ಚಾಮರಾಜನಗರ | ಅರ್ಚರಿ, ಫೆನ್ಸಿಂಗ್ ಕ್ರೀಡಾ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಭೇಟಿ; ಪರಿಶೀಲನೆ

Date:

Advertisements

ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಚಾಮರಾಜನಗರ ಜಿಲ್ಲೆ, ಸಂತೇಮರಹಳ್ಳಿಯಲ್ಲಿರುವ ಅರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭೇಟಿ ನೀಡಿ ಪರಿಶೀಲಿಸಿದರು.

“ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ಇದಕ್ಕಾಗಿ ದಿನನಿತ್ಯ ತಪ್ಪದೇ ಶ್ರಮವಹಿಸಿ ತರಬೇತಿ ಪಡೆಯಬೇಕು. ಕ್ರೀಡಾನಿಲಯದಲ್ಲಿ ಯಾವುದೇ ತೊಂದರೆ ಸಮಸ್ಯೆಗಳು ಇದ್ದರೆ ಮುಕ್ತವಾಗಿ ಹೇಳಬೇಕು. ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಎಲ್ಲಾ ಸೌಲಭ್ಯಗಳನ್ನು ಉತ್ತಮವಾಗಿ ಒದಗಿಸಲಾಗುತ್ತಿದೆ. ಈ ಸೌಕರ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ರಾಷ್ಟ್ರಮಟ್ಟದಲ್ಲಿ ಕೀರ್ತಿ ತರುವಂತಾಗಬೇಕು” ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾರೈಸಿದರು.

ಬಳಿಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುದಾನದಲ್ಲಿ ಅಂದಾಜು ₹2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಫೆನ್ಸಿಂಗ್ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ಪರಿಶೀಲಿಸಿದರು. ನಿರ್ಮಾಣದ ಹೊಣೆ ನಿರ್ವಹಿಸುತ್ತಿರುವ ಕೆ.ಆರ್.ಐ.ಡಿ.ಎಲ್ ಸಂಸ್ಥೆ ಅಧಿಕಾರಿಗಳು ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಬೇಕು. ನವೆಂಬರ್ ಅಂತ್ಯದೊಳಗೆ ಕೆಲಸ ಪೂರ್ಣಗೊಳಿಸಬೇಕು. ಅರ್ಚರಿ ಉಗ್ರಾಣ ಮತ್ತು ರೇಂಜ್ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಇಲಾಖೆಗೆ ಹಸ್ತಾಂತರಿಸುವಂತೆ ಸೂಚಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿರುವ ಜಿಲ್ಲಾ ಮತ್ತು ತಾಲ್ಲೂಕು ಕ್ರೀಡಾಂಗಣಗಳ ಅಭಿವೃದ್ಧಿ ಅನುದಾನ ವ್ಯಪಗತವಾಗಬಾರದು. ಕಾಮಗಾರಿಗೆ ನಿಗದಿಪಡಿಸಿರುವ ಹಣವನ್ನು ವೆಚ್ಚ ಮಾಡಿ ಕ್ರೀಡಾಂಗಣ ಕಾಮಗಾರಿಯನ್ನು ಪೂರ್ಣಗೊಳಿಸಿ ಕ್ರೀಡಾಪಟುಗಳು, ಕ್ರೀಡಾಸಕ್ತರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಕ್ಕಳ ವಾಕ್ ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ; ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ

ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ಕೆ. ಸುರೇಶ್, ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಎಂಜಿನಿಯರ್ ತಿಪ್ಪಾರೆಡ್ಡಿ, ಕ್ರೀಡಾ ತರಬೇತುದಾರ ಸುಜಿತ್, ಪವನ್ ಕುಮಾರ್, ಗೋಪಾಲ್, ನಿಲಯ ಪಾಲಕರಾದ ಅರ್ಜುನ್ ದೊರೆ, ಮಂಜುನಾಥ್ ಸೇರಿದಂತೆ ಇನ್ನಿತರರು ಭೇಟಿ ವೇಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X