ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮಾರ್ಚ್ 2 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಕಾಪುವಿನಲ್ಲಿ ಶ್ರೀ ಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಜಿಲ್ಲಾ ಕಾಂಗ್ರೇಸ್ ಕಚೇರಿಗೆ ಭೇಟಿ ಹಾಗೂ ಜಿಲ್ಲಾ ವಿವಿಧ ನಾಯಕರೊಂದಿಗೆ ಸಭೆ, 3 ಗಂಟೆಗೆ ಕಾರ್ಕಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಿ, ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
