ಬೀದರ್ | ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸಲು ಒತ್ತಾಯ

Date:

ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸುವುದು ಸೇರಿದಂತೆ ನಾನಾ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಭಾಲ್ಕಿತಾಲೂಕಿನ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು ತಹಶೀಲ್ದಾರ್‌ಗೆ ಹಕ್ಕೊತ್ಥಾಯ ಪತ್ರ ಸಲ್ಲಿಸಿದ್ದಾರೆ. “ಸರ್ಕಾರ ನೀಡಿರುವ ಮೊಬೈಲ್‌ಗಳಲ್ಲಿ ನೆಟ್‌ವರ್ಕ್, ರ‍್ಯಾಮ್, ಸ್ಟೋರೇಜ್ ಸಮಸ್ಯೆ ಇದೆ. ಹೊಸ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶವಿಲ್ಲ. ಪ್ರತಿನಿತ್ಯ ಮಕ್ಕಳ, ಪೋಷಕರ ಹಾಜರಾತಿ, ಆಹಾರ ವಿತರಣೆ, ಶಾಲಾಪೂರ್ವ ಶಿಕ್ಷಣ ಚಟುವಟಿಕೆಗಳನ್ನು ಅಪ್‌ಲೋಡ್ ಮಾಡುವುದಕ್ಕೆ ಸಮಸ್ಯೆಯಾಗುತ್ತಿದೆ” ಎಂದು ವಿವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಈಗಾಗಲೇ ನಾಲ್ಕು ವರ್ಷಗಳ ಹಿಂದೆ ನೀಡಿರುವ ಮೊಬೈಲ್‌ಗಳು ಹಾಳಾಗಿವೆ. ಆದ್ದರಿಂದ, ಆರೋಗ್ಯ ಸಮೀಕ್ಷೆ ಕೈಗೊಳ್ಳಲು ಹೊಸ ಮೊಬೈಲ್‌ಗಳನ್ನು ನೀಡಬೇಕು. ಇಲ್ಲವಾದರೆ, ಕೈಪಿಡಿಯಲ್ಲಿ ದಾಖಲಿಸಲು ಅವಕಾಶ ನೀಡಬೇಕು. ಹಿಂದಿನ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವ 1,000 ಗೌರವಧನವನ್ನು ಕೂಡಲೇ ಪಾವತಿ ಮಾಡಬೇಕು. ಕನಿಷ್ಠ ವೇತನ ಜಾರಿ, ಸಾಮಾಜಿಕ ಭದ್ರತೆ, ಏಕ ರೂಪದ ಸೇವಾ ನಿಯಮ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ತಾಲೂಕು ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಸುಶೀಲಾ ಹತ್ತಿ, ಉಪಾಧ್ಯಕ್ಷೆ ಅನಿತಾ ಪಸರಗೆ, ಖಜಾಂಚಿ ಈಶ್ವರಮ್ಮ ಮಠಪತಿ, ಕಾರ್ಯದರ್ಶಿ ಪೂಜಾಶೀಲಾ ಭಾವಿಕಟ್ಟಿ ಸೇರಿದಂತೆ ನೂರಾರು ಅಂಗವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...