ಬೀದರ್‌ | ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್‌ ಬುಕ್‌ ವಿತರಣೆ

Date:

Advertisements

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರಿನ ಅವಿರತ ಪ್ರತಿಷ್ಠಾನ ಉಚಿತ ನೋಟ್‌ ಬುಕ್‌ ವಿತರಿಸುವ ಸಮಾಜಮುಖಿ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರೇಮಸಾಗರ ದಾಂಡೇಕರ್‌ ಹೇಳಿದರು.

ಬೀದರ್‌ ತಾಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವಿರತ ಪ್ರತಿಷ್ಠಾನದಿಂದ ಶನಿವಾರ ಆಯೋಜಿಸಿದ ಉಚಿತ ನೋಟ್‌ ಬುಕ್‌ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

“ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಿಜಕ್ಕೂ ಪ್ರತಿಭಾವಂತರು, ಅವರಿಗೆ ಗುಣಮಟ್ಟ ಶಿಕ್ಷಣ ದೊರೆತರೆ ಉತ್ತಮ ಪ್ರಜೆಗಳಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು. ಬೆಂಗಳೂರಿನ ಐಟಿಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸ್ನೇಹಿತರೆಲ್ಲರೂ ಅವಿರತ ಪ್ರತಿಷ್ಠಾನದ ಮೂಲಕ ತಮ್ಮ ಬಿಡುವಿನ ವೇಳೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪಠ್ಯ ಸಾಮಾಗ್ರಿ ಉಚಿತವಾಗಿ ಹಂಚುವ ಯೋಜನೆ ಸಮಾಜಕ್ಕೆ ಮಾದರಿಯಾಗಿದೆʼ ಎಂದರು.

Advertisements

ಅವಿರತ ಪ್ರತಿಷ್ಠಾನ ಸದಸ್ಯ ಪ್ರವೀಣ ರತ್ನಾಕರ್ ಮಾತನಾಡಿ, ʼಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ನಮ್ಮ ಟ್ರಸ್ಟ್‌ನಿಂದ ಗ್ರಾಮೀಣ ಪ್ರದೇಶದಲ್ಲಿ ಉಚಿತ ನೋಟ್ ಬುಕ್ ವಿತರಿಸುವ ಯೋಜನೆ ರೂಪಿಸಲಾಗಿದೆ. ವಿದ್ಯಾರ್ಥಿಗಳು ಓದಿನ ಹವ್ಯಾಸ ಬೆಳಿಸಿಕೊಳ್ಳಬೇಕುʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಾಂವಿಧಾನಿಕ 371(ಜೆ) ಕಲಂ ವಿರುದ್ಧ ಅಪಪ್ರಚಾರ; ಬೀದರ್‌ನಲ್ಲಿ ಸಿಡಿದ ಆಕ್ರೋಶ

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು ನಾಗಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಾರೆಡ್ಡಿ, ಎಸ್‌ಡಿಎಮ್‌ಸಿ ಅಧ್ಯಕ್ಷ ಸ್ಯಾಮಸನ್, ಗ್ರಾಮಸ್ಥರಾದ ನಾಗಪ್ಪ ಹಾರೂರಗೆರಿಕರ್, ಸಂಜೀವ ರತ್ನಾಕರ್, ಅಡೆಪ್ಪಾ, ಶಶಿಧರ ಸೇರಿದಂತೆ ಶಾಲಾ ಶಿಕ್ಷಕ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X