ಬೆಂಗಳೂರು | ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡು ಸಂಸದ ಸಸಿಕಾಂತ್ ಸೆಂತಿಲ್ ಜೊತೆ ಜುಲೈ 12ರಂದು ಸಂವಾದ

Date:

ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ನಡೆಸಬೇಕು. ಜನಪರವಾಗಿ ಕೆಲಸ ಮಾಡಬೇಕೆಂದು ತಮ್ಮ ಐಎಎಸ್‌ ಹುದ್ದೆಯನ್ನು ತ್ಯಜಿಸಿದ್ದ ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಸಂಸದ ಸಸಿಕಾಂತ್ ಸೆಂತಿಲ್ ಜೊತೆ ಜಾಗೃತ ಕರ್ನಾಟಕ ಸಂಘಟನೆಯು ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕಾರ್ಯಕ್ರಮದ ಬಗ್ಗೆ ಜಾಗೃತ ಕರ್ನಾಟಕದ ಮುಖಂಡ ರಾಜಶೇಖರ್‌ ಅಕ್ಕಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ‘ಜನಾದೇಶ 2024: ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯದಡಿ ಕಾರ್ಯಕ್ರಮವು ಜುಲೈ 12ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್ ಅಂಡ್‌ ಗೈಡ್ಸ್ (ಕೊಂಡಜ್ಜಿ ಬಸಪ್ಪ) ಸಭಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

“ಸಂವಿಧಾನದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತೆ – ಆಶಯಗಳಿಗೆ ಅನುಗುಣವಾಗಿ ರಾಜಕಾರಣ ಕಟ್ಟುವ ಉದ್ದೇಶದೊಂದಿಗೆ ಜಾಗೃತ ಕರ್ನಾಟಕವು ‘ಮರಳಿ ಸಂವಿಧಾನದೆಡೆಗೆ’ ಎಂಬ ಶೀರ್ಷಿಕೆಯಲ್ಲಿ ಸರಣಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಅದರ ಭಾಗವಾಗಿ  ಹಮ್ಮಿಕೊಳ್ಳುತ್ತಿದೆ. ಅದರ ಭಾಗವಾಗಿ ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಸಂಸದರಾದ ಸಸಿಕಾಂತ್ ಸೆಂತಿಲ್ ಜೊತೆಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ರಾಜಶೇಖರ್ ಅಕ್ಕಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮೂಲ ಸೌಕರ್ಯಗಳಿಲ್ಲದ ಉರ್ದು ಶಾಲೆ; ಪರಿಹಾರ ಒದಗಿಸುತ್ತಾರೆಯೇ ಸಚಿವ ಮಧು ಬಂಗಾರಪ್ಪ?

ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿರುವ ಉರ್ದು ಶಾಲೆಯಲ್ಲಿ ಮೂಲ ಸೌಕರ್ಯಗಳಿಲ್ಲದೆ ಮುಚ್ಚುವಂತಹ...

ಧಾರವಾಡ | ಬಿಆರ್‌ಟಿಎಸ್ ರಸ್ತೆಯಲ್ಲಿ ಖಾಸಗಿ ವಾಹನಗಳಿಗೂ ಅವಕಾಶ ಕಲ್ಪಿಸಿ: ಸಂಘಟನೆಗಳಿಂದ ಪ್ರತಿಭಟನೆ

ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಮಾರ್ಗಮದ್ಯೆ ಸಂಚರಿಸುವ ಚಿಗರಿ ಬಸ್ ಅರ್ಥಾತ್ ಬಿಆರ್‌ಟಿಎಸ್ ಯೋಜನೆಯು...

ಉಡುಪಿ | ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ವೈದ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಪಿಸಿಆರ್‌ನಿಂದ ದೂರು

ಸಾಮಾಜಿಕ ಜಾಲತಾಣ ‘ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ...

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...