ ಮತ್ತೆ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಯಿತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನ್ನಭಾಗ್ಯದ ಲೋಗೋ ಬಿಡುಗಡೆ ಮಾಡಿದರು. ಯೋಜನೆಯ ಮಾಹಿತಿ ಪತ್ರವನ್ನು ಆರೋಗ್ಯ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ರಾಮಲಿಂಗಾರೆಡ್ಡಿ, ಬಿ.ಎಸ್.ಸುರೇಶ್, ಹೆಚ್.ಕೆ.ಪಾಟೀಲ್ ಸೇರಿ ಹಲವು ಸಚಿವರು ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

ಬಸವ ಜಯಂತಿಯಂದು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರು, ಬಸವಣ್ಣನವರ ದಾಸೋಹ ಸಂಸ್ಕೃತಿಯಂತೆ ಹಸಿವು ಮುಕ್ತ ಕರ್ನಾಟಕ ಮಾಡುವ ತಮ್ಮ ಜೀವಮಾನದ ಆಶಯ ಮತ್ತು ಕಾಳಜಿಯ ಭಾಗವಾಗಿ ಅನ್ನಭಾಗ್ಯ ಯೋಜನೆಯನ್ನು ಘೋಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X