ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ?: ಡಿಕೆ ಶಿವಕುಮಾರ್ ತರಾಟೆ

Date:

  • ಪೊಲೀಸ್ ಇಲಾಖೆ ಘನತೆ ಹಾಳಾಗಿದ್ದು, ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು’
  • ಉನ್ನತ ಪೊಲೀಸ್ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ವಿದ್ಯಮಾನ ಮಂಗಳವಾರ ನಡೆಯಿತು.

“ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ” ಎಂದು ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಖಡಕ್‌ ಆಗಿಯೇ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

“ಪಿಎಸ್​ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ತಿಳಿಯುತ್ತದೆ. ಪೊಲೀಸ್ ಇಲಾಖೆ ಘನತೆ ಹಾಳಾಗಿದೆ. ಇದು ಮುಂದುವರಿದರೆ ನಾವು ಸಹಿಸುವುದಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು ಅಷ್ಟೇ” ಎಂದರು.

“ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕಿದ್ದರು. ಇದರ ಅರ್ಥವೇನು? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶಾಂತಿ-ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

“ಬಿಜೆಪಿ ಸರ್ಕಾರದಲ್ಲಿ ಏನು ಮಾಡಿದ್ದೀರಿ ಎಂಬುದು ಗೊತ್ತಿದೆ. ನಿಮ್ಮ ಆ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್ಲ. ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆಲ್ಲ ನಡೆದುಕೊಂಡಿದ್ದೀರಿ ಎಂಬುದು ಬಿಡಿಸಿ ಹೇಳಬೇಕಿಲ್ಲ. ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ‌ಏನಾಯ್ತು ಗೊತ್ತಿದೆ. ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಅಂದರೂ ಅವರ ಮೇಲೆ ಕೇಸ್ ಹಾಕಿಲ್ಲ ನೀವು” ಎಂದು ಹರಿಹಾಯ್ದರು.

“ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ, ಅದನ್ನ ಉಳಿಸಿಕೊಳ್ಳಿ. ಜನ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ನೀವು ಯಾರೂ ನಮಗೆ ಹಣ ಕೊಡುವುದು ಬೇಡ. ಉತ್ತಮವಾಗಿ ಕೆಲಸ ಮಾಡಿದರೆ ಸಾಕು” ಎಂದು ಹಿರಿಯ ಪೊಲೀಸರಿಗೆ ಡಿಕೆಶಿ ಸೂಚಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...