ಬೀದರ್‌ | ಜಿಲ್ಲಾ 21ನೇ ಕನ್ನಡ ಸಾಹಿತ್ಯ  ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಆಯ್ಕೆ

Date:

ಬೀದರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರುವ ಫೆ.3 ಮತ್ತು 4ನೇ ರಂದು ಆಯೋಜಿಸಲು ಉದ್ದೇಶಿಸಲಾಗಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ಸರಕಾರದ ಅರಣ್ಯ, ಪರಿಸರ, ಜೀವಿಶಾಸ್ತ್ರ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಅವರು ತಿಳಿಸಿದ್ದಾರೆ.

“ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರ, ಸಮಾಜ ಮುಖಂಡರ ಮತ್ತು ಸಾಹಿತಿಗಳ ಸಭೆಯಲ್ಲಿ ಪರಿಷತ್ತಿನ ನಿಯಮಗಳಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದಾಗ ಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತು” ಎಂದು ಹೇಳಿದರು.

ವಿವಿಧ ಸಮಿತಿಗಳಿಗೆ ನೇಮಕಗೊಂಡವರ ಪಟ್ಟಿ :

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರನ್ನಾಗಿ ಗುರುನಾಥ ಕೊಳ್ಳೂರು, ಕೋಶಾಧ್ಯಕ್ಷರಾಗಿ ಬಾಬು ವಾಲಿ ಅವರನ್ನು ನೇಮಕ ಮಾಡಲಾಯಿತು. ಡಿ.ಕೆ.ಗಣಪತಿ (ಪ್ರಚಾರ ಸಮಿತಿ), ರಾಜೇಂದ್ರಕುಮಾರ ಗಂದಗೆ, ವಿಜಯಕುಮಾರ ಪಾಟೀಲ ಯರನಳ್ಳಿ(ಮೆರವಣಿಗೆ ಸಮಿತಿ), ರೇವಣಸಿದ್ದಪ್ಪ ಜಲಾದೆ (ವೇದಿಕೆ ಸಮಿತಿ), ಡಾ.ಬಸವರಾಜ ಬಲ್ಲೂರ (ಸ್ಮರಣ ಸಂಚಿಕೆ ಸಮಿತಿ), ರಾಜಕುಮಾರ ಪಾಟೀಲ, ವಿಜಯಕುಮಾರ ಸೋನಾರೆ, ಅಶೋಕ ದಿಡಗೆ (ಪ್ರಸಾದ ಸಮಿತಿ), ಸಂಗ್ರಾಮ ಇಂಗಳೆ, ಶಂಭುಲಿಂಗ ವಾಲದೊಡ್ಡಿ (ಸಾಂಸ್ಕೃತಿಕ ಸಮಿತಿ), ಗುರುನಾಥ ರಾಜಗಿರಾ, ಸಂತೋಷ ಜೋಳದಾಬಕೆ (ನಗರ ಅಲಂಕಾರ ಸಮಿತಿ), ರಾಜೇಂದ್ರ ಮಣಗಿರೆ, ಯೋಗೇಶ ಮಠದ (ಚಿತ್ರಕಲಾ ಸಮಿತಿ), ಮೀನಾಕ್ಷಿ ಪಾಟೀಲ (ಮಹಿಳಾ ಸಮಿತಿ), ಮಲ್ಲಿಕಾರ್ಜುನ ಟಂಕಸಾಲೆ, ಕಲ್ಯಾಣರಾವ ಚಳಕಾಪುರೆ (ಧ್ವಜಾರೋಹಣ ಮತ್ತು ಶಿಸ್ತುಪಾಲನ ಸಮಿತಿ), ಡಾ.ಸಿ.ಆನಂದರಾವ (ವೈದ್ಯಕೀಯ ಸಮಿತಿ) ರಚಿಸಲಾಗಿದ್ದು, ಸಮಿತಿಯು ಪದಾಧಿಕಾರಿಗಳನ್ನು ಸೇರಿಸಿಕೊಳ್ಳುವ ಜವಾಬ್ದಾರಿಯನ್ನು ಸಮಿತಿ ಅಧ್ಯಕ್ಷರಿಗೆ ವಹಿಸಲಾಯಿತು.

ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಸರ್ವಾಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಮ್ಮೇಳನವನ್ನು ಐತಿಹಾಸಿಕಗೊಳಿಸಲು ಸರ್ವರೂ ದುಡಿಯೋಣ. ಕನ್ನಡ ನಾಡು, ನುಡಿಗೆ ಅಹರ್ನಿಶಿ ದುಡಿದ ಡಾ.ಬಸವಲಿಂಗ ಪಟ್ಟದ್ದೇವರ ಅಧ್ಯಕ್ಷತೆಯಲ್ಲಿ ಜರುಗುವ ಸಮ್ಮೇಳನಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಸಭೆಯಲ್ಲಿ ರಾಜೇಂದ್ರಕುಮಾರ ಗಂದಗೆ, ಸೋಮಶೇಖರ ಪಾಟೀಲ ಗಾದಗಿ, ಕುಶಾಲರಾವ ಪಾಟೀಲ, ಶರಣಪ್ಪ ಮಿಠಾರೆ, ಬಾಬುರಾವ ಕಾರಬಾರಿ, ಡಿ.ಕೆ.ಗಣಪತಿ, ಅನೀಲಕುಮಾರ ಬೆಲ್ದಾರ್, ಮಾರುತಿ ಬೌದ್ಧೆ, ಸಹಜಾನಂದ ಕಂದಗೂಳೆ, ರಮೇಶ ಬಿರಾದಾರ, ಸಿದ್ದಪ್ಪ ಮೂಲಗೆ, ರಾಜಕುಮಾರ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...

ಶಿವಮೊಗ್ಗ | ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆಯ ಗಾಳಿ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು...

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...