ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

Date:

  • ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ
  • ‘ಪನಿಶ್ಮೆಂಟ್ ಮಾಡೋದು ದೊಡ್ಡ ಕೆಲಸ ಅಲ್ಲ, ಅದಕ್ಕೆ ಆಸ್ಪದ ಕೊಡಬೇಡಿ’

ಆ ಮಂತ್ರಿಗೆ, ಈ ಮಂತ್ರಿಗೆ ಹಾಗೂ ಶಾಸಕರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ. ಸಮಯದ ಮಿತಿ ಇಲ್ಲದೇ ದುಡಿಯಬೇಕು. ನೂರಕ್ಕೆ ನೂರರಷ್ಟು ಬದ್ಧತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೂಚಿಸಿದರು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ, “ಆಡಳಿತಕ್ಕೆ ಚುರುಕು ಮುಟ್ಟಿಸಲು ಒಂದಷ್ಟು ಬದಲಾವಣೆ ಮಾಡುತ್ತೇವೆ. ನಾನೊಬ್ಬನೇ ಏನೊ ಮಾಡುತ್ತೇನೆ ಎಂಬ ಭ್ರಮೆ ಇಲ್ಲ. ನಾವು ನೀವು ಸೇರಿ ಕೆಲಸ ಮಾಡೋಣ” ಎಂದರು.

“ಪನಿಶ್ಮೆಂಟ್ ಮಾಡೋದು ದೊಡ್ಡ ಕೆಲಸ ಅಲ್ಲ. ಅದಕ್ಕೆ ಆಸ್ಪದ ಕೊಡಬೇಡಿ. ಒಳ್ಳೆ ಕೆಲಸ ಮಾಡಿ. ಒಳ್ಳೆ ಹೆಸರು ಪಡೆಯಿರಿ. ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ. ಹಿಂದಿನ ಸರ್ಕಾರದಲ್ಲಿ ಬೇಕಾಬಿಟ್ಟಿಯಾಗಿ ಬೂತ್ ಲೆವೆಲ್ ಆಫೀಸರ್ ಅಂತ ಲೆಟರ್ ಕೊಟ್ರಲ್ಲ, ನಿಮಗೆ ಬುದ್ದಿ ಇರಲಿಲ್ಲವಾ?” ಎಂದು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

“ಯಾರ್‍ಯಾರು ಎಷ್ಟೆಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂಬುದು ಗೊತ್ತಿದೆ. ಈಗ ಬದಲಾವಣೆ ಮಾಡಿಕೊಳ್ಳಿ. ಈ ಸರ್ಕಾರ ಬದಲಾವಣೆ ತಂದಿದೆ ಎಂದು ಜನರಿಗೆ ಮನವರಿಕೆ ಆಗುವಷ್ಟರ ಮಟ್ಟಿಗೆ ಉತ್ತಮವಾಗಿ ಕೆಲಸ ಮಾಡಿ. ನಿಮ್ಮ ಹಾಗೂ ಸರ್ಕಾರದ ಗೌರವ ಉಳಿಸಿ” ಎಂದರು.

ಫೋಟೋ, ವಿಡಿಯೋ ದಾಖಲೆ ಒದಗಿಸಿ

“ಕಳೆದ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಿಧಾನಸಭೆ ಕ್ಷೇತ್ರವಾರು ಆಗಿರುವ ಕೆಲಸ, ಯಾವ ಯೋಜನೆಯಡಿ ಆ ಕೆಲಸ ಆಗಿದೆ, ಅದಕ್ಕೆ ಆಗಿರುವ ಖರ್ಚು ವಿವರ, ಕೆಲಸ ಆಗಿರುವ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆ ಒದಗಿಸಬೇಕು” ಎಂದು ಸೂಚಿಸಿದರು.

“ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗಾರಿಗಳನ್ನು ಯಥಾಸ್ಥಿತಿಯಲ್ಲಿ ತಡೆ ಹಿಡಿಯಬೇಕು. ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕೆಲಸಗಳನ್ನು ತಡೆ ಹಿಡಿಯಬೇಕು. ಯಾವ, ಯಾವ ಕಾಮಗಾರಿಗೆ ಕೆಲಸ ಆಗದಿದ್ದರೂ ಬಿಲ್ ಮಾಡಲಾಗಿದೆ, ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಾಡಲಾಗಿದೆ, ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿದೆ ಎಂಬ ಬಗ್ಗೆ ತನಿಖೆ ಮಾಡಿ 10 ದಿನದೊಳಗೆ ಪಟ್ಟಿ ನೀಡಬೇಕು” ಎಂದು ಅಧಿಕಾರಿಗಳಿಗೆ ಗಡುವು ನೀಡಿದರು.

ಈ ಸುದ್ದಿ ಓದಿದ್ದೀರಾ? ಕೇಂದ್ರದ ಯೋಜನೆ ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟ: ಬೊಮ್ಮಾಯಿ

“ಈ ಮೂಲಕ ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡುತ್ತೇನೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ. ನಾನು ಹಳ್ಳಿಯಿಂದ ಬಂದಿದ್ದರೂ ನನಗೆ ಈ ಬಗ್ಗೆ ಮಾಹಿತಿ ಕೊಡುವವರು ಇದ್ದಾರೆ. ಮಾಹಿತಿ ಪಡೆಯುವ ಶಕ್ತಿಯೂ ನನಗಿದೆ. ಕೆಲಸ ಆಗಿರುವ ಜಾಗಗಳಿಗೆ ಹೋಗಿ ಖುದ್ದು ಪರಿಶೀಲನೆ ಮಾಡೋಣ. ಕಣ್ಣಲ್ಲಿ ಕಂಡಿದ್ದು ಮಾತ್ರವೇ ನಂಬಿಕೆಗೆ ಅರ್ಹ. ಹೀಗಾಗಿ ಕಣ್ಣಲ್ಲಿ ನೋಡಿ ನಂಬೋಣ” ಎಂದರು.

“ರಸ್ತೆ ಮತ್ತಿತರ ಕಾಮಗಾರಿಗಳನ್ನು ಏಜೆನ್ಸಿಗಳ ಮೂಲಕವೇ ಮಾಡುವುದಾದರೆ ಪಾಲಿಕೆಯಲ್ಲಿ ಎಂಜಿನಿಯರ್ ಗಳು ಇರುವುದಾದರೂ ಏಕೆ? ನಿಮ್ಮ ಕೆಲಸವನ್ನು ಬೇರೆ ಯಾರೋ ಮಾಡುವುದಾದರೆ ನೀವು ಇರುವ ಅವಶ್ಯಕತೆ ಇಲ್ಲ” ಎಂದು ಕೆಲವು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

“ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೊರವಲಯದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಬಾರದು. ಹಾಗೇ ತ್ಯಾಜ್ಯ ವಿಲೇವಾರಿ ಮಾಡುವವರ ವಿರುದ್ಧ ದಂಡ ಮತ್ತಿತರ ಕಾನೂನು ಕ್ರಮ ಜರುಗಿಸಬೇಕು. ಒಣ ಮತ್ತು ಹಸಿ ಕಸ ವೈಜ್ಞಾನಿಕ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು. ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು” ಎಂದರು.

“ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿಯಲು ತಡೆಯಾಗಿರುವ ಬಾಟಲ್ ನೆಕ್ ಸ್ಥಳಗಳನ್ನು ಗುರುತಿಸಿ, ಸರಿಪಡಿಸಿ. ಮಳೆ ನೀರು ಸಮಸ್ಯೆಯಿಂದ ನಮಗೆ ಮತ್ತು ನಿಮಗಿಂತ ಹೆಚ್ಚಾಗಿ ಬೆಂಗಳೂರಿಗೇ ಕೆಟ್ಟ ಹೆಸರು ಬರುತ್ತಿದೆ. ಇದನ್ನು ನಿವಾರಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದು. ಬಿಬಿಎಂಪಿ ಸಮುದ್ರ ಇದ್ದಂತೆ. ಎಲ್ಲಿ ತೇಲುತ್ತೇವೆಯೋ, ಎಲ್ಲಿ ಮುಳುಗುತ್ತೇವೆಯೋ ಗೊತ್ತಿಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’...

ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್...

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ...

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...