ಗದಗ | ಯೋಗ ದಿನಾಚರಣೆ ಯಶಸ್ವಿ ಆಯೋಜನೆಗೆ ಜಿಲ್ಲಾಧಿಕಾರಿ ಸೂಚನೆ

Date:

ಗದಗ ಜಿಲ್ಲೆಯಲ್ಲಿ ಆಚರಿಸಲಾಗುವ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಎಲ್‌ ವೈಶಾಲಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ 21 ರಂದು ಆಚರಿಸಲಾಗುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಕೆ ಎಚ್ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಯೋಗಾಸಕ್ತರಿಗೆ ಮತ್ತು ವಿಧ್ಯಾರ್ಥಿಗಳಿಗೆ ಪೂರ್ವಭಾವಿಯಾಗಿ ಯೋಗಾಸನಗಳ ಕುರಿತು ನುರಿತ ಯೋಗ ಶಿಕ್ಷಕರಿಂದ ತರಬೇತಿ ನೀಡಲು ಅಗತ್ಯದ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೂನ್ 21 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಮುಂಜಾನೆ 7 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಯೋಗಾಸಕ್ತರು, ಎನ್.ಎಸ್.ಎಸ್., ಎನ್.ಸಿ.ಸಿ. ವಿಧ್ಯಾರ್ಥಿಗಳು ಮುಂಜಾನೆ 6.30ಕ್ಕೆ ಹಾಜರಿರುವಂತೆ ಕ್ರಮ ವಹಿಸಬೇಕು. ಕಾರ್ಯಕ್ರಮದ ವೇದಿಕೆ ಸಿದ್ಧತೆಗಳ ಕುರಿತು ಚರ್ಚಿಸಿದ ಅವರು ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಉಪಹಾರದ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಜನವಸತಿ ಪ್ರದೇಶದಿಂದ ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಧರಣಿ

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಜಾಥಾಗಳ ಆಯೋಜನೆ ಹಾಗೂ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಗ್ರಾಮ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಪ್ರಚಾರ ಕೈಗೊಳ್ಳುವದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತಿಳಿಸಿದ ಅವರು ಕಾರ್ಯಕ್ರಮದ ದಿನದಂದು ಎಲ್ಲ ಸರ್ಕಾರಿ ನೌಕರರು ಕಡ್ಡಯಾವಾಗಿ ಭಾಗವಹಿಸುವದರ ಮೂಲಕ ಹರ ಘರ ಆಂಗಣ ಯೋಗ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿರುವ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆಯುಷ್‌ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಉಪ್ಪಿನ, ಶಿಕ್ಷಣ ಇಲಾಖೆ ಉಪನಿರ್ದೆಶಕ ಬಸವಲಿಂಗಪ್ಪ, ಕ್ರೀಡಾ ಇಲಾಖೆ ಸಹಾಯಕ ನಿರ್ದೆಶಕ ವಿಠ್ಠಲ ಜಾಬಗೌಡರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮೆಹಬೂಬ ತುಂಬರಮಟ್ಟಿ ಹಾಗೂ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...