ಮಂಗಳೂರು ದಸರಾ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್

Date:

Advertisements

ಮಂಗಳೂರು ದಸರಾ ಕಾರ್ಯಕ್ರಮಗಳ ಸಂದರ್ಭದಲ್ಲಿ ನಗರವನ್ನು ಅಲಂಕರಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರು ದಸರಾ ಉತ್ಸವ ಸಿದ್ಧತೆಗಳ ಪರಿಶೀಲನೆ ನಡೆಸಿ ಈ ಸಂಬಂಧ ನಗರದ ಸರ್ಕ್ಯುಟ್ ಹೌಸ್‌ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

“ಮಂಗಳೂರು ನಗರದಾದ್ಯಂತ ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ನಗರದ ಪ್ರಮುಖ ಜಂಕ್ಷನ್‌ಗಳನ್ನು ಅಲಂಕರಿಸಬೇಕು. ದಸರಾ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ನಿರಂತರ ಸ್ವಚ್ಛತೆ ಕಾಪಾಡಲು ತಂಡ ನಿಯೋಜಿಸಬೇಕು. ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ಸದಾ ಲಭ್ಯವಾಗುವಂತೆ ನಿಗವಹಿಸಬೇಕು” ಎಂದ ಸಚಿವರು ಪೊಲೀಸ್ ಭದ್ರತೆಯನ್ನು ಎಲ್ಲ ಕಡೆ ಕಲ್ಪಿಸಲು ದಿನೇಶ್ ಗುಂಡೂರಾವ್ ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ಮದ್ದೂರು | ಕೋಮುವಾದಿಗಳ ಪರ ಸರ್ಕಾರದ ಮೃದು ಧೋರಣೆಯೇ ಸಾಮರಸ್ಯ ಕದಡಲು ಕಾರಣ: ಕೃಷ್ಣೇಗೌಡ

ಸಭೆಯಲ್ಲಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X