ದಕ್ಷಿಣ ಕನ್ನಡ | ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

Date:

ಮಂಗಳೂರು: ಹೈನುಗಾರಿಕೆಯನ್ನು ಬಲಪಡಿಸಿ, ರೈತರ ಹಿತವನ್ನು ಕಾಪಾಡುವ ಉದ್ದೇಶದಿಂದ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪದ್ಮರಾಜ್‌ ಪೂಜಾರಿ ಅವರು ರಾಜ್ಯ ಸರಕಾರ ಕೈಗೊಂಡಿರುವ ಹಾಲಿನ ದರ ಏರಿಕೆ ಹಾಗೂ ಬಸ್ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -

ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಹೈನುಗಾರಿಕೆಯನ್ನು ಬಲಪಡಿಸುವುದು, ಹಾಲು ಉತ್ಪಾದಕರಿಗೆ ಹೆಚ್ಚುವರಿ ಆರ್ಥಿಕ ಪ್ರಯೋಜನ ತಲುಪಿಸುವುದು ಹಾಗೂ ರೈತರ ಹಿತವನ್ನು ಕಾಪಾಡುವುದು ಇದರ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣವನ್ನು ಸಮರ್ಥಿಸಿಕೊಳ್ಳುತ್ತಾ, ಇಂಧನ ಬೆಲೆ ಏರಿಕೆ ಹಾಗೂ ಸಾರಿಗೆ ನಿಗಮ ಎದುರಿಸುತ್ತಿರುವ ಆರ್ಥಿಕ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. 2023ರಲ್ಲಿ ಕೆಎಸ್‌ಆರ್‌ಟಿಸಿಯ ಸಾಲದ ಪ್ರಮಾಣ 5,800 ಕೋಟಿ ರೂ. ಇತ್ತು. ಇದೀಗ ಅದು 5,300 ಕೋಟಿ ರೂ.ಗೆ ಇಳಿಕೆಯಾಗಿದೆ” ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಚಾರಗಳಲ್ಲಿ ಬಿಜೆಪಿ ಜನರನ್ನು ದಾರಿ ತಪ್ಪಿಸುವ ಸುಳ್ಳು ಪ್ರಚಾರ ನಡೆಸುತ್ತಿದೆ. ಬಿಜೆಪಿಯ ಆರೋಪಗಳಿಗೆ ತಿರುಗೇಟು ನೀಡಲು ಜಿಲ್ಲಾದ್ಯಂತ ಪತ್ರಿಕಾಗೋಷ್ಠಿ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

“ಜಿಎಸ್‌ಟಿ ಹಂಚಿಕೆಯಲ್ಲಿನ ಅಸಮಾನತೆ ಬಗ್ಗೆ ಟೀಕಿಸಿದ ಅವರು, ಬಿಜೆಪಿಯು ಪ್ರತಿಭಟನೆಗಳ ಮೂಲಕ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ಅಪಪ್ರಚಾರದ ಬಗ್ಗೆ ಜನರಿಗೆ ವಾಸ್ತವಾಂಶಗಳನ್ನು ತಿಳಿಸುವ ಮೂಲಕ ಉತ್ತರ ನೀಡಲಾಗುವುದು” ಎಂದರು.

ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕಾಂಗ್ರೆಸ್ ಬದ್ಧ

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವುದನ್ನು ಪ್ರಸ್ತಾಪಿಸಿದ ಅವರು, “ಗ್ರಾಮ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳು ಇರುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಗತ್ಯ. ಸ್ಥಳೀಯ ಸಂಸ್ಥೆಗಳಿಗೆ ಬರುವ ಅನುದಾನ ಸಮರ್ಪಕವಾಗಿ ಹಂಚಿಕೆಯಾಗಲು ಹಾಗೂ ಗ್ರಾಮೀಣ ಮಟ್ಟದಲ್ಲಿ ಆಡಳಿತ ವ್ಯವಸ್ಥೆ ಬಲಗೊಳ್ಳಲು ಚುನಾಯಿತ ಪ್ರತಿನಿಧಿಗಳ ಪಾತ್ರ ಮಹತ್ವದ್ದಾಗಿದೆ. ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದೆ” ಎಂದು ತಿಳಿಸಿದರು.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

ಬೆಳಾಗಾವಿ |ಉದ್ಯೋಗ, ಉಚಿತ ರೇಷನ್ ಆಮಿಷವೊಡ್ಡಿ 662 ಮಹಿಳೆಯರಿಗೆ ವಂಚನೆ ಆರೋಪ: ₹7.94 ಕೋಟಿ ಮೋಸ?

ಟ್ರಸ್ಟ್‌ನಲ್ಲಿ ಸದಸ್ಯತ್ವ ಪಡೆದರೆ ಮೂರು ತಿಂಗಳಿಗೊಮ್ಮೆ ಉಚಿತ ಪಡಿತರ ನೀಡುವುದರ ಜೊತೆಗೆ...

ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನ.13ರಂದು ಪ್ರಧಾನಿ ಮೋದಿ ಚಾಲನೆ

ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ಗೆ...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...