ಮರ್ಯಾದೆಗೇಡು ಹತ್ಯೆ | ಪ್ರೀತಿಸಿದಕ್ಕೆ ಮಗಳನ್ನೇ ಕೊಂದ ತಂದೆ

Date:

ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ತಂದೆಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ ಲೇಔಟ್‌ನಲ್ಲಿ ನಡೆದಿದೆ.

- Advertisement -

ಪಲ್ಲವಿ (17) ಕೊಲೆಯಾದ ಯುವತಿ. ಆರೋಪಿ ತಂದೆ ಗಣೇಶ್. ಇವರು ಮೂಲತಃ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯವರು. ಆರೋಪಿ ಗಣೇಶ್ ಅವರ​ ಮಗಳು ಪಲ್ಲವಿ ಶಾಲೆಗೆ ಹೋಗುವಾಗ ಪ್ರೀತಿಯ ಬಲೆಗೆ ಬಿದ್ದಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವಿಚಾರ ತಿಳಿದು ಗಣೇಶ್ ನಾಗನಾಥಪುರದಲ್ಲಿರುವ ಮಾವನ ಮನೆಗೆ ಪಲ್ಲವಿಯನ್ನು ಕರೆದುಕೊಂಡು ಹೋಗಿ ಬಿಟ್ಟಿದ್ದರು. ಅಕ್ಟೋಬರ್ 14 ರಂದು ಪಲ್ಲವಿ ಮಾವನ ಮನೆಯಿಂದ ಏಕಾಏಕಿ ಕಾಣೆಯಾಗಿದ್ದಳು. ಈ ಬಗ್ಗೆ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಪಲ್ಲವಿಯನ್ನು ಪತ್ತೆ ಮಾಡಿ ಅ.20ರಂದು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದ ಕೂಡಲೇ ಠಾಣೆಗೆ ಆಗಮಿಸಿದ ಮಾವ ಶಾಂತಕುಮಾರ್ ಮಾವ ಪಲ್ಲವಿಯನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದರು.

ಅ.22 ರ ಬೆಳಗ್ಗೆ 10.30ರ ಸುಮಾರಿಗೆ ಪಲ್ಲವಿ ತಂದೆ ಬೆಂಗಳೂರಿನ ನಾಗಪುರಕ್ಕೆ ಬಂದಿದ್ದಾರೆ. ಈ ವೇಳೆ, ಪತ್ನಿ ಶಾರದಾ ಮತ್ತು ಪಲ್ಲವಿ ಜೊತೆ ಆರೋಪಿ ಗಣೇಶ್ ಗಲಾಟೆ ಮಾಡಿಕೊಂಡಿದ್ದನು. ಈ ಗಲಾಟೆ ವಿಕೋಪಕ್ಕೆ ಹೋಗಿ ಮನೆಯಲ್ಲಿದ್ದ ಮಚ್ಚಿನಿಂದ ಮಗಳು ಪಲ್ಲವಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರೀತಿಸಿದವನ ಜತೆ ಮಗಳು ಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂದೆ

ಮಗಳನ್ನು ಹತ್ಯೆ ಮಾಡುವ ಸಮಯದಲ್ಲಿ ತಡೆಯಲು ಹೋದ ಪತ್ನಿ ಹಾಗೂ ಭಾವಮೈದುನನ ಮೇಲೂ ಗಣೇಶ್ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...