ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ವಿಜಯಪುರದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಈ ಹಿಂದೆಯೇ ಇದೇ ರೀತಿಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ನಿವಾಸಿ ಜಗದೀಶ್ ಕಲಬುರ್ಗಿ ಎಂಬಾತ ಫೇಸ್‌ಬುಕ್‌ನಲ್ಲಿ ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಯ್ಯಪ್ಪ ಮಾಲಾಧಾರಿಗಳು ಸಿಂದಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಧರ್ಮಶಾಸ್ತ್ರ ಸೇವಾ ಸಮಿತಿ ಕೂಡ ಜಗದೀಶ್ ವಿರುದ್ಧ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ.
ಆರೋಪಿ ಜಗದೀಶ್ ಈ ಹಿಂದೆ ಗುಡ್ಡಾಪೂರ ದಾನಮ್ಮದೇವಿ ವಿರುದ್ಧವೂ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಎಂದು ಹೇಳಲಾಗಿದೆ.