ಮದ್ದೂರು | ನಗರಸಭೆಗೆ ಗ್ರಾ.ಪಂಗಳ ಸೇರ್ಪಡೆ ಕುರಿತಾಗಿ ಸರ್ಕಾರದ ಹಂತದಲ್ಲಿ ಮಾತುಕತೆ: ಎನ್ ಚಲುವರಾಯಸ್ವಾಮಿ

Date:

ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ಗ್ರಾ.ಪಂ‌ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು.

- Advertisement -

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆ ಮೇಲ್ದರ್ಜೆಗೇರಿಸುವ ವಿಚಾರವಾಗಿ ಗೆಜ್ಜಲಗೆರೆ ಗ್ರಾಮಸ್ಥರೊಂದಿಗೆ ಮದ್ದೂರು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುರಸಭೆಯನ್ನು ನಗರಸಭೆ ಮಾಡಲು ಮದ್ದೂರು ತಾಲ್ಲೂಕಿನ ನಾಲ್ಕು ಗ್ರಾ.ಪಂಗಳಾದ ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾ.ಪಂ ವ್ಯಾಪ್ತಿಯನ್ನು ನಗರಸಭೆಗೆ ಸೇರಿಕೊಳ್ಳುವ ಪ್ರಕ್ರಿಯೆ ಬಗ್ಗೆ ಕಾನೂನಿನ ಅನ್ವಯ ಕ್ರಮ ಕೈಕೊಳ್ಳುತ್ತೇವೆ. ಗ್ರಾಮಸ್ಥರ ಬೇಡಿಕೆಗಳನ್ನು ಅಧಿಕಾರಿಗಳ ಜೊತೆ ಸಭೆ ನೆಡಸಿ ಶೀಘ್ರದಲ್ಲೇ ಪರಿಶೀಲಿಸುತ್ತೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

4 ಗ್ರಾಮ ಪಂಚಾಯತಿಗಳ ಗ್ರಾಮಸ್ಥರ ಜೊತೆ ಸಭೆ ನಡೆಸಿದ್ದೇವೆ. ಸಭೆಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದ್ದೇವೆ. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ನಾಗರಹೊಳೆ-ಬಂಡೀಪುರದಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ಆದಿವಾಸಿಗಳ ಅಸ್ತಿತ್ವ ಕಸಿಯುವ ಹುನ್ನಾರವೇ?

ಸಭೆಯಲ್ಲಿ ಮದ್ದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಕೆ. ಎಂ. ಉದಯ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾ ರಾಣಿ, ಮದ್ದೂರು ತಹಶೀಲ್ದಾರ್ ಪರುಶರಾಮ್ ಸತ್ತಿಗೇರಿ ಹಾಗೂ ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...